
ಸಂಜೆವಾಣಿ ವಾರ್ತೆ,
ವಿಜಯಪುರ, ಆ.೧೧:ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬಿತ್ತನೆಯಾದ ಬೆಳೆಗಳಿಗೆ ತೇವಾಂಶದ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ, ರೈತರ ಜಮೀನುಗಳಿಗೆ ತೆರಳಿ ಬೆಳೆ ಹಾನಿಯ ನಿಜವಾದ ಸ್ಥಿತಿಯನ್ನು ಪರಿಶೀಲಿಸಿ, ಫೋಟೋಗಳೊಂದಿಗೆ ವೈಜ್ಞಾನಿಕ ಹಾಗೂ ನಿಖರ ವರದಿಯನ್ನು ಯಾವುದೇ ತಪ್ಪಿಲ್ಲದೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಆಧಾರಿತ ಕೃಷಿ ಎಷ್ಟು ಕಷ್ಟಕರವಾಗಿದೆ ಎಂಬುದು ಬರ ಪರಿಸ್ಥಿತಿ ಅವಲೋಕನದ ವೇಳೆ ಸ್ಪಷ್ಟವಾಗಿ ಕಂಡುಬAದಿದೆ. ಜಿಲ್ಲೆಯ ಬಹುತೇಕ ರೈತರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ ಧಾವಿಸುವುದು ಸರ್ಕಾರದ ಕರ್ತವ್ಯ. ರೈತರ ನೆರವಿಗೆ ಸರ್ಕಾರ ಬದ್ಧವಾಗಿದೆ ಎಂದರು.
ಜಿಲ್ಲೆಯ ವಿವಿಧ ಭಾಗಗಳಲ್ಲಿ ತೊಗರಿ, ಹತ್ತಿ, ಸೂರ್ಯಕಾಂತಿ, ಕಬ್ಬು ಸೇರಿದಂತೆ ಪ್ರಮುಖ ಬೆಳೆಗಳ ಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲಾಗಿದೆ. ಕ್ಷೇತ್ರದ ಶಾಸಕರು, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ರೈತರೊಂದಿಗೆ ಬೆಳೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದಿದ್ದೇನೆ. ನಿಜವಾದ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ರೈತರಿಗೆ ಅಗತ್ಯ ನೆರವು ದೊರಕಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
೬.೭೯ ಲಕ್ಷ ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆ
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ೭.೭೫ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ನಿಗದಿಪಡಿಸಲಾಗಿತ್ತು. ಆದರೆ ಈವರೆಗೆ ೬.೭೯ ಲಕ್ಷ ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆಯಾಗಿದ್ದು, ಗುರಿಯ ಶೇ.೮೭.೭ರಷ್ಟು ಪ್ರದೇಶದಲ್ಲಿ ಬೆಳೆ ಬಿತ್ತನೆಯಾಗಿದೆ ಎಂದು ಸಚಿವರು ತಿಳಿಸಿದರು.
ಆಗಸ್ಟ್ನಲ್ಲೇ ಮಳೆ ಕೊರತೆ ತೀವ್ರ
ಜೂನ್‌ನಲ್ಲಿ ವಾಡಿಕೆಯ ೯೦.೪ ಮಿ.ಮೀ. ಮಳೆಯಾಗಬೇಕಾಗಿದ್ದರೆ, ೭೨.೬ ಮಿ.ಮೀ. ಮಾತ್ರ ಮಳೆಯಾಗಿದೆ. ಜುಲೈನಲ್ಲಿ ವಾಡಿಕೆಯ ೭೨.೫ ಮಿ.ಮೀ. ಮಳೆಯಾಗಿದ್ದು, ಆಗಸ್ಟ್ ೭ರವರೆಗೆ ೧೯.೪ ಮಿ.ಮೀ. ಮಳೆಯಾಗಬೇಕಿದ್ದಲ್ಲಿ ಕೇವಲ ೧೨.೫ ಮಿ.ಮೀ. ಮಳೆಯಾಗಿದೆ.
ಜೂನ್ ೧ರಿಂದ ಆಗಸ್ಟ್ ೮ರವರೆಗೆ ಜಿಲ್ಲೆಯಲ್ಲಿ ವಾಡಿಕೆಯಂತೆ ೧೮೨.೩ ಮಿ.ಮೀ. ಮಳೆಯಾಗಬೇಕಿದ್ದರೂ ೧೫೭.೬ ಮಿ.ಮೀ. ಮಾತ್ರ ಮಳೆಯಾಗಿದೆ. ಪರಿಣಾಮ ಮಳೆ ಕೊರತೆ ಉಂಟಾಗಿದೆ ಎಂದು ವಿವರಿಸಿದರು.
