ಪಿಎಂ-ವಿಶ್ವಕರ್ಮ ಯೋಜನೆಯ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು:ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್

ಕಲಬುರಗಿ, ಡಿ.03: ಪಿಎಂ-ವಿಶ್ವಕರ್ಮ ಯೋಜನೆಯ ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಂಡು ತಮ್ಮ ಜೀವನ ಸುಧಾರಿಸಿಕೊಳ್ಳುವುದರ ಜೊತೆಗೆ ಆರ್ಥಿಕವಾಗಿ ಸಬಲರಾಗಬೇಕು ಎಂದು ಕಲಬುರಗಿ ಜಿಲ್ಲಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಕರೆ ನೀಡಿದರು.
ಮಂಗಳವಾರ ಕಲಬುರಗಿಯ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸಹಾಯ ಶಾಖಾ ಕಛೇರಿಯಲ್ಲಿ ಭಾರತ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸಹಾಯ ಕಛೇರಿ ಹುಬ್ಬಳ್ಳಿ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ, ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಿಎಂ-ವಿಶ್ವಕರ್ಮ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮುಂಬರುವ ದಿನಗಳಲ್ಲಿ ಪಿಎಂ-ವಿಶ್ವಕರ್ಮ ಯೋಜನೆಯ ಫಲಾನುಭವಿಗಳು ತಯಾರಿಸಿದ ವಸ್ತುಗಳಿಗೆ ಉತ್ತೇಜನೆ ನೀಡಲು ವಸ್ತು ಪ್ರದರ್ಶನ ಆಯೋಜಿಸಬೇಕು. ಪಿಎಂ-ವಿಶ್ವಕರ್ಮ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುμÁ್ಠನಗೊಳಿಸಲು ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಕಲಬುರಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಅಬ್ದುಲ್ ಅಜೀಮ್ ಅವರು ಪಿಎಂ-ವಿಶ್ವಕರ್ಮ ಯೋಜನೆಯ ಧ್ಯೇಯೋದ್ದೇಶಗಳನ್ನು ವಿವರಿಸಿದರು. ಭಾರತ ದೇಶವು ಸಾಂಪ್ರಾದಾಯಿಕ ಕಲೆಯಲ್ಲಿ ಜಗತ್ ಪ್ರಸಿದ್ಧವಾಗಿದ್ದು, ಆ ಕಲೆಗೆ ಆರ್ಥಿಕತೆಗೆ ಜೋಡಿಸಲು ವರವಾನವಾಗಿದೆ. ಈ ಯೋಜನೆಯ ಮೂಲಕ ತಮ್ಮ ಕಲೆಯನ್ನು ಜೀವಂತವಾಗಿಟ್ಟುಕೊಂಡು ಜಾಗತಿಕ ಮಟ್ಟದ ತಂತ್ರಜ್ಞಾನದೊಂದಿಗೆ ವೃದ್ಧಿಗೊಳಿಸಿ ಆರ್ಥಿಕವಾಗಿ ಸಬಲರಾಗಬೇಕೆಂದು ಕೋರಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಹುಬ್ಬಳ್ಳಿ ಎಂಎಸ್‍ಎಂಇ-ಡಿಎಫ್‍ಓ ಜಂಟಿ ನಿರ್ದೇಶಕರಾದ ಶಶಿಕುಮಾರ ಎಂ. ಅವರು ಮಾತನಾಡಿ, ತಮ್ಮ ಕಛೇರಿ ವ್ಯಾಪ್ತಿಗೆ ಬರುವ ಕರ್ನಾಟಕದ 14 ಜಿಲ್ಲೆಗಳ ಪೈಕಿ ಕಲಬುರಗಿ ಜಿಲ್ಲೆಯಲ್ಲಿ ಪಿಎಂ-ವಿಶ್ವಕರ್ಮ ಯೋಜನೆಯನ್ನು ಸುಗಮವಾಗಿ ಮತ್ತು ಉತ್ತಮ ರೀತಿಯಲ್ಲಿ ಅನುμÁ್ಠನಗೊಳಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತರಬೇತಿ ಪೂರೈಸಿದ ಫಲಾನುಭವಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಗ್ರಗಣ್ಯ ವ್ಯವಸ್ಥಾಪಕ ರವಿಗೌಡ, ಹುಬ್ಬಳ್ಳಿ ಎಂಎಸ್ ಎಂಇ-ಡಿಎಫ್‍ಓ ಉಪನಿರ್ದೇಶಕ ಕಿರಣ ಕುಮಾರ, ಸಹಾಯಕ ನಿರ್ದೇಶಕ ಧರ್ಮಜೀತ್ ಸಿಂಗ್ ಸೇರಿದಂತೆ ಕಲಬುರಗಿ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.
ಕಾರ್ಯಕ್ರಮದ ಉದ್ಘಾಟನೆ ನಂತರ ವಿವಿಧ ವಿಷಯಗಳ ಮೇಲೆ ತಾಂತ್ರಿಕ ಅಧಿವೇಶನಗಳು ಜರುಗಿತು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ 100 ಕ್ಕಿಂತ ಹೆಚ್ಚು ಫಲಾನುಭವಿಗಳು ಪಾಲ್ಗೊಂಡಿದರು.
ಹುಬ್ಬಳ್ಳಿ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸಹಾಯ ಕಚೇರಿಯ (ಎಂಎಸ್‍ಎಂಇ-ಡಿಎಫ್‍ಓ) ಉಪನಿರ್ದೇಶಕ ಬಿ.ಎಸ್. ಜವಳಗಿ ಸ್ವಾಗತಿಸಿದರು. ಕಲಬುರಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಜಾಫರ್ ಖಾಸಿಮ್ ಅನ್ಸಾರಿ ಕಾರ್ಯಕ್ರಮ ನಿರೂಪಿಸಿದರು.