Home ಜಿಲ್ಲೆ ಬೆಂಗಳೂರು ಸುವರ್ಣ ಸೆಂಟ್ರಲ್ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಸನ್ಮಾನ

ಸುವರ್ಣ ಸೆಂಟ್ರಲ್ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಸನ್ಮಾನ

ಕೋಲಾರ,ಜೂ.೧೫- ೨೦೨೫-೨೬ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸುವರ್ಣ ಸೆಂಟ್ರಲ್ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.
ಶಾಲಾ ಪ್ರಥಮ ಸ್ಥಾನ ಮೌಲ್ಯ ಎಸ್ (೬೧೭), ದ್ವಿತೀಯ ಸ್ಥಾನ ದ್ರವ್ಯ ಯು(೬೧೬), ತೃತೀಯ ಸ್ಥಾನ ಚಹನ ಡಿ (೬೦೮) ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ,


ಇದೇ ಸಂದರ್ಭದಲ್ಲಿ ಪ್ರಥಮ ಭಾಷೆ ಕನ್ನಡ ವಿಷಯದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಗಳಿಸಿ ವಿಶೇಷ ಸಾಧನೆ ಮಾಡಿದ ದ್ರವ್ಯ, ಮೌಲ್ಯ ಮತ್ತು ಧನುಶ್ರೀಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.


ಸನ್ಮಾನಿತರಾದ ವಿದ್ಯಾರ್ಥಿಗಳು ಪ್ರಸ್ತುತ ೧೦ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಅಂಕಗಳನ್ನು ಗಳಿಸಲು ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಲು ಅಗತ್ಯವಾದ ಸಲಹೆಗಳನ್ನು ನೀಡಿ ಪ್ರೋತ್ಸಾಹಿಸಿದರು.


ಈ ವೇಳೆ ಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿಗಳು, ಮುಖ್ಯೋಪಾಧ್ಯಾಯರು, ಶಿಕ್ಷಕರು ಮತ್ತು ಪೋಷಕರು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿ ಶುಭ ಹಾರೈಸಿದರು.