Home ಮುಖಪುಟ ಸುದ್ದಿ ಟಿ.ನರಸೀಪುರ ಗಣೇಶ ಗಲಾಟೆ: ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

ಟಿ.ನರಸೀಪುರ ಗಣೇಶ ಗಲಾಟೆ: ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

ಮೈಸೂರು, ಸೆ.೨೦: ಟಿ.ನರಸೀಪುರದಲ್ಲಿ ನಡೆದ ಗಣೇಶ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಗಣೇಶ ಮೆರವಣಿಗೆ ವೇಳೆ ಪ್ರತಾಪ್ ಸಿಂಹ ಅವರು ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ಏಕವಚನದಲ್ಲಿ ತೀವ್ರ ವಾಗ್ದಾಳಿ ನಡೆಸಿ, ಅಧಿಕಾರಿಗೆ ಸವಾಲು ಹಾಕಿದ್ದರು. ಈ ಹೇಳಿಕೆಗಳು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವಂತಿವೆ ಎಂದು ಆರೋಪಿಸಿ ಟಿ.ನರಸೀಪುರ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಗುಂಪುಗಳ ನಡುವೆ ದ್ವೇಷಕ್ಕೆ ಪ್ರಚೋದನೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಪ್ರಚೋದನಕಾರಿ ಭಾಷಣ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಪ್ರತಾಪ್ ಸಿಂಹ ವಿರುದ್ಧ ಎಷ್ಟು ಪ್ರಕರಣ ದಾಖಲಿಸಿದರೂ ಅವರು ಹೆದರುವುದಿಲ್ಲ. ಸರ್ಕಾರದ ವಿರುದ್ಧ ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ.