
ಸಂಜೆವಾಣಿ ವಾರ್ತೆ,
ವಿಜಯಪುರ, ಅ.೧: ರಾಜ್ಯ ಸರ್ಕಾರ ನುಡಿದಂತೆ ನಡೆದುಕೊಂಡಿದ್ದು, ಪಂಚ ಗ್ಯಾರಂಟಿ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿವೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಬ್ಯಾಡಗಿ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ೨೦೨೬-೨೭ನೇ ಸಾಲಿನ ಆಗಸ್ಟ್ ಅಂತ್ಯದವರೆಗಿನ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಮಹಿಳೆಯರು, ಹಿಂದುಳಿದವರು ಸೇರಿದಂತೆ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪಬೇಕು. ಫಲಾನುಭವಿಗಳ ಸಮಸ್ಯೆಗಳನ್ನು ಆಲಿಸಿ ತ್ವರಿತವಾಗಿ ಪರಿಹರಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಯೋಜನೆಗಳ ಅನುಷ್ಠಾನ ಮತ್ತಷ್ಟು ಪರಿಣಾಮಕಾರಿಯಾಗಲು ವಾರ್ಡ್ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗುವುದು ಎಂದರು.
ಶಕ್ತಿ ಯೋಜನೆಯಡಿ ೨೨.೪೭ ಕೋಟಿ ಪ್ರಯಾಣ: ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರು ೨೨,೪೭,೨೦,೭೩೩ ಬಾರಿ ಉಚಿತವಾಗಿ ಪ್ರಯಾಣಿಸಿದ್ದು, ಸರ್ಕಾರ ?೭೭೨.೦೭ ಕೋಟಿ ವೆಚ್ಚ ಮಾಡಿದೆ. ಎಲ್ಲ ತಾಲೂಕು ಕೇಂದ್ರಗಳ ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿದ್ದು, ಸ್ವಚ್ಛತೆ ಹಾಗೂ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆಯಲ್ಲಿ ಯಾವುದೇ ತೊಂದರೆಯಾಗದAತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಗೃಹಜ್ಯೋತಿ: ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ ೪,೫೦,೩೭೨ ಗ್ರಾಹಕರು ನೋಂದಾಯಿಸಿಕೊAಡಿದ್ದು, ?೬೬೭.೦೩ ಕೋಟಿ ವೆಚ್ಚವಾಗಿದೆ. ಬಡ ಕುಟುಂಬಗಳು ಯೋಜನೆಯಿಂದ ಹೊರಗುಳಿಯದಂತೆ ಅಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದು ಸೂಚಿಸಿದರು.
ಅನ್ನಭಾಗ್ಯ: ಅನ್ನಭಾಗ್ಯ ಯೋಜನೆಯಡಿ ೧೬,೫೫,೯೪೧ ಫಲಾನುಭವಿಗಳು ಸೌಲಭ್ಯ ಪಡೆಯುತ್ತಿದ್ದು, ?೪೫೭.೦೩ ಕೋಟಿ ಬಿಡುಗಡೆಯಾಗಿದೆ.
ಗೃಹಲಕ್ಷ್ಮಿ: ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ ೫,೦೩,೮೨೯ ಮಹಿಳಾ ಫಲಾನುಭವಿಗಳಿಗೆ ಒಟ್ಟು ?೩,೦೯೨.೦೬ ಕೋಟಿ ಧನಸಹಾಯ ತಲುಪಿದೆ. ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಅತ್ಯಧಿಕ ಮೊತ್ತದ ವೆಚ್ಚವಾಗಿದೆ ಎಂದು ತಿಳಿಸಿದರು.
ಯುವನಿಧಿ: ನಿರುದ್ಯೋಗಿ ಯುವಜನತೆಗೆ ನೆರವಾಗುವ ಯುವನಿಧಿ ಯೋಜನೆಯಡಿ ೨೮,೦೭೦ ಫಲಾನುಭವಿಗಳು ನೋಂದಾಯಿಸಿಕೊAಡಿದ್ದು, ?೮೦.೨೪ ಕೋಟಿ ಧನಸಹಾಯ ನೀಡಲಾಗಿದೆ. ಕಾಲೇಜುಗಳಲ್ಲಿ ಯುವನಿಧಿ ಸೇರಿದಂತೆ ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಯಶೋಗಾಥೆಗಳ ಕೈಪಿಡಿ ಸಿದ್ಧಪಡಿಸುವಂತೆ ಸಲಹೆ ನೀಡಿದ ಅವರು, ಗ್ಯಾರಂಟಿ ಯೋಜನೆಗಳ ಲಾಭ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪುವಂತೆ ನಿರಂತರ ಪರಿಶೀಲನೆ ನಡೆಸಬೇಕು ಎಂದರು.
ಆಹಾರ ಇಲಾಖೆಯ ಉಪನಿರ್ದೇಶಕ ವಿನಯಕುಮಾರ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಇ-ಕೆವೈಸಿ ಪ್ರಕ್ರಿಯೆ ನಡೆಯುತ್ತಿದ್ದು, ಶೇ.೭೮ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್ ದೈವಾಡಿ ಮಾತನಾಡಿ, ಭಾರತ ಜೋಡೋ ಯೋಜನೆಗೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ೩೨೦ ಸಂಘಗಳನ್ನು ರಚಿಸಲಾಗಿದ್ದು, ಮೆಂಟರ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೋಡೆ, ಮಹಾನಗರ ಪಾಲಿಕೆ ಗ್ಯಾರಂಟಿ ಯೋಜನೆ ಅಧ್ಯಕ್ಷ ಶಬ್ಬೀರ ಜಾಗೀರಾದಾರ, ಉಪಾಧ್ಯಕ್ಷರಾದ ಹೊನಮಲ್ಲ ರಾಠೋಡ, ನಬೀಲಾಲ್ ನಾಯ್ಕೋಡಿ, ಆನಂದ ಜಾಧವ, ಮಹಾದೇವಿ ಗೋಕಾಕ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸಂತೋಷ ಎಚ್., ವಿಭಾಗೀಯ ನಿಯಂತ್ರಣಾಧಿಕಾರಿ ಪ್ರೇಮಾನಂದ ಬಿರಾದಾರ, ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ ಸೇರಿದಂತೆ ವಿವಿಧ ತಾಲೂಕುಗಳ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.






















