Home ಜಿಲ್ಲೆ ಕಲಬುರಗಿ ಎಸ್.ಆರ್.ಎನ್. ಮೆಹತಾ ಶಾಲೆಯ ವಿದ್ಯಾರ್ಥಿನಿಯರು ಎಸ್‍ಜಿಎಫ್‍ಐ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಗೆ ಆಯ್ಕೆ

ಎಸ್.ಆರ್.ಎನ್. ಮೆಹತಾ ಶಾಲೆಯ ವಿದ್ಯಾರ್ಥಿನಿಯರು ಎಸ್‍ಜಿಎಫ್‍ಐ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಗೆ ಆಯ್ಕೆ

ಕಲಬುರಗಿ,ನ.25-ನಗರದ ಎಸ್.ಆರ್.ಎನ್. ಮೆಹತಾ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಬೆಂಗಳೂರಿನ ದೇವನಹಳ್ಳಿಯಲ್ಲಿ ದಿನಾಂಕ 21 ಮತ್ತು 22ರಂದು ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಎಸ್.ಆರ್.ಎನ್. ಮೆಹತಾ ಶಾಲೆಯ
ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಈ ಸ್ಪರ್ಧೆಯಲ್ಲಿ ಕುಮಾರಿ ಎಸ್ತರ್ ರಾಣಿ ಅವರು ಬಾಲಕಿಯರ – 32 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಕುಮಾರಿ ಜಾನ್ವಿ ಅವರು – 52 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಈ ಇಬ್ಬರು ವಿದ್ಯಾರ್ಥಿನಿಯರು ಡಿಸೆಂಬರ್ 7 ರಿಂದ 11ರವರೆಗೆ ಮಧ್ಯಪ್ರದೇಶದಲ್ಲಿ ನಡೆಯಲಿರುವ ಎಸ್‍ಜಿಎಫ್‍ಐ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿದ್ದು, ಶಾಲೆ ಹಾಗೂ ಕಲಬುರಗಿ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯ ಟ್ರಸ್ಟಿಗಳಾದ ಚಕೂರ್ ಮೆಹತಾ, ಪ್ರಾಂಶುಪಾಲರಾದ ಪ್ರೀತಿ ಮೆಹತಾ, ಶಾಲೆಯ ಆಡಳಿತ ಮಂಡಳಿ , ದೈಹಿಕ ಶಿಕ್ಷಣದ ಮುಖ್ಯಸ್ಥರಾದ ಬಸವರಜ ತಳಕೇರಿ, ಕರಟಾ ತರಬೇತುದಾರರಾದಕೃಷ್ಣಾ ಗೌಳಿ ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.