Home ಮುಖಪುಟ ಸುದ್ದಿ ನೂತನ ಸಚಿವರ ಪದಗ್ರಹಣ:ಲೋಕಭವನ ಸುತ್ತ ಬಿಗಿಭದ್ರತೆ

ನೂತನ ಸಚಿವರ ಪದಗ್ರಹಣ:ಲೋಕಭವನ ಸುತ್ತ ಬಿಗಿಭದ್ರತೆ

ಬೆಂಗಳೂರು, ಆ.೩- ಲೋಕಭವನದ ಗಾಜಿನ ಮನೆಯಲ್ಲಿ ನಡೆಯುವ ನೂತನ ಸಚಿವರುಗಳ ಪ್ರಮಾಣ ವಚನ ಸಮಾರಂಭಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡು ಸಂಚಾರ ವ್ಯವಸ್ಥೆಯಲ್ಲಿಯೂ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.


ನೂತನ ಸಚಿವರುಗಳ ಪ್ರಮಾಣ ವಚನ ಸಮಾರಂಭಕ್ಕೆ ಅತಿಗಣ್ಯವ್ಯಕ್ತಿಗಳು ಹಾಗೂ ಗಣ್ಯವ್ಯಕ್ತಿಗಳು ಭಾಗವಹಿಸುವ ಹಿನ್ನೆಲೆಯಲ್ಲಿ ಆಹ್ವಾನಿತರಿಗೆ ಮಾತ್ರ ಪ್ರವೇಶವಿದ್ದು ಸಾರ್ವಜನಿಕರು ಪ್ರವೇಶಿಸಲು ಅವಕಾಶವಿರುವುದಿಲ್ಲ.


ಸಮಾರಂಭವು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸುಸೂತ್ರವಾಗಿ ನಡೆಸಲು ಕೈಗೊಂಡಿರುವ ಭಧ್ರತೆಗೆ ನಗರದ ಹೆಚ್ಚುವರಿ ಆಯುಕ್ತರು,ಜಂಟಿ ಆಯುಕ್ತರು,ಸಂಚಾರ ಸೇರಿ ಎಲ್ಲಾ ವಿಭಾಗದ ಡಿಸಿಪಿಗಳ ನೇತೃತ್ವದಲ್ಲಿ ೧ ಸಾವಿರಕ್ಕೂ ಹೆಚ್ಚು ಮಂದಿ ಅಧಿಕಾರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.


ಪ್ರಮಾಣ ವಚನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗಂತೆ ನೋಡಿಕೊಂಡು ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಮಧ್ಯಾಹ್ನ ೨ ರಿಂದ ರಾತ್ರಿ ೮ರ ವರೆಗೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಹೇಳಿದರು.

ವಾಹನ ಸಂಚಾರ ನಿರ್ಬಂಧ

  • ಕಬ್ಬನ್ ರಸ್ತೆಯ ಬಿ.ಆರ್.ವಿ ಜಂಕ್ಷನ್‌ನಿಂದ ಸಿ.ಟಿ.ಓ. ಜಂಕ್ಷನ್ ವರೆಗೆ ಹಾಗೂ ಸಿ.ಟಿ.ಓ. ವೃತ್ತದಿಂದ ಲೋಕಭವನದವರೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿರುವ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

  • *ಬಾಳೇಕುಂದ್ರಿ ಜಂಕ್ಷನ್‌ನಿಂದ ಅಂಬೇಡ್ಕರ್ ರಸ್ತೆ ಕಡೆಗೆ ಬರುವ ವಾಹನಗಳಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿರುವ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
  • ಡಾ|| ಅಂಬೇಡ್ಕರ್ ರಸ್ತೆಯಲ್ಲಿ ಕೆ.ಆರ್. ಸರ್ಕಲ್ ಕಡೆಯಿಂದ ಕಾಫಿಬೋರ್ಡ್ ಜಂಕ್ಷನ್ ವರೆಗೆ ಸಂಚರಿಸುವ ವಾಹನಗಳಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿರುವ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ
    *ಕ್ರೀನ್ಸ್ ಜಂಕ್ಷನ್ ಕಡೆಯಿಂದ ಸಿ.ಟಿ.ಓ ಕಡೆಗೆ ಸಂಚರಿಸುವ ವಾಹನಗಳಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿರುವ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

  • *ಕ್ರೀನ್ಸ್ ಜಂಕ್ಷನ್‌ನಲ್ಲಿ ಸೆಂಟ್ ಮಾರ್ಕ್ಸ್ ರಸ್ತೆಯಿಂದ ಸಿ.ಟಿ.ಓ. ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗ:

*ಕಬ್ಬನ್ ರಸ್ತೆಯ ಬಿ.ಆರ್.ವಿ ಜಂಕ್ಷನ್‌ನಿಂದ ಸಿ.ಟಿ.ಓ. ಜಂಕ್ಷನ್ ವರೆಗೆ ಹಾಗೂ ಸಿ.ಟಿ.ಒ. ವೃತ್ತದಿಂದ ಲೋಕಭವನದವರೆಗೆ ಸಂಚರಿಸುವ ವಾಹನಗಳು ಬಿ.ಆರ್.ವಿ. ಜಂಕ್ಷನ್ ಬಳಿ ಶಿವಾಜಿನಗರ ಕಡೆಗೆ ಬಲತಿರುವು ಹಾಗೂ ಅನಿಲ್ ಕುಂಬ್ಳೆ, ಜಂಕ್ಷನ್ ಕಡೆಗೆ ಎಡತಿರುವು ಪಡೆದು ಸಂಚರಿಸಬಹುದಾಗಿದೆ.

*ಕ್ರೀನ್ಸ್ ರಸ್ತೆ ಹಾಗೂ ಶಿವಾಜಿನಗರ ಕಡೆಯಿಂದ ಬರುವ ವಾಹನಗಳು ಬಾಳೇಕುಂದ್ರಿ ಜಂಕ್ಷನ್ ಬಳಿ ಕನ್ನಿಂಗ್‌ಹ್ಯಾಮ್ ರಸ್ತೆಯ ಮುಖಾಂತರ ಸಂಚರಿಸಬಹುದಾಗಿದೆ.

  • ಕೆ.ಆರ್. ಸರ್ಕಲ್ ಕಡೆಯಿಂದ ಕಾಫಿಬೋರ್ಡ್ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು ನೃಪತುಂಗ ರಸ್ತೆಯ ಮುಖಾಂತರ ಸಂಚರಿಸಬಹುದಾಗಿದೆ.

*ಕ್ರೀನ್ಸ್ ಜಂಕ್ಷನ್ ಕಡೆಯಿಂದ ಲೋಕ ಭವನದ ಕಡೆಗೆ ಸಂಚರಿಸುವ ವಾಹನಗಳು ಅನಿಲ್‌ಕುಂಬ್ಳೆ ಹಾಗೂ ಬಿ.ಆರ್.ವಿ. ಜಂಕನ್ ಮುಖಾಂತರ ಸಂಚರಿಸಬಹುದಾಗಿದೆ.

*ಹಲಸೂರು ಮತ್ತು ಹಳೆ ಏರ್‌ಪೊರ್ಟ್ ಕಡೆಯಿಂದ ಕೆಂಪೇಗೌಡ ಏರ್‌ಪೋರ್ಟ್ ಮತ್ತು ಬಸವೇಶ್ವರ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳ ಸವಾರರು ಬಿ.ಆರ್.ವಿ ಜಂಕ್ಷನ್ ಬಳಿ ಬಲ ತಿರುವು ಪಡೆದು ಶಿವಾಜಿನಗರ ಬಸ್‌ನಿಲ್ದಾಣ ಮೂಲಕ ಬಾಳೆಕುಂದ್ರಿ ಜಂಕ್ಷನ್, ಕನ್ನಿಂಗ್ ಹ್ಯಾಂ ರಸ್ತೆ, ವಸಂತನಗರದಿಂದ ಹೆಬ್ಬಾಳ ಕಡೆಗೆ ಸಂಚರಿಸುವುದು,

  • ಹಲಸೂರು ಮತ್ತು ಹಳೇ ಮದ್ರಾಸ್ ರಸ್ತೆ ಕಡೆಯಿಂದ ಹೆಬ್ಬಾಳ ಕಡೆಗೆ ಸಂಚರಿಸುವ ವಾಹನಗಳ ಸವಾರರು ಹಲಸೂರು ಲೇಕ್ ಮೂಲಕ ಟಿನ್ ಫ್ಯಾಕ್ಟರಿ ಜಂಕ್ಷನ್ ಬಳಿಯಿಂದ ರಿಂಗ್ ರಸ್ತೆಯ ಮೂಲಕ ಹೆಬ್ಬಾಳ ಕಡೆಗೆ ಸಂಚರಿಸುವುದು.
  • ಆಶೀರ್ವಾದಂ ವೃತ್ತ ಹಾಗೂ ಎಂ.ಜಿ. ರಸ್ತೆ ಕಡೆಯಿಂದ ಬರುವಂತಹ ವಾಹನಗಳು ಬಿ.ಆರ್.ವಿ ಜಂಕ್ಷನ್ ಶಿವಾಜಿನಗರ ಬಸ್ ನಿಲ್ದಾಣ ಮೂಲಕ ಬಾಳೆಕುಂದ್ರಿ ಜಂಕ್ಷನ್, ಕನ್ನಿಂಗ್ ಹ್ಯಾಂ ರಸ್ತೆ, ವಸಂತನಗರದಿಂದ ಹೆಬ್ಬಾಳ ಕಡೆಗೆ ಸಂಚರಿಸುವುದು.

ವಾಹನಗಳ ನಿಲುಗಡೆ ನಿಷೇಧ :

*ಡಾ: ಬಿ.ಆರ್.ಅಂಬೇಡ್ಕರ್ ರಸ್ತೆ, ಬಾಳೇಕುಂದ್ರಿ ವೃತ್ತದಿಂದ ಕೆ.ಆರ್.ವೃತ್ತದ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ

*ಲೋಕಭವನ ರಸ್ತೆ ಬಿ.ಆರ್.ವಿ. ವೃತ್ತದಿಂದ ಲೋಕಭವನ ಜಂಕ್ಷನ್ ವರೆಗೆ

*ಎಲ್.ಹೆಚ್.ರಸ್ತೆ, ಲೋಕಭವನ ಜಂಕ್ಷನ್ ನಿಂದ – ಚಾಲುಕ್ಯ ವೃತ್ತದ ವರೆಗೆ

ಕ್ರೀನ್ಸ್ ರಸ್ತೆ, ಬಾಳೇಕುಂದ್ರಿ ಜಂಕ್ಷನ್‌ನಿಂದ – ಕ್ರೀನ್ಸ್ ವ್ಯತ್ತದ ವರೆಗೆ

*ಪ್ಯಾಲೇಸ್ ರಸ್ತೆ, ಮೈಸೂರು ಬ್ಯಾಂಕ್ ವೃತ್ತದಿಂದ – ವಸಂತನಗರ ಕೆಳಸೇತುವೆ ವರೆಗೆ

*ದೇವರಾಜ ಅರಸ್ ರಸ್ತೆ, ಚಾಲುಕ್ಯ ವೃತ್ತದಿಂದ – ಎಂ.ಎಸ್.ಬಿಲ್ಡಿಂಗ್ ವರೆಗೆ (ಒಳಭಾಗದ ರಸ್ತೆ ಸೇರಿ)

*ಪಾರ್ಕ್ ಹೌಸ್ ರಸ್ತೆ, ಎ.ಜಿ.ಎಸ್. ಜಂಕ್ಷನ್ ನಿಂದ ಸಿ.ಐ.ಡಿ. ವೃತ್ತದ ವರೆಗೆ

ಕಬ್ಬನ್ ಉದ್ಯಾನವನದ ಒಳಭಾಗದ ರಸ್ತೆಗಳು

*ಮಿಲ್ಲರ್ ರಸ್ತೆ, ಎಲ್.ಆರ್.ಡಿ.ಇ. ಜಂಕ್ಷನ್ ನಿಂದ ಬಸವೇಶ್ವರ ವೃತ್ತದ ವರೆಗೆ

*ಇನ್‌ಫೆಂಟ್ರಿ ರಸ್ತೆ, ಅಲಿ ಆಸ್ಕರ್ ರಸ್ತೆ, ಜಂಕ್ಷನ್ ನಿಂದ ಟ್ರಾಫಿಕ್ ಹೆಡ್ ಕ್ವಾರ್ಟರ್ ಜಂಕ್ಷನ್ ವರೆಗೆ

*ಅಲಿ ಆಸ್ಕರ್ ರಸ್ತೆ, ರಾಜಭವನ ಜಂಕ್ಷನ್ ನಿಂದ ಅಲ್ಲಿ ಆಸ್ಕರ್ ಕ್ರಾಸ್ ವರೆಗೆ

*ಕೆ.ಜಿ.ರಸ್ತೆ, ಪೊಲೀಸ್ ಕಾರ್ನರ್ ನಿಂದ ಮೈಸೂರು ಬ್ಯಾಂಕ್ ವೃತ್ತದ ವರೆಗೆ

*ಹಳೇ ಅಂಚೆ ಕಛೇರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತದಿಂದ ಕೆ.ಆರ್.ವೃತ್ತದ ವರೆಗೆ