ಬೆಳೆಗಳ ಬೆಳವಣಿಗೆಗೆ ತೇವಾಂಶದ ಹೊಡೆತ
ವಿಜಯಪುರ ತಾಲೂಕಿನ ಹಿಟ್ನಳ್ಳಿ, ಮದಭಾವಿ ಹಾಗೂ ಶಿವಣಗಿ, ದೇವರಹಿಪ್ಪರಗಿ ತಾಲೂಕಿನ ಬೊಮ್ಮನಹಳ್ಳಿ ಹಾಗೂ ಸಿಂದಗಿ ತಾಲೂಕಿನ ಕನ್ನೊಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಬೆಳೆಗಳಿಗೆ ತೇವಾಂಶದ ಕೊರತೆ ಕಂಡುಬAದಿದೆ.
ತೇವಾAಶ ಕೊರತೆಯಿಂದ ಸಸಿಗಳ ಸಂಖ್ಯೆ ಕಡಿಮೆಯಾಗುವುದರ ಜೊತೆಗೆ ಬೆಳವಣಿಗೆಯೂ ಕುಂಠಿತವಾಗಿದೆ. ತೊಗರಿ ಹಾಗೂ ಹತ್ತಿಯಲ್ಲಿ ಕವಲುಗಳು ಕಡಿಮೆಯಾಗಿದ್ದು, ಹೂ ಮತ್ತು ಕಾಯಿಗಳ ಸಂಖ್ಯೆಯಲ್ಲೂ ಇಳಿಕೆಯಾಗಿದೆ. ಕಬ್ಬಿನಲ್ಲಿ ಗಣಿಕೆಗಳ ಉದ್ದ ಹಾಗೂ ಸಂಖ್ಯೆಯಲ್ಲಿ ಇಳಿಕೆ ಕಂಡುಬAದಿದೆ. ಸೂರ್ಯಕಾಂತಿಯಲ್ಲಿ ಹೂವಿನ ಗಾತ್ರ ಕಡಿಮೆಯಾಗಿದ್ದು, ಕಾಳು ಜೊಳ್ಳಾಗುವ ಸಾಧ್ಯತೆ ಇರುವುದರಿಂದ ಇಳುವರಿ ಕುಸಿಯುವ ಆತಂಕವಿದೆ ಎಂದು ಸಚಿವರು ವಿವರಿಸಿದರು.
ಕುಡಿಯುವ ನೀರಿಗೆ ಸದ್ಯ ಸಮಸ್ಯೆಯಿಲ್ಲ
ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ ಸಾಕಷ್ಟು ನೀರು ಸಂಗ್ರಹವಿದ್ದು, ಜಿಲ್ಲೆಯಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಎಂ.ಬಿ. ಪಾಟೀಲ ಹೇಳಿದರು.
ಜಿಲ್ಲೆಯ ಜಲಾಶಯಗಳಲ್ಲಿ ಶೇ.೯೪ಕ್ಕಿಂತ ಹೆಚ್ಚಿನ ನೀರು ಸಂಗ್ರಹವಿರುವ ಹಿನ್ನೆಲೆಯಲ್ಲಿ ಭೀಮಾ ನದಿಗೆ ನೀರು ಹರಿಸಲಾಗುತ್ತಿದೆ. ಹೀಗಾಗಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎಂದರು.
ಕುಡಿಯುವ ನೀರಿನ ಕಾಮಗಾರಿಗಳಿಗಾಗಿ ಟಾಸ್ಕ್ಫೋರ್ಸ್ ಸಮಿತಿಗೆ ಈಗಾಗಲೇ ?೪ ಕೋಟಿ, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ?೧ ಕೋಟಿಯಂತೆ ಜಿಲ್ಲೆಗೆ ಒಟ್ಟು ?೧೨ ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದರು.
೨೭ ವಾರಗಳಿಗೆ ಸಾಕಾಗುವಷ್ಟು ಮೇವು
ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಅಗತ್ಯ ಪ್ರಮಾಣದಲ್ಲಿ ಮೇವು ದಾಸ್ತಾನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಸುಮಾರು ೨,೬೮,೬೧೬ ದೊಡ್ಡ ಜಾನುವಾರುಗಳು ಹಾಗೂ ೮,೦೫,೯೬೩ ಸಣ್ಣ ಜಾನುವಾರುಗಳಿವೆ. ರೈತರ ಬಳಿ ಅಂದಾಜು ೩,೮೩,೦೮೯ ಮೆಟ್ರಿಕ್ ಟನ್ ಒಣ ಮೇವು ದಾಸ್ತಾನಿದ್ದು, ಇದು ಮುಂದಿನ ೨೮ ವಾರಗಳಿಗೆ ಸಾಕಾಗಲಿದೆ ಎಂದು ಸಚಿವರು ಹೇಳಿದರು.
ಈ ವಾರದಲ್ಲಿ ಇನ್ನೂ ಮೂರು-ನಾಲ್ಕು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಅವಲೋಕನ ನಡೆಸಲಾಗುವುದು ಎಂದರು.
