Home ಜಿಲ್ಲೆ ಕಲಬುರಗಿ ನಿಂಬರ್ಗಾ ಪಿಯು ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ನಿಂಬರ್ಗಾ ಪಿಯು ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಲಬುರಗಿ,ಅ.29: ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದಪದವಿ ಪೂರ್ವ ಕ್ರೀಡಾಕೂಟದಲ್ಲಿ ಅಳಂದ ತಾಲ್ಲೂಕಿನ ನಿಂಬರ್ಗಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಲಕ್ಷ್ಮಿ ಶಿವಾನಂದ ಅವರು 1500 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಹಾಗೂ 100 ಮೀಟರ್ ಓಟದಲ್ಲಿ ಸಚಿನ್ ಯಲ್ಲಾಲಿಂಗ ಅವರು ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಡಾ. ಭೀಮರಾವ್ ಅರಿಕೇರಿ ಅವರು ಅಭಿನಂದಿಸಿ ಕಾಲೇಜಿಗೆ ಕೀರ್ತಿ ತಂದ ಇಬ್ಬರು ವಿದ್ಯಾರ್ಥಿಗಳಿಗೆ ಅಭಿನಂದಿಸಿ ಮುಂದೆ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಹಾಗೂ ಊರಿಗೆ ಹೆಸರು ತರಲಿ ಎಂದು ಆಶಿಸಿದ್ದಾರೆ. ಉಪನ್ಯಾಸಕರಾದ ಮಲ್ಲಿನಾಥ ನಾಟಿಕಾರ್, ರವಿಶಂಕರ್, ವಮ್ಮ ವೆಂಕಟೇಶ್, ತೇಜಶ್ವಿನಿ ಹಾಗೂ ಲಕಪತಿರಾಜ್ ಅವರು ಕ್ರೀಡಾ ಕೂಟದಲ್ಲಿಯ ಸಾಧನೆಗೆ ಶುಭಾಶಯಗಳನ್ನು ಕೋರಿದ್ದಾರೆ.