Home ಜಿಲ್ಲೆ ಕಲಬುರಗಿ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆಅಧ್ಯಯನ,ಸಂಶೋಧನೆ ಆಧಾರವಾಗಲಿ: ಪ್ರೊ.ಬಟ್ಟು ಸತ್ಯನಾರಾಯಣ

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆಅಧ್ಯಯನ,ಸಂಶೋಧನೆ ಆಧಾರವಾಗಲಿ: ಪ್ರೊ.ಬಟ್ಟು ಸತ್ಯನಾರಾಯಣ

ಕಲಬುರಗಿ,ಸೆ.18: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ) ದಲ್ಲಿ ಹೈದರಾಬಾದ್-ಕರ್ನಾಟಕ ಪ್ರದೇಶವು ಭಾರತೀಯ ಒಕ್ಕೂಟದೊಂದಿಗೆ ವಿಲೀನಗೊಂಡ ಐತಿಹಾಸಿಕ ಘಟನೆಯನ್ನು ಸ್ಮರಿಸುವ ನಿಟ್ಟಿನಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ವಿಶ್ವವಿದ್ಯಾಲಯದ ಕುಲಪತಿ ಪೆÇ್ರ. ಬಟ್ಟು ಸತ್ಯನಾರಾಯಣ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಏಕೀಕರಣದ ಪಿತಾಮಹ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕುಲಪತಿ ಪೆÇ್ರ. ಬಟ್ಟು ಸತ್ಯನಾರಾಯಣ ಅವರು, 1947ರ ಆಗಸ್ಟ್ 15ರಂದು ದೇಶವು ಸ್ವಾತಂತ್ರ್ಯ ಪಡೆದರೂ, ಹೈದರಾಬಾದ್ ಸಂಸ್ಥಾನದ ನಿಜಾಮರ ಆಳ್ವಿಕೆಗೆ ಒಳಪಟ್ಟಿದ್ದ ಈ ಪ್ರದೇಶವು 1948ರ ಸೆಪ್ಟೆಂಬರ್ 17ರಂದು ಭಾರತ ಒಕ್ಕೂಟಕ್ಕೆ ವಿಲೀನಗೊಂಡಿತು. ಹೈದ್ರಾಬಾದಿನ ಪ್ರಾಂತ್ಯದ ನಿಜಾಮರ ದಬ್ಬಾಳಿಕೆ ಮತ್ತು ದೌರ್ಜನ್ಯದ ವಿರುದ್ಧ ನಡೆದ ಗೋರಾಟ ಸೇರಿದಂತೆ ವಿವಿಧ ಹೋರಾಟಗಳಲ್ಲಿ ಭಾಗವಹಿಸಿದ ಅಪ್ರತಿಮ ದೇಶಭಕ್ತರು ಹಾಗೂ ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಈ ಪ್ರದೇಶವು ಭಾರತದ ಭಾಗವಾಯಿತು. ಈ ಸುದಿನವು ಕಲ್ಯಾಣ ಕರ್ನಾಟಕದ ಇತಿಹಾಸದಲ್ಲಿ ಒಂದು ಮಹತ್ವದ ಮೈಲಿಗಲ್ಲಾಗಿದೆ ಎಂದು ಅವರು ಸ್ಮರಿಸಿದರು. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯಲ್ಲಿ ನಮ್ಮ ವಿ.ವಿ.ಯ ಪಾತ್ರವು ಮಹತ್ವದ್ದಾಗಿದೆ ಎಂದು ಹೇಳಿದರು.
