Home ಕ್ರೈಂ ಸುದ್ದಿಗಳು ಜಂಬಗಿ ಸೇತುವೆಯಿಂದ ಜಿಗಿದು ಆತ್ಮಹತ್ಯೆ ಶಂಕೆ: ಕೃಷ್ಣಾ ನದಿಯಲ್ಲಿ ಯುವಕನ ಮೃತದೇಹ ಪತ್ತೆ

ಜಂಬಗಿ ಸೇತುವೆಯಿಂದ ಜಿಗಿದು ಆತ್ಮಹತ್ಯೆ ಶಂಕೆ: ಕೃಷ್ಣಾ ನದಿಯಲ್ಲಿ ಯುವಕನ ಮೃತದೇಹ ಪತ್ತೆ

ಜಮಖಂಡಿ:ಮಾ.8: ತಾಲೂಕಿನ ಜಂಬಗಿ ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ನಿನ್ನೆ ಪೆÇಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕೃಷ್ಣಾ ನದಿಯಲ್ಲಿ ಶೋಧ ಕಾರ್ಯ ನಡೆಸಿದರು. ಆದರೆ ನದಿಯಲ್ಲಿ ವ್ಯಕ್ತಿಯ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಶೋಧ ಕಾರ್ಯ ಸ್ಥಗಿತಗೊಳಿಸಿ ಮರಳಿದ್ದರು.
ಆದರೆ ಇಂದು ಬೆಳಿಗ್ಗೆ ಜಂಬಗಿ ಗ್ರಾಮದ ಸಮೀಪದ ಕೃಷ್ಣಾ ನದಿಯಲ್ಲಿ ಯುವಕನ ಮೃತದೇಹ ಮೇಲಕ್ಕೆ ತೇಲಿಬಂದಿದೆ. ಅಲ್ಲಿದ್ದ ಮೀನುಗಾರರ ಕಣ್ಣಿಗೆ ಮೃತದೇಹ ಬಿದ್ದ ತಕ್ಷಣವೇ ಅವರು ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೆÇಲೀಸ್ ಠಾಣೆಯ ಪೆÇಲೀಸರು ಹಾಗೂ ಮೃತನ ಸಂಬಂಧಿಕರು ಆಗಮಿಸಿ ಮೃತದೇಹವನ್ನು ಗುರುತಿಸಿದ್ದಾರೆ.
ಪೆÇಲೀಸರು ಮುಂದಿನ ತನಿಖಾ ಕ್ರಮಗಳನ್ನು ಕೈಗೊಂಡಿದ್ದು, ಶವಪರೀಕ್ಷೆಗಾಗಿ ಜಮಖಂಡಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಜಮಖಂಡಿ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ನಿಖರವಾದ ಮಾಹಿತಿ ಪೆÇಲೀಸ್ ಮೂಲಗಳಿಂದ ತಿಳಿದು ಬರಬೇಕಾಗಿದೆ