ಕಲಬುರಗಿ;ಸೆ.10: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶರಣಬಸವ ವಿಶ್ವವಿದ್ಯಾಲಯದ ವಿವಿಧ ಪದವಿಪೂರ್ವ ಕೋರ್ಸ್‍ಗಳಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳು ಚೆನ್ನಾಗಿ ಅಭ್ಯಾಸ ಮಾಡಿ ಒಳ್ಳೆಯ ಭವಿಷ್ಯವನ್ನು ರೂಪಿಸಕೊಳ್ಳಿ ಹಾಗೂ ತಮ್ಮ ಉಜ್ವಲ ಶೈಕ್ಷಣಿಕ ಮತ್ತು ವೃತ್ತಿಪರ ವೃತ್ತಿಜೀವನಕ್ಕೆ ಈ ಅವಕಾಶವನ್ನು ಒಂದು ಆರಂಭಿಕ ವೇದಿಕೆಯಾಗಿ ಬಳಸಿಕೊಳ್ಳಬೇಕೆಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಶರಣಬಸವ ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವಿವಿಧ ಪದವಿಪೂರ್ವ ಕಾರ್ಯಕ್ರಮಗಳಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗಾಗಿ ಎಂಟು ದಿನಗಳ ಕಾಲ ನಡೆಯುವ “ದೀಕ್ಷಾರಂಭ-2025-26” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ದೇಶಮುಖ, ಈ ವಿಶ್ವವಿದ್ಯಾಲಯವು ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ, ವಿದ್ಯಾರ್ಥಿಗಳಿಗೆ ಅವರ ಕೋರ್ಸ್ ಅವಧಿಯಲ್ಲಿ ಪ್ರಾಯೋಗಿಕ ತರಬೇತಿಯೊಂದಿಗೆ ಕೌಶಲ್ಯಪೂರ್ಣಗೊಳಿಸುವ ಮತ್ತು ಅವರನ್ನು ಉದ್ಯಮಕ್ಕೆ ಸಿದ್ಧಗೊಳಿಸುವ ಹೊಸ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ ಶೈಕ್ಷಣಿಕ ವಲಯದಲ್ಲಿ ಒಂದು ಛಾಪು ಮೂಡಿಸಿದೆ ಎಂದರು.
ವಿದ್ಯಾರ್ಥಿಗಳಿಗೆ ಕೈಗೆಟುಕುವ ವೆಚ್ಚದಲ್ಲಿ ಬಹುಶಿಸ್ತೀಯ ಕೋರ್ಸ್‍ಗಳನ್ನು ನೀಡುವ ಶ್ರೀಮಂತ ಪರಂಪರೆಯನ್ನು ಶರಣಬಸವ ವಿಶ್ವವಿದ್ಯಾಲಯ ಹೊಂದಿದೆ ಮತ್ತು ಪ್ರತಿಷ್ಠಿತ ಕೈಗಾರಿಕೆಗಳಲ್ಲಿ ವ್ಯಾಪಕವಾದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಶ್ಲಾಘನೀಯ ದಾಖಲೆಯನ್ನು ಹೊಂದಿದೆ ಎಂದು ಅವರು ತಿಳಿಸಿದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘವು 200 ವರ್ಷಗಳಿಗೂ ಹೆಚ್ಚು ಕಾಲ ಸಾಮಾಜಿಕ ಮತ್ತು ಸ್ವಾರ್ಥರಹಿತ ಸೇವೆ ಸಲ್ಲಿಸಿದ ಭವ್ಯ ಇತಿಹಾಸವನ್ನು ಹೊಂದಿದೆ. 1934 ರಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಮೊದಲ ಪ್ರಾಥಮಿಕ ಶಾಲೆಯನ್ನು ಪ್ರಾರಂಭಿಸುವ ಗೌರವವನ್ನು ಹೊಂದಿದೆ. 8ನೇ ಮಹಾದಾಸೋಹ ಪೀಠಾಧಿಪತಿ ಮತ್ತು ಶರಣಬಸವ ವಿಶ್ವವಿದ್ಯಾಲಯದ ಸಂಸ್ಥಾಪಕ ಕುಲಾಧಿಪತಿಗಳಾದ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಮಹಿಳೆಯರಿಗಾಗಿ ವಿಶೇಷ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸಿದ್ದಾರೆ. ಇಡೀ ಉತ್ತರ ಕರ್ನಾಟಕದಲ್ಲಿ ಮೊದಲ ಖಾಸಗಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವುದು ಸೇರಿದಂತೆ ಶಿಕ್ಷಣ ಸಂಸ್ಥೆಗಳ ಸರಪಣಿಯನ್ನು ಪ್ರಾರಂಭಿಸುವ ಪ್ರಾಥಮಿಕ ಮೂಲಕ ಶೈಕ್ಷಣಿಕ ಕ್ಷೇತ್ರವನ್ನು ಶ್ರೀಮಂತವಾಗಿಸಿದ್ದಾರೆ.
ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪೆÇ್ರ. ಅನಿಲಕುಮಾರ ಬಿಡವೆ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಉನ್ನತ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದರು ಮತ್ತು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‍ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು, ತಮ್ಮ ಶೈಕ್ಷಣಿಕ ಮತ್ತು ವೃತ್ತಿಪರ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳಬೇಕು. 2047 ರ ವೇಳೆಗೆ ದೇಶವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಮಾಡುವ ಪ್ರಯತ್ನಗಳಲ್ಲಿ ತಾವು ಕೂಡ ಭಾಗವಹಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಶೇಕಡಾ 80ರಷ್ಟು ಹೆಚ್ಚಿನ ಒಟ್ಟು ದಾಖಲಾತಿ ಅನುಪಾತ (ಉಇಖ) ಹೊಂದಿರುವ ಅಮೆರಿಕ ಮತ್ತು ಯುರೋಪಿಯನ್ ರಾಷ್ಟ್ರಗಳು ತಮ್ಮ ಉನ್ನತ ಜ್ಞಾನದ ಮೂಲದೊಂದಿಗೆ ಇತರ ರಾಷ್ಟ್ರಗಳಿಗಿಂತ ಮುಂದೆ ಸಾಗಿವೆ ಭಾರತದ ಉಇಖ ಸುಮಾರು 30 ರಿಂದ 35 ಪ್ರತಿಶತವಾಗಿದೆ. ಕರ್ನಾಟಕದ ಉಇಖ ಸುಮಾರು 29 ಪ್ರತಿಶತವಿದೆ. ತಮಿಳುನಾಡು ಶೇಕಡಾ 50ಕ್ಕಿಂತ ಹೆಚ್ಚು ಒಟ್ಟು ದಾಖಲಾತಿ ಅನುಪಾತದೊಂದಿಗೆ ಅಗ್ರಸ್ಥಾನದಲ್ಲಿದೆ. “ಕಲ್ಯಾಣ ಕರ್ನಾಟಕ ಪ್ರದೇಶದ ಉಇಖ ಇನ್ನೂ ಶೇಕಡಾ 20 ರಷ್ಟಿದೆ. ನಿಮ್ಮ ಭವಿಷ್ಯ ಮತ್ತು ದೇಶದ ಭವಿಷ್ಯವನ್ನು ಬೆಳಗಿಸಲು ನೀವು ಉನ್ನತ ಶಿಕ್ಷಣದ ಪೆÇೀರ್ಟಲ್‍ಗಳನ್ನು ಪ್ರವೇಶಿಸಲು ಹಾಗೂ ಈ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಅವಕಾಶವನ್ನು ಪಡೆದ ನೀವೆ ಅದೃಷ್ಟವಂತರು” ಎಂದು ಪ್ರೊ. ಬಿಡವೆ ತಿಳಿಸಿದರು.
ಶರಣಬಸವ ವಿಶ್ವವಿದ್ಯಾಲಯವು ಕೋರ್ಸ್ ಅವಧಿಯಲ್ಲಿ ಇಂಟರ್ನ್‍ಶಿಪ್ ಕಡ್ಡಾಯಗೊಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿಯನ್ನು ನೀಡುವ ಮೊದಲ ವಿಶ್ವವಿದ್ಯಾಲಯವಾಗಿದೆ. ಸ್ಟೈಫಂಡ್‍ಗಳನ್ನು ನೀಡುವ ಕಂಪನಿಗಳೊಂದಿಗೆ, ವಿದ್ಯಾರ್ಥಿಗಳು ತಮ್ಮ ಇಂಟರ್ನ್‍ಶಿಪ್ ಕಾರ್ಯಕ್ರಮದ ಸಮಯದಲ್ಲಿ ವಿದ್ಯಾರ್ಥಿ ಜೀವನದಲ್ಲಿಯೇ ಹಣ ಗಳಿಸಲು ಸಹಾಯ ಮಾಡುತ್ತದೆ. ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ಹಾಗೂ ಡಾಟಾ ಸೈನ್ಸಸ್ ಮತ್ತು ಇತರ ಭವಿಷ್ಯದ ಕೋರ್ಸ್‍ಗಳಂತಹ ಭವಿಷ್ಯದ ಸವಾಲುಗಳನ್ನು ಎದುರಿಸಲು ಹೊಸ ಕೋರ್ಸ್‍ಗಳನ್ನು ಪರಿಚಯಿಸಿದ ಕೆಲವೇ ವಿಶ್ವವಿದ್ಯಾಲಯಗಳಲ್ಲಿ ಈ ವಿಶ್ವವಿದ್ಯಾಲಯವೂ ಒಂದು ಎಂದು ಪೆÇ್ರ. ಬಿಡವೆ ಹೇಳಿದರು.
ವಿಶ್ವವಿದ್ಯಾಲಯದ ಕುಲಸಚಿವ ಡಾ. ಎಸ್. ಜಿ. ಡೊಳ್ಳೇಗೌಡರ್ ವಿಶ್ವವಿದ್ಯಾಲಯದ ಬಗ್ಗೆ ಮತ್ತು ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಲಭ್ಯವಿರುವ ಸೌಲಭ್ಯಗಳ ಬಗ್ಗೆ ವಿವರವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡೀನ್ ಡಾ. ಲಕ್ಷ್ಮಿ ಪಾಟೀಲ್ ಮಾಕಾ ಸ್ವಾಗತಿಸಿದರು. ಪೂಜ್ಯ ಡಾ. ಅಪ್ಪಾಜಿಯವರ ಘಟನಾತ್ಮಕ ಜೀವನದ ವಿವರವಾದ ಒಳನೋಟವನ್ನು ಒದಗಿಸುವ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರಿಗೆ ಗೌರವ ಸಲ್ಲಿಸುವ ವೀಡಿಯೊವನ್ನು “ದೀಕ್ಷಾರಂಭ-2025-26” ಕಾರ್ಯಕ್ರಮದ ಭಾಗವಾಗಿ ಪ್ರದರ್ಶಿಸಲಾಯಿತು.

