ಈ ಭಾಗದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸೇರಿದಂತೆ ಸಮಗ್ರ ಅಭಿವೃದ್ಧಿಯ ಪ್ರಗತಿಗೆ ವಿಶ್ವವಿದ್ಯಾಲಯವು ತನ್ನದೇ ಆದ ಕೊಡುಗೆ ನೀಡಬೇಕಾಗಿದೆ. ಕಲ್ಯಾಣ ಕರ್ನಾಟಕದ ಹಿಂದುಳಿಯುವಿಕೆಗೆ ಕಾರಣವಾಗಿರುವ ಅಂಶಗಳನ್ನು ವಿ.ವಿ.ಯ ಪ್ರಾಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ವೈಜ್ಞಾನಿಕ ನೆಲೆಯಲ್ಲಿ, ಪರಿಣಾಮಕಾರಿಯಾಗಿ ಅಧ್ಯಯನ ಹಾಗೂ ಸಂಶೋಧನೆಯ ಮೂಲಕ ಗುರುತಿಸಿ, ಅವುಗಳ ಆಧಾರದ ಮೇಲೆ ಸೂಕ್ತ ವರದಿಗಳನ್ನು ಸರ್ಕಾರಗಳಿಗೆ ಸಲ್ಲಿಸುವ ಮೂಲಕ ನೀತಿ ರೂಪಣೆಗೆ ನಾವೆಲ್ಲರೂ ಶ್ರಮವಹಿಸಬೇಕಾಗಿದೆ.
`ಈ ಸಂಶೋಧನಾ ಆಧಾರಿತ ಅಧ್ಯಯನಗಳು, ವರದಿಗಳು ಸರ್ಕಾರದ ಅಧಿಕೃತ ನೀತಿ-ನಿರೂಪಣೆಗಳಾಗಿ ರೂಪುಗೊಂಡು ಈ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಇನ್ನಷ್ಟು ವೇಗ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯವು ತನ್ನ ಸಾಮಾಜಿಕ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಈ ಭಾಗದ ಅಭಿವೃದ್ಧಿಗೆ ಕೊಡುಗೆ ನೀಡೋಣ ಎಂದು ಹೇಳಿದರು.
ವಿಶ್ವವಿದ್ಯಾಲಯದ ಕುಲಸಚಿವ ಪೆÇ್ರ. ಆರ್.ಆರ್. ಬಿರಾದಾರ್ ಮಾತನಾಡಿ, ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಸುಮಾರು 7ಜಿಲ್ಲೆಗಳಿದ್ದು, ಪ್ರತಿಯೊಂದು ಜಿಲ್ಲೆಯೂ ತನ್ನದೇ ಆದ ನೈಸರ್ಗಿಕ ಸಂಪನ್ಮೂಲಗಳು ಹಾಗೂ ವೈಶಿಷ್ಟ್ಯತೆಗಳನ್ನು ಹೊಂದಿದೆ. ಕರ್ನಾಟಕದ ಮೈಸೂರು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಬೆಂಗಳೂರು ಹಾಗೂ ಕರಾವಳಿ ಸೇರಿದಂತೆ ಪ್ರತಿಯೊಂದು ಪ್ರದೇಶವೂ ತನ್ನದೇ ಆದ ಶಕ್ತಿ-ಸಾಮಥ್ರ್ಯವನ್ನು ಹೊಂದಿದೆ. ನಮ್ಮ ಕಲ್ಯಾಣ ಕರ್ನಾಟಕವು ಹೊಂದಿರುವ ಸಂಪನ್ಮೂಲಗಳು ಮತ್ತು ಸಾಮಥ್ರ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಈ ಭಾಗದ ಅಭಿವೃದ್ಧಿಗೆ ನಾವೆಲ್ಲರೂ ಶ್ರಮಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಧ್ಯಾಪಕರಾದ ಪೆÇ್ರ. ಚನ್ನವೀರ ಆರ್.ಎಂ., ಡಾ. ಸಫಿಯಾ ಪರ್ವಿನ್, ಸಂಶೋಧನಾ ವಿದ್ಯಾರ್ಥಿ ಮಲ್ಲಿಕಾರ್ಜುನ ಹಾಗೂ ಛಾಯಾಚಿತ್ರಕಾರ ಶ್ರವಣ್ ಕುಮಾರ್ ಹಿರೇಮಠ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕರಾದ ಪೆÇ್ರ. ಪಾಂಡುರಂಗ ಪತ್ತಿ ಅವರು ಸ್ವಾಗತಿಸಿ, ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮವು ವಂದೇ ಮಾತರಂ ಗೀತೆಯೊಂದಿಗೆ ಆರಂಭವಾಗಿ ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಂಡಿತು.