
ವಾಡಿ: ಏ.29:ತಾಲೂಕಿನ ಲಾಡ್ಲಾಪುರ ಗ್ರಾಪಂ ವ್ಯಾಪ್ತಿಯ ಡಿಗ್ಗಿ ತಾಂಡಾ ಪ್ರದೇಶದಲ್ಲಿರುವ ಕೊಂಚೂರು ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಂಬೇಡ್ಕರ್ ವೇಷದಲ್ಲಿ ಮಿಂಚಿ ಗಮನ ಸೆಳೆದರು.
ಮಂಗಳವಾರ ಶಾಲೆಯಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಸುನಿಲ್ ಕುಮಾರ್ ಬಾಲಾರ ಹಾಗೂ ಶಿಕ್ಷಕರು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಪ್ರಾಂಶುಪಾಲ ಸುನಿಲ್ ಕುಮಾರ್ ಬಾಲಾರ, ಸಂವಿಧಾನದ ಡಾ.ಅಂಬೇಡ್ಕರ್ ಜಯಂತಿ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಆದರ್ಶಗಳ ಪ್ರಬಲ ನಿಲುವಾಗಿದೆ. ಈ ದಿನವು ಡಾ. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಷ್ಟೇ ಅಲ್ಲ, ಎಲ್ಲರನ್ನೂ ಒಳಗೊಳ್ಳುವ ನ್ಯಾಯಯುತ ಸಮಾಜವನ್ನು ನಿರ್ಮಿಸುವ ಬದ್ಧತೆಯಾಗಿದೆ. ಜಾತಿ ತಾರತಮ್ಯ, ಸಾಮಾಜಿಕ ಅನ್ಯಾಯ ಮತ್ತು ಅಸಮಾನತೆಯ ವಿರುದ್ಧ ಅವರ ಗಮನಾರ್ಹ ಹೋರಾಟವು ಯುವ ಪೀಳಿಗೆಗಳ ಮೇಲೆ ಪ್ರಭಾವ ಬೀರಿದೆ ಎಂದರು.
ನಿಲಯ ಪಾಲಕರು, ಸಹ ಶಿಕ್ಷಕರು ಹಾಗೂ ಪೆÇೀಷಕರು ಭಾಗವಹಿಸಿದ್ದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.






















