
ಜೇವರಗಿ,ಜೂ ೭: ಪರಿಸರ ಸಂರಕ್ಷಣೆಮತ್ತು ಹಸಿರು ಭವಿಷ್ಯದ ನಿರ್ಮಾಣಕ್ಕಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಯುವ ಘಟಕದ ಸದಸ್ಯ ಸುನಿಲ್ ಬಿ ಹಳ್ಳಿ ಅವರ ನೇತೃತ್ವದಲ್ಲಿ ವೃಕ್ಷಾರೋಪಣಾ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿಗಳೊಂದಿಗೆ ಸಸಿಗೆ ನೀರುಣಿಸಿ ವೃಕ್ಷಾರೋಪಣಾ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಯುವ ಘಟಕದ ಸದಸ್ಯ ಸುನಿಲ್ ಬಿ ಹಳ್ಳಿ ಮಾತನಾಡಿದರು .ಮುಂದಿನ ದಿನಗಳಲ್ಲಿ ೧೦೦೦ ಸಸಿಗಳನ್ನು ನೆಟ್ಟು ಅವುಗಳನ್ನು ಸಂರಕ್ಷಿಸುವ ಗುರಿ ಹೊಂದಲಾಗಿದೆ. ಸಸಿ ನೆಡುವುದಷ್ಟೇ ಅಲ್ಲದೆ ಅವುಗಳನ್ನು ಪೋಷಿಸಿ ಬೆಳೆಸುವುದು ಮುಖ್ಯವಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಸಸಿಗಳಿಗೆ ನೀರುಣಿಸುವ ಮೂಲಕ ಪರಿಸರ ಜಾಗೃತಿಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಯುವಕರು, ಸಮಾಜದ ಗಣ್ಯರು ಹಾಗೂ ಸಾರ್ವಜಜಕರು ಭಾಗವಹಿಸಿ ಅಭಿಯಾನಕ್ಕೆ ಬೆಂಬಲ ವ್ಯಕ್ತಿಪಡಿಸಿದರು.





