೩.೦೦ ಲಕ್ಷ ರೈತರಿಗೆ ?೫೭೧.೪೪ ಕೋಟಿ ಪರಿಹಾರ
೨೦೨೫-೨೬ನೇ ಸಾಲಿನಲ್ಲಿ ಪ್ರವಾಹ ಹಾಗೂ ಅತಿವೃಷ್ಟಿಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಹಾನಿಯಾದ ಹಿನ್ನೆಲೆಯಲ್ಲಿ ೩,೦೦,೩೮೪ ರೈತರಿಗೆ ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ?೩೨೮.೭೨ ಕೋಟಿ, ರಾಜ್ಯ ಸರ್ಕಾರದ ಹೆಚ್ಚುವರಿ ಪರಿಹಾರವಾಗಿ ?೨೪೩.೦೨ ಕೋಟಿ, ಒಟ್ಟು ?೫೭೧.೪೪ ಕೋಟಿ ಪರಿಹಾರವನ್ನು ಡಿಬಿಟಿ ಮೂಲಕ ರೈತರ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಇಷ್ಟೊಂದು ದೊಡ್ಡ ಮೊತ್ತದ ಪರಿಹಾರ ನೀಡಿದ ರಾಜ್ಯದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆಗೆ ವಿಜಯಪುರ ಪಾತ್ರವಾಗಿದೆ ಎಂದರು.
ಬೆಳೆ ವಿಮೆಯಡಿ ?೨೩೫.೬೩ ಕೋಟಿ ಜಮೆ
೨೦೨೫-೨೬ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ೮೩,೩೪೯ ರೈತರು ತೊಗರಿ ಹಾಗೂ ೬,೫೭೮ ರೈತರು ಹತ್ತಿ ಬೆಳೆಗೆ ವಿಮೆ ಮಾಡಿಸಿದ್ದರು. ಇವರಿಗೆ ಮಧ್ಯಂತರ ಪರಿಹಾರವಾಗಿ ?೧೦೩.೨೩ ಕೋಟಿ ಜಮೆಯಾಗಿದೆ.
ಬೆಳೆ ಅಂದಾಜು ಸಮೀಕ್ಷೆ ಆಧಾರದ ಮೇಲೆ ೬೬,೨೭೬ ರೈತರಿಗೆ ?೧೩೨.೪೦ ಕೋಟಿ ಬೆಳೆ ವಿಮೆ ಜಮೆಯಾಗಿದ್ದು, ಒಟ್ಟಾರೆ ವಿಜಯಪುರ ಜಿಲ್ಲೆಗೆ ?೨೩೫.೬೩ ಕೋಟಿ ಬೆಳೆ ವಿಮೆ ಪಾವತಿಯಾಗಿದೆ ಎಂದು ವಿವರಿಸಿದರು.
೨೦೨೫-೨೬ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ೯೯,೧೫೪ ರೈತರು ಹಾಗೂ ೨೦೨೬-೨೭ನೇ ಸಾಲಿನಲ್ಲಿ ೨,೫೪,೭೬೬ ರೈತರು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ನೋಂದಾಯಿಸಿಕೊAಡಿದ್ದಾರೆ ಎಂದರು.
ಬೆಳೆ ವಿಮೆ ನೋಂದಣಿಗೆ ವ್ಯಾಪಕ ಜಾಗೃತಿ
ಪ್ರಸ್ತುತ ಸಾಲಿನಲ್ಲಿ ಸಾಲ ಪಡೆದಿರುವ ಬ್ಯಾಂಕ್‌ನಲ್ಲಿಯೇ ಬೆಳೆ ವಿಮೆ ನೋಂದಾಯಿಸಬೇಕಾದ ಹಿನ್ನೆಲೆಯಲ್ಲಿ ರೈತರಿಗೆ ತೊಂದರೆಯಾಗದAತೆ ವ್ಯಾಪಕ ಜಾಗೃತಿ ಮೂಡಿಸಲಾಗಿದೆ. ಗ್ರಾಮಗಳಲ್ಲಿ ಡಂಗೂರ ಸಾರುವುದು, ಪ್ರಚಾರ ವಾಹನಗಳ ಮೂಲಕ ಮಾಹಿತಿ ನೀಡುವುದು, ಪೋಸ್ಟರ್ ಹಾಗೂ ಕರಪತ್ರ ವಿತರಿಸುವ ಮೂಲಕ ಜಾಗೃತಿ ಅಭಿಯಾನ ನಡೆಸಲಾಗಿದೆ.
ಬ್ಯಾಂಕ್ ಅಧಿಕಾರಿಗಳೊಂದಿಗೆ ನಿರಂತರ ಸಭೆ ನಡೆಸಿ, ಪಿಕೆಪಿಎಸ್ ಸಂಘಗಳಿಗೆ ತರಬೇತಿ ನೀಡಿ, ಲಾಗಿನ್ ವ್ಯವಸ್ಥೆ ಕಲ್ಪಿಸುವ ಮೂಲಕ ರೈತರಿಗೆ ಬೆಳೆ ವಿಮೆ ನೋಂದಣಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಸಚಿವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಜಿಲ್ಲಾಧಿಕಾರಿ ಡಾ. ಆನಂದ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ತೋಟಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಸಿದ್ರಾಮ ಬರಗಿಮಠ ಹಾಗೂ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಉಪಸ್ಥಿತರಿದ್ದರು.































