Home ಮುಖಪುಟ ಸುದ್ದಿ ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್

ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್

ಬೆಂಗಳೂರು, ಜೂ. ೯- ನಿನ್ನೆ ನಿಧನರಾದ ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆಯವರ ನಿವಾಸಕ್ಕೆ ಇಂದು ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲ್‌ಗಾಂಧಿ ಅವರು ಸೂರಜ್ ಹೆಗ್ಡೆಯವರ ಪಾರ್ಥೀವ ಶರೀರಕ್ಕೆ ಅಂತಿನ ನಮನ ಸಲ್ಲಿಸಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.


ನವದೆಹಲಿಯಿಂದ ಇಂದು ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿದ ರಾಹುಲ್‌ಗಾಂಧಿಯವರು ವಿಮಾನ ನಿಲ್ದಾಣದಿಂದ ನೇರವಾಗಿ ಬಿಇಎಲ್ ರಸ್ತೆಯಲ್ಲಿರುವ ಸೂರಜ್ ಹೆಗ್ಡೆಯವರ ನಿವಾಸಕ್ಕೆ ತೆರಳಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು. ಬಳಿಕ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.


ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.


ಇದಕ್ಕೂ ಮೊದಲು ನವದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ರಾಹುಲ್‌ಗಾಂಧಿಯವರನ್ನು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಇವರುಗಳು ಬರ ಮಾಡಿಕೊಂಡರು.


ಎಐಸಿಸಿ ಕಾರ್ಯದರ್ಶಿ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆಯವರು ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಹೆಬ್ಬಾಳ ಚಿತಾಗಾರದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ರಾಹುಲ್‌ಗಾಂಧಿ ಭಾಗವಹಿಸಿದ್ದರು.