
ಮುಂಬೈ.ಜೂ೬: ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸ ಹಾಗೂ ಏಷ್ಯನ್ ಗೇಮ್ಸ್‌ಗಾಗಿ ಭಾರತ ಟಿ೨೦ ತಂಡವನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ.
ನಿರೀಕ್ಷೆಯಂತೆಯೇ ಟಿ೨೦ ತಂಡದಲ್ಲಿ ಭಾರಿ ಬದಲಾವಣೆಗಳಾಗಿದ್ದು, ಹಿರಿಯ ಆಟಗಾರ ಶ್ರೇಯಸ್ ಅಯ್ಯರ್ ಅವರಿಗೆ ತಂಡದ ನಾಯಕತ್ವದ ಜವಾಬ್ದಾರಿ ವಹಿಸಲಾಗಿದೆ. ಯುವ ಬ್ಯಾಟರ್ ತಿಲಕ್ ವರ್ಮಾ ಅವರನ್ನು ಉಪನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ೧೫ ರಪೋರ ಸೂರ್ಯವಂಶಿ ಮೊದಲ ಬಾರಿಗೆ ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಸಚಿನ್ ತೆಂಡುಲ್ಕರ್ ೧೬ ರ ಹರೆಯದಲ್ಲಿ ಭಾರತ ತಂಡಕ್ಕೆ ಆಡಿದ್ದರು,ಈಗ ಸೂರ್ಯವಂಶಿ ಅವರಿಗಿಂತ ಒಂದು ವರ್ಷ ಕಡಿಮೆ ವಯಸ್ಸಿನಲ್ಲಿ ಆಡುತ್ತಿರುವುದು ಇತಿಹಾಸ ಪುಟದಲ್ಲಿ ದಾಖಲಾಗಲಿದೆ.
ಆದರೆ, ಕಳೆದೆರಡು ವರ್ಷಗಳಿಂದ ಟಿ೨೦ ಮಾದರಿಯಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿದ್ದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರಿಗೆ ಆಯ್ಕೆ ಸಮಿತಿ ಬಿಗ್ ಶಾಕ್ ನೀಡಿದ್ದು, ತಂಡದಿಂದಲೇ ಕೈಬಿಟ್ಟಿದೆ.
ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಸೂರ್ಯಕುಮಾರ್ ಅವರನ್ನು ಕೈಬಿಟ್ಟಿರುವುದು ಕಠಿಣ ನಿರ್ಧಾರವಾಗಿತ್ತು. ಅವರ ಇತ್ತೀಚಿನ ಫಾರ್ಮ್ ಹಾಗೂ ಮುಂದಿನ ಎರಡು ವರ್ಷಗಳ ಭವಿಷ್ಯದ ಯೋಜನೆಯನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ. ಮತ್ತೊಂದೆಡೆ, ಶ್ರೇಯಸ್ ಅಯ್ಯರ್ ಐಪಿಎಲ್ ಸೇರಿದಂತೆ ಹಲವು ಫ್ರಾಂಚೈಸಿಗಳನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ನಾಯಕತ್ವಕ್ಕೆ ಅವರು ಸೂಕ್ತ ಅಭ್ಯರ್ಥಿ” ಎಂದು ತಿಳಿಸಿದರು.
ಇತ್ತೀಚಿನ ಐಪಿಎಲ್ ಹಾಗೂ ದೇಶಿ ಟೂರ್ನಿಗಳಲ್ಲಿ ಅಬ್ಬರಿಸಿದ್ದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರಿಗೆ ಮೊದಲ ಬಾರಿಗೆ ಭಾರತ ತಂಡದಿಂದ ಕರೆ ಬಂದಿದೆ. ಆದರೆ, ಐಪಿಎಲ್ ೨೦೨೬ ರಲ್ಲಿ ಗುಜರಾತ್ ಟೈಟನ್ಸ್ ಪರ ೭೩೨ ರನ್ ಗಳಿಸಿ ಅಮೋಘ ಫಾರ್ಮ್‌ನಲ್ಲಿದ್ದ ಶುಭ್‌ಮನ್ ಗಿಲ್ ಅವರಿಗೆ ಆಯ್ಕೆ ಸಮಿತಿ ಮತ್ತೆ ನಿರಾಸೆ ಮೂಡಿಸಿದ್ದು, ತಂಡದಲ್ಲಿ ಸ್ಥಾನ ನೀಡಿಲ್ಲ.
ಏಷ್ಯನ್ ಗೇಮ್ಸ್ ತಂಡಕ್ಕೆ ಬುಮ್ರಾ ಸಾರಥ್ಯ
ಇದೇ ವೇಳೆ ಮುಂಬರುವ ಏಷ್ಯನ್ ಗೇಮ್ಸ್ ಟೂರ್ನಿಗೂ ಬಲವಾದ ತಂಡವನ್ನು ಪ್ರಕಟಿಸಲಾಗಿದ್ದು, ಹಿರಿಯ ವೇಗಿ ಜಸ್ಪ್ರಿತ್ ಬುಮ್ರಾ ಅವರನ್ನು ಸೇರಿಸಿಕೊಳ್ಳಲಾಗಿದೆ. ಏಷ್ಯನ್ ಗೇಮ್ಸ್‌ನಲ್ಲೂ ಶ್ರೇಯಸ್ ಅಯ್ಯರ್ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ.
ಭಾರತ ಟಿ೨೦ ತಂಡ (ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಕ್ಕೆ)
ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಶಿವಂ ದುಬೆ, ನಿತೀಶ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ಅರ್ಶ್‌ದೀಪ್ ಸಿಂಗ್, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ ಅವರನ್ನು ಆಯ್ಕೆ ಮಾ





























