Home ಜಿಲ್ಲೆ ಕಲಬುರಗಿ ಕ್ಷಯರೋಗ ಮುಕ್ತ ಭಾರತಕ್ಕೆ ವಿದ್ಯಾರ್ಥಿಗಳು ಕೈಜೋಡಿಸಿ : ಪ್ರೊ. ಬಟ್ಟು ಸತ್ಯನಾರಾಯಣ

ಕ್ಷಯರೋಗ ಮುಕ್ತ ಭಾರತಕ್ಕೆ ವಿದ್ಯಾರ್ಥಿಗಳು ಕೈಜೋಡಿಸಿ : ಪ್ರೊ. ಬಟ್ಟು ಸತ್ಯನಾರಾಯಣ

ಕಲಬುರಗಿ,ಅ.16: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕ್ಷಯರೋಗ ಮುಕ್ತ ಭಾರತ ಅಭಿಯಾನ ಸಮಿತಿಯು ಜೀವವಿಜ್ಞಾನ ನಿಕಾಯದಲ್ಲಿ ಕ್ಷಯರೋಗ ಜಾಗೃತಿ ಉಪನ್ಯಾಸ ಹಾಗೂ ಬಹುಮಾನ ವಿತರಣಾ ಸಮಾರಂಭವನ್ನು ಆಯೋಜಿಸಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪೆÇ್ರ. ಬಟ್ಟು ಸತ್ಯನಾರಾಯಣ ಅವರು ಮಾತನಾಡಿ, ಪ್ರಧಾನಮಂತ್ರಿಯವರ ನೇತೃತ್ವದಲ್ಲಿ ಆರಂಭಿಸಲಾದ ಕ್ಷಯರೋಗ ನಿರ್ಮೂಲನಾ ಅಭಿಯಾನಕ್ಕೆ ವಿದ್ಯಾರ್ಥಿಗಳು ಸಕ್ರಿಯವಾಗಿ ಕೈಜೋಡಿಸಬೇಕು ಎಂದು ಕರೆ ನೀಡಿದರು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಕ್ಷಯರೋಗ ಪೀಡಿತರಿಗೆ ನೆರವು ನೀಡುವುದು ಹಾಗೂ ಕ್ಷಯರೋಗ ಮುಕ್ತ ಭಾರತ ನಿರ್ಮಾಣದಲ್ಲಿ ಸಮುದಾಯದ ಭಾಗವಹಿಸುವಿಕೆಯನ್ನು ಉತ್ತೇಜಿಸುವಂತೆ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಲಬುರಗಿಯ ಇಎಸ್‍ಐಸಿ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ. ರೇವಣಸಿದ್ದ ಎಸ್. ಎ. ಅವರು ಮುಖ್ಯ ಭಾಷಣಕಾರರಾಗಿ ಮಾತನಾಡಿ, ಕ್ಷಯರೋಗದ ಹರಡುವಿಕೆ, ರೋಗಲಕ್ಷಣಗಳು, ತಡೆಗಟ್ಟುವಿಕೆ, ಆರಂಭಿಕ ಪತ್ತೆ ಮತ್ತು ಚಿಕಿತ್ಸೆಯ ಕುರಿತು ಮಾಹಿತಿ ನೀಡಿದರು. ಕ್ಷಯರೋಗದ ಕುರಿತಾದ ತಪ್ಪು ಕಲ್ಪನೆಗಳನ್ನು ನಿವಾರಿಸಲು, ಸಾಮಾಜಿಕ ಕಳಂಕವನ್ನು ಕಡಿಮೆ ಮಾಡಲು ಹಾಗೂ ಸಮುದಾಯದಲ್ಲಿ ಜಾಗೃತಿ ಮೂಡಿಸಲು ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ಕರೆ ನೀಡಿದರು. ‘ನಿ-ಕ್ಷಯ ಮಿತ್ರ’ ಉಪಕ್ರಮದ ಕುರಿತು ವಿವರಿಸಿದ ಅವರು, ವೈದ್ಯರು ಸೂಚಿಸಿದ ಚಿಕಿತ್ಸೆಯನ್ನು ಪೂರ್ಣಗೊಳಿಸುವ ಮಹತ್ವವನ್ನು ಒತ್ತಿಹೇಳಿದರು.
ಜಾಗೃತಿ ಅಭಿಯಾನದ ಅಂಗವಾಗಿ ಆಯೋಜಿಸಲಾಗಿದ್ದ ಪೆÇೀಸ್ಟರ್ ರಚನೆ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಕುಲಪತಿಗಳು ಹಾಗೂ ಗಣ್ಯರು ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿತರಿಸಿದರು. ಬಳಿಕ ಕುಲಪತಿಗಳು, ಬೋಧಕ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕ್ಷಯರೋಗ ಮುಕ್ತ ಭಾರತದ ನಿರ್ಮಾಣಕ್ಕೆ ಬೆಂಬಲ ನೀಡುವ ಪ್ರತಿಜ್ಞೆ ಸ್ವೀಕರಿಸಿದರು.
ಕ್ಷಯರೋಗ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮದ ನೋಡಲ್ ಅಧಿಕಾರಿ ಹಾಗೂ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕೃಷ್ಣ ಚೈತನ್ಯ ಸ್ವಾಗತಿಸಿದರು. ಡಾ. ಸ್ವಾತಿ ಬನಪುರಂ ವಂದನಾರ್ಪಣೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಡಾ. ಕವಿಶಂಕರ್ ಗಾವ್ಲಿ, ಡಾ. ರಸ್ಮಿತಾ ಸಮಲ್, ಡಾ. ಸಿನಮ್ ಸಿಂಗ್, ಡಾ. ರಾಕೇಶ್ ಕುಮಾರ್, ಡಾ. ಪ್ರಶಾಂತ್ ಕುಮಾರ್, ಡಾ. ಪ್ರಭಂಜನ ಗಾಯಿ ಮತ್ತು ಡಾ. ಬುಚಿ ರೆಡ್ಡಿ ಸೇರಿದಂತೆ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮ ವಂದೇಮಾತರಂ ಗಾಯನದೊಂದಿಗೆ ಆರಂಭವಾಗಿ ರಾಷ್ಟ್ರಗೀತೆಯೊಂದಿಗೆ ಮುಕ್ತಾಯವಾಯಿತು.