
ಧಾರವಾಡ,ಮಾ.೨೧: ಕಳೆದ ೧೧ ವ?Àðಗಳ ನಂತರ ಇದೇ ಮೊದಲ ಬಾರಿಗೆ ಮಾರ್ಚ್ ತಿಂಗಳಲ್ಲಿ ಅನಿರೀಕ್ಷಿತವಾಗಿ ಆಲಿಕಲ್ಲು ಮಳೆ ಆಗಿದ್ದು, ಇದರಿಂದ ಕಲಘಟಗಿ, ಹುಬ್ಬಳ್ಳಿ, ನವಲಗುಂದ ತಾಲೂಕಿನಲ್ಲಿ ಜಾನುವಾರು, ಮನೆ ಮತ್ತು ಬೆಳೆ ಹಾನಿ ಆಗಿರುವ ವರದಿಯಾಗಿದೆ. ಸಂಬAಧಿಸಿದ ತಾಲೂಕುಗಳ ಅಧಿಕಾರಿಗಳು ಪಾರದರ್ಶಕವಾಗಿ ಜಂಟಿ ಸಮೀಕ್ಷೆ ಮಾಡಿ, ವರದಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಸೂಚಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಡಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಖುದ್ದಾಗಿ ಹಾಗೂ ಎಲ್ಲಾ ತಾಲೂಕುಗಳ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ಜರುಗಿಸಿ, ಅಧ್ಯಕ್ಷವಹಿಸಿ ಮಾತನಾಡಿದರು.
ಕಳೆದ ೨೦೧೫ರ ಮಾರ್ಚ್ದಲ್ಲಿ ಅನಿರೀಕ್ಷಿತ ಮಳೆಯಾಗಿತ್ತು. ಈಗ ೧೧ ವ?Àðಗಳ ನಂತರ ಮಾರ್ಚ್ ತಿಂಗಳಲ್ಲಿ ಮಳೆ ಆಗಿದೆ. ಆಲಿಕಲ್ಲು ಮಳೆಯಿಂದ ವಿಶೇ?Àವಾಗಿ ಕಲಘಟಗಿ ತಾಲೂಕಿನ ಮಾಚಾಪುರ ಗ್ರಾಮ ಸುತ್ತಮುತ್ತ ಸುಮಾರು ೫ ರಿಂದ ೮ ಕಿ.ಮೀ ವ್ಯಾಪ್ತಿಯಲ್ಲಿ ಮನೆ, ಜಾನುವಾರ ಮತ್ತು ಬೆಳೆ ಹಾನಿ ಆಗಿರುವ ವರದಿಯಾಗಿದೆ. ಈಗಾಗಲೇ ಸ್ಥಳೀಯ ಅಧಿಕಾರಿಗಳಿಗೆ ನೀಡಿದ ಸೂಚನೆಯಂತೆ ಸ್ಥಳ ಭೇಟಿ ನೀಡಿ ಅಧಿಕಾರಿಗಳು ಹಾನಿ ಪ್ರದೇಶ ಅಂದಾಜಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಸಭೆಯಲ್ಲಿ ತಿಳಿಸಿದರು.
ಬೆಳೆ ಹಾನಿ ಹಾಗೂ ಮನೆ ಹಾನಿ ಕುರಿತು ಕಂದಾಯ, ಕೃಷಿ, ತೋಟಗಾರಿಕೆ, ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ಕೈಗೊಳ್ಳಬೇಕು. ರೈತರಿಂದ ಅಥವಾ ಫಲಾನುಭವಿಗಳಿಂದ ಯಾವುದೇ ರೀತಿಯಲ್ಲಿ ದೂರು ಬರದಂತೆ ಎಚ್ಚರಿಕೆಯಿಂದ, ಪಾರದರ್ಶಕವಾಗಿ ಸಮೀಕ್ಷೆ ಕೈಗೊಳ್ಳಬೇಕೆಂದು ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಕಲಘಟಗಿಯಲ್ಲಿ ಅಂದಾಜು ೨೦೫ ಎಕರೆ ಮಾವು ಸೇರಿದಂತೆ ಸುಮಾರು ೪೫೦ ಎಕರೆ ಪ್ರದೇಶದಲ್ಲಿ ಮಾವು, ಬಾಳೆ, ತರಕಾರಿ ಬೆಳೆಗಳಿಗೆ ಹಾನಿ ಆಗಿದೆ ಎಂದು ಕಲಘಟಗಿ ತಹಸಿಲ್ದಾರ್ ಮಾಹಿತಿ ನೀಡಿದ್ದಾರೆ. ಆದ?ÀÄ್ಟ ಬೇಗ ಜಂಟಿ ಸಮೀಕ್ಷೆ ಮಾಡಿ, ನಿಖರವಾದ ವರದಿ ಸಲ್ಲಿಸಬೇಕು. ಹವಾಮಾನ ಆಧಾರಿತ ಬೆಳೆ ವಿಮೆ ಮಾಡಿರುವ ರೈತರಿಗೆ ಪರಿಹಾರ ದೊರಕುವಂತೆ ಮಾಡಲು ವಿಮಾ ಕಂಪನಿ ಪ್ರತಿನಿಧಿಗಳಿಗೆ ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಮಾರ್ಚ್ ೨೦ ಮತ್ತು ೨೧ ರಂದು ಸಹ ಜಿಲ್ಲೆಯಲ್ಲಿ ಮಳೆ, ಗುಡುಗು, ಸಿಡಿಲು, ಮಿಂಚು ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲ ಹಂತದ ಅಧಿಕಾರಿಗಳು ಈ ಕುರಿತು ಮುನ್ನೆಚ್ಚರಿಕೆ ವಹಿಸಬೇಕೆಂದು ಅವರು ತಿಳಿಸಿದರು.
ಅಧಿಕಾರಿಗಳು ಮೊಬೈಲ್ ಸ್ವಿಚ್ ಆಫ್ ಮಾಡಬಾರದು: ಜಿಲ್ಲಾ ಮಟ್ಟ, ತಾಲೂಕು ಮಟ್ಟ ಹಾಗೂ ಹೋಬಳಿ ಮತ್ತು ಗ್ರಾಮ ಮಟ್ಟದ ಎಲ್ಲ ಹಂತದ ವಿವಿಧ ಇಲಾಖೆಗಳ ಸರಕಾರಿ ಅಧಿಕಾರಿ, ಸಿಬ್ಬಂದಿಗಳು ತಮ್ಮ ಮೊಬೈಲ್ ಬಂದ ಇಡಬಾರದು. ವಿಶೇ?Àವಾಗಿ ರಾತ್ರಿ ವೇಳೆ ಸ್ವಿಚ್ ಆಫ್ ಮಾಡಬಾರದು. ಅಕಾಲಿಕ ಮಳೆ ಅಥವಾ ಇತರ ತೊಂದರೆಗಳಿಗಾಗಿ ಸಾರ್ವಜನಿಕರು ತುರ್ತಾಗಿ ಸಂಪರ್ಕಿಸುವ ಸಾಧ್ಯತೆ ಇರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ತಾವೇ ಸ್ವತ: ರ‍್ಯಾಂಡಮ್ ಆಗಿ ಅಧಿಕಾರಿಗಳಿಗೆ ಅನಿರೀಕ್ಷಿತ ಮೊಬೈಲ್ ಕರೆ ಮಾಡಿ, ಪರೀಕ್ಷಿಸುತ್ತೇನೆ. ಕರೆ ಸ್ವೀಕರಿಸದಿದ್ದಲ್ಲಿ ಅಥವಾ ಸ್ವಿಚ್ ಆಫ್ ಇದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಸಿದ್ದರು.
ಜಾನುವಾರುಗಳ ಜೀವ ಹಾನಿ: ೨೦೨೬, ಮಾರ್ಚ್ ತಿಂಗಳಲ್ಲಿ ಅಕಾಲಿಕ ಮಳೆ ಹಾಗೂ ಸಿಡಿಲು ಬಡಿದಿದ್ದರಿಂದ ಧಾರವಾಡ ತಾಲೂಕಿನ ಹಳೆತೆಗೂರು ಗ್ರಾಮದಲ್ಲಿ ಒಂದು ಎಮ್ಮೆ, ನವಲಗುಂದ ತಾಲೂಕಿನ ದಾಟ್ನಾಳ ಗ್ರಾಮದಲ್ಲಿ ಒಂದು ಎಮ್ಮೆ, ಹುಬ್ಬಳ್ಳಿ ತಾಲೂಕಿನ ಗೋಕುಲ್ ಗ್ರಾಮದಲ್ಲಿ ಒಂದು ಕುದುರೆ, ಕಲಘಟಗಿ ತಾಲೂಕಿನ ಮಾಚಾಪುರ ಗ್ರಾಮದಲ್ಲಿ ಆಲಿಕಲ್ಲು ಮಳೆಯಿಂದಾಗಿ ಎರಡು ಕರುಗಳು ಸಾವನ್ನಪ್ಪಿವೆ.
ಮತ್ತು ನವಲಗುಂದ ತಾಲೂಕಿನ ತಿರ್ಲಾಪುರ ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಮೇಕೆಗಳು ಮತ್ತು ಕುರಿಗಳು ಸೇರಿ ೩೨ ಸಣ್ಣ ಪ್ರಾಣಿಗಳ ಜೀವ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಗಳು ತಿಳಿಸಿದರು.
ಖಾಸಗಿ ಕೊಳವೆ ಭಾವಿಯಿಂದ ನೀರು ಸರಬರಾಜು : ಧಾರವಾಡ ತಾಲೂಕಿನ ಹೊಸಟ್ಟಿ, ಮಂಡಿಹಾಳ, ಬೇಲೂರು, ಮುಗದ ಗ್ರಾಮಗಳಲ್ಲಿ ಹಾಗೂ ಹುಬ್ಬಳ್ಳಿ ತಾಲೂಕಿನ ನೂಲ್ವಿ, ಅದರಗುಂಚಿ, ಕುರುಡಿಕೆರೆ ಗ್ರಾಮಗಳಲ್ಲಿ ಮತ್ತು ಕಲಘಟಗಿ ತಾಲೂಕಿನ ನೆಲ್ಲಿಹರವಿ ತಾಂಡಾ, ಬಿ ಹೂಲಿಕಟ್ಟಿ, ದ್ಯಾಮನಕೋಡ ಗ್ರಾಮಗಳಲ್ಲಿ ಪ್ರಸ್ತುತ ಖಾಸಗಿ ಕೊಳವೆ ಭಾವಿಗಳ ಮೂಲಕ ನೀರ ಸರಬರಾಜು ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಗಳು ತಿಳಿಸಿದರು.
ಗುಡುಗು, ಸಿಡಿಲು, ಮಿಂಚು ಕುರಿತು ಜಾಗೃತಿ: ಸಿಡಿಲು, ಗುಡುಗು, ಮಿಂಚು ಮತ್ತು ರಬಸದ ಮಳೆಯಿಂದ ರಕ್ಷಿಸಿಕೊಳ್ಳುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳ ಬಗ್ಗೆ ಕರ ಪತ್ರಗಳನ್ನು ವಿತರಿಸಬೇಕು. ಮತ್ತು ಗ್ರಾಮಗಳಲ್ಲಿ ಸ್ಥಳಿಯ ಸಂಸ್ಥೆಗಳು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೋಳ್ಳಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಗುಡುಗು, ಸಿಡಿಲಿನ ಸಮಯದಲ್ಲಿ ಜನರು ಹೊರಗಡೆ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಮರಗಳ ಕೆಳಗೆ ನಿಲ್ಲುವುದು, ತೆರೆದ ಮೈದಾನಗಳಲ್ಲಿ ಇರುವುದನ್ನು ತಪ್ಪಿಸಬೇಕು. ವಿದ್ಯುತ್ ಕಂಬಗಳು, ಲೋಹದ ವಸ್ತುಗಳು ಮತ್ತು ನೀರಿನ ಪ್ರದೇಶಗಳಿಂದ ದೂರವಿರುವುದು ಸುರಕ್ಷಿತ ಕ್ರಮವಾಗಿದೆ.
ಮನೆಗಳಲ್ಲಿ ಇದ್ದಾಗ ವಿದ್ಯುತ್ ಉಪಕರಣಗಳನ್ನು ಬಳಸದಿರುವುದು, ಮೊಬೈಲ್ ಚಾರ್ಜ್ ಮಾಡುವುದನ್ನು ತಪ್ಪಿಸುವುದು ಮತ್ತು ಕಿಟಕಿಗಳು, ಬಾಗಿಲುಗಳಿಂದ ದೂರವಿರುವುದು ಒಳಿತು. ರೈತರು ತಮ್ಮ ಪಶುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಕಾಪಾಡಿಕೊಳ್ಳಬೇಕು ಮತ್ತು ಗ್ರಾಮ ಪಂಚಾಯಿತಿಗಳು, ಅಂಗನವಾಡಿ ಮತ್ತು ಶಾಲೆಗಳ ಮೂಲಕ ಸಾರ್ವಜನಿಕ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶಾಲಾಂ ಹುಸೇನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಕೆ.ಸಿ.ಭದ್ರಣ್ಣವರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಡಾ. ಎಸ್ ವ್ಹಿ. ಸಂತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಜಗದೀಶ ಪಾಟೀಲ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂ.ಹೊನಕೇರಿ ಹಾಗೂ ಎಲ್ಲ ತಾಲೂಕುಗಳ ತಹಸೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.






















