ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಂಸ್ಕಾರವAತರಾಗಬೇಕು.ಡಾ.ವೈ.ವೈ. ಕೊಕ್ಕನವರ

ಸಂಜೆ ವಾಣಿ ವಾರ್ತೆ
ಜಮಖಂಡಿ:ಜ.೧೯: ಭಾರತೀಯ ಸಂಸ್ಕೃತಿ ಬಹಳ ಶ್ರೀಮಂತವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಮೊಬೈಲ್ ಫೋನ್‌ನಿಂದ ದೂರವಿದ್ದು ಗುಣಮಟ್ಟದ ಶಿಕ್ಷಣ ಪಡೆಯುವುದರ ಜೊತೆಗೆ ಸಂಸ್ಕಾರವAತರಾಗಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ವೈ.ವೈ. ಕೊಕ್ಕನವರ ಹೇಳಿದರು.
ಸ್ಥಳೀಯ ಬಸವಜ್ಯೋತಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು ಶನಿವಾರ ಸಂಜೆ ಏರ್ಪಡಿಸಿದ್ದ ೨೦೨೫-೨೬ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಗುರಿ ಮತ್ತು ಉದ್ದೇಶ ಸ್ಪಷ್ಟವಾಗಿರಬೇಕು. ವಿವೇಕ, ಸಮಯ ಪ್ರಜ್ಞೆ ಬೆಳೆಸಿಕೊಂಡು ಗುರಿ ಸಾಧಿಸುವ ಆತ್ಮವಿಶ್ವಾಸ ಮೈಗೂಡಿಸಿಕೊಳ್ಳಬೇಕು. ವಿಶೇಷ ಸಾಧನೆ ಮಾಡುವ ಮೂಲಕ ತಂದೆ-ತಾಯಿಗಳ, ಕಲಿತ ಶಿಕ್ಷಣ ಸಂಸ್ಥೆಯ ಹಾಗೂ ಕಲಿಸಿದ ಶಿಕ್ಷಕರ ಪ್ರೀತಿಗೆ ಪಾತ್ರರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಬಸವಜ್ಯೋತಿ ಶಿಕ್ಷಣ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ.ಬಸವರಾಜ ಕಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮನಸ್ಸಿನ ಏಕಾಗ್ರತೆ ರೂಢಿಸಿಕೊಂಡು ನಿರಂತರ ಪ್ರಯತ್ನ ಮಾಡಿದರೆ ಮಾತ್ರ ಏನಾದರೂ ಸಾಧನೆ ಸಾಧ್ಯ ಎಂದರು.
ಉಪಪ್ರಾಚಾರ್ಯ ಶ್ರೀಕಾಂತ ಬೆಳ್ಳಿಹಾಳ, ಉಪನ್ಯಾಸಕ ಪಿ.ಎನ್. ವಜ್ಜರಮಟ್ಟಿ ಮಾತನಾಡಿದರು. ವಿದ್ಯಾರ್ಥಿಗಳಾದ ದೀಪಾ ಗಳವೆ, ಗುರುಪ್ರಸಾದ ಕಲಮಡಿ, ಪ್ರಿಯಾಂಕಾ ಕಟವಾಣಿ, ಅಂಜನಾ ಮುದ್ದಾಪುರ, ಸಿದ್ಧಾರ್ಥ ಕುಂಬಾರ ತಮ್ಮ ಅನಿಸಿಕೆ ಹಂಚಿಕೊAಡರು.
ಪಲ್ಲವಿ ಹೂಗಾರ ಹಾಗೂ ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. ಸಂಸ್ಥೆಯ ಅಧ್ಯಕ್ಷ ಡಾ.ಗಿರೀಶ ಕಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೌಜನ್ಯ ಚೋಗುಲೆ, ಪ್ರಜ್ಞಾ ಶಿರೋಳ, ಮೀರಾ ವಜ್ಜರಮಟ್ಟಿ ನಿರೂಪಿಸಿದರು. ಅಶ್ವಿನಿ ಕುಂಬಾರ ವಂದಿಸಿದರು.