Home ಜಿಲ್ಲೆ ಸಮಯ ವ್ಯರ್ಥ ಮಾಡದೇ ವಿದ್ಯಾರ್ಥಿಗಳು ಓದಿನತ್ತ ಗಮನ ನೀಡಿ

ಸಮಯ ವ್ಯರ್ಥ ಮಾಡದೇ ವಿದ್ಯಾರ್ಥಿಗಳು ಓದಿನತ್ತ ಗಮನ ನೀಡಿ

ನವಲಗುಂದ,ಜೂ೧೧: ಮೌಲ್ಯಾಧಾರಿತ ಶಿಕ್ಷಣ ಇಂದಿನ ವಿದ್ಯಾರ್ಥಿಗಳಿಗೆ ಬಹಳ ಮುಖ್ಯವಾಗಿ ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೇ ಹೆಚ್ಚು ಹೆಚ್ಚು ಪುಸ್ತಕಗಳನ್ನ ಓದಿನತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್ ಹೇಳಿದರು.

ತಾಲ್ಲೂಕಿನ ಗುಮ್ಮಗೋಳ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಬುಧವಾರ ಭೇಟಿ ನೀಡಿದ ವೇಳೆ ಮಾತನಾಡಿದ ಅವರು ಶಿಕ್ಷಕರು ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ, ಅವರ ಕಲಿಕೆಗೆ ಒತ್ತು ನೀಡಬೇಕು ಎಂದರು.

ಶಿಕ್ಷಕರು ಶಾಲೆಗೆ ಗೈರು ಹಾಜರಾಗುವ ಮಕ್ಕಳ ಮನೆಗೆ ಭೇಟಿ ನೀಡಿ, ಮನವೊಲಿಸಿ ಶಾಲೆಗೆ ಹಾಜರಾಗಲು ತಿಳಿಸಬೇಕು ಎಂದರು. ನಂತರ ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿ ಊಟ ಸವಿದರು.

ಪ್ರೊಫೆಷನರಿ ಐ,ಎ,ಎಸ್. ಅಧಿಕಾರಿ ಅನುಪಮಾ, ತಹಶೀಲ್ದಾರ ಸುಧೀರ್ ಸಾಹುಕಾರ, ಶಾಲಾ ಮುಖ್ಯೋಪಾಧ್ಯಾಯರು ಸಹ ಶಿಕ್ಷಕರು ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮಸ್ಥರು. ಇದ್ದರು.