Home ಜಿಲ್ಲೆ ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಅನಿರೀಕ್ಷಿತ ದಾಳಿ: 1 ಮೊಬೈಲ್ ವಶ

ಕೇಂದ್ರ ಕಾರಾಗೃಹದ ಮೇಲೆ ಅನಿರೀಕ್ಷಿತ ದಾಳಿ: 1 ಮೊಬೈಲ್ ವಶ

ಕಲಬುರಗಿ,ಸೆ.10-ನಗರ ಪೊಲೀಸ್ ಆಯುಕ್ತರಾದ ಡಾ.ಶರಣಪ್ಪ ಎಸ್.ಡಿ.ಅವರ ನಿರ್ದೇಶನದ ಮೇರೆಗೆ ಡಿಸಿಪಿ ಶಾಲೂ ಅವರ ಮಾರ್ಗದರ್ಶನದಲ್ಲಿ ಉಪ ಪೊಲೀಸ್ ಆಯುಕ್ತ ಪ್ರವೀಣ್ ಹೆಚ್.ನಾಯಕ್ ಅವರ ನೇತೃತ್ವದಲ್ಲಿ 128 ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ನಗರ ಹೊರವಲಯದ ಕೇಂದ್ರ ಕಾರಾಗೃಹದ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ಕೈದಿಗಳ ಕೋಣೆಗಳನ್ನು ತಪಾಸಣೆ ಮಾಡಿದ್ದಾರೆ.
ತಪಾಸಣೆ ವೇಳೆ ಬ್ಯಾರಕ್ ನಂ.6ರ ಅಮರ್ಜಾದಲ್ಲಿ ಸಿಮ್ ಇಲ್ಲದ 1 ಕಿಪ್ಯಾಡ್ ಮೊಬೈಲ್ ದೊರೆತಿದೆ. ಈ ಸಂಬಂಧ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಣಕುಮಾರ ಅವರು ನೀಡಿದ ದೂರಿನ ಮೇರೆಗೆ ಫರಹತಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.