
ಹುಳಿಯಾರು, ಜೂ. ೬- ಹೋಬಳಿಯ ದಸೂಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೬-೨೭ನೇ ಸಾಲಿನ ಶೈಕ್ಷಣಿಕ ವರ್ಷದ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಣಾ ಕಾರ್ಯಕ್ರಮವು ಅತ್ಯಂತ ಉತ್ಸಾಹದಿಂದ ನಡೆಯಿತು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಗೋವರ್ಧನ ಅವರು ವಿದ್ಯಾಥಿರ್ಚಿಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಆರ್.ಎಸ್.ಮಹಾಲಿಂಗಯ್ಯ, ಸರ್ಕಾರಿ ಶಾಲೆಗಳು ಪ್ರಸ್ತುತ ಅತ್ಯುತ್ತಮ ಮೂಲ ಸೌಕರ್ಯಗಳನ್ನು ಹೊಂದಿವೆ. ನುರಿತ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ, ಸರ್ಕಾರ ಉಚಿತ ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಪೌಷ್ಟಿಕ ಮಧ್ಯಾಹ್ನದ ಬಿಸಿಯೂಟದಂತಹ ಅನೇಕ ಸೌಲಭ್ಯಗಳನ್ನು ಕಲ್ಪಿಸಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ, ಸರ್ಕಾರದ ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ಸಹ ಶಿಕ್ಷಕಿಯರಾದ ಮಧು, ಜಯಲಕ್ಷ್ಮಿ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ಉಪಸ್ಥಿತರಿದ್ದರು.


































