
ಬೀದರ್: ಏ.29:ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಸ್ಥಳದಲ್ಲಿಯೂ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೆ ತರಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು, ಬೋರ್‍ವೆಲ್ ದುರಸ್ತಿ ಹಾಗೂ ಹೊಸ ನೀರಿನ ಮೂಲಗಳನ್ನು ಗುರುತಿಸುವ ಕಾರ್ಯವನ್ನು ತಕ್ಷಣ ಆರಂಭಿಸಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಹೇಳಿದರು.
ಬೀದರ್ ದಕ್ಷಿಣ ಕ್ಷೇತ್ರದ ಚಿಟ್ಟಗುಪ್ಪ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆಯನ್ನು ನಡೆಸಿ, ಬೇಸಿಗೆಯ ಸಮಯದಲ್ಲಿ ಉಂಟಾಗುವ ಕುಡಿಯುವ ನೀರಿನ ಸಮಸ್ಯೆಯನ್ನು ತಡೆಯಲು ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಸ್ಥಳದಲ್ಲಿಯೂ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೆ ತರುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು, ಬೋರ್‍ವೆಲ್ ದುರಸ್ತಿ ಹಾಗೂ ಹೊಸ ನೀರಿನ ಮೂಲಗಳನ್ನು ಗುರುತಿಸುವ ಕಾರ್ಯವನ್ನು ತಕ್ಷಣ ಆರಂಭಿಸಬೇಕು ಎಂದು ತಿಳಿಸಿದರು.
ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಿ, ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸಲು ಬದ್ಧರಾಗಿರಬೇಕು ನೀರೇ ಜೀವ. ನೀರಿಲ್ಲದೆ ಬದುಕು ಸಾಧ್ಯವಿಲ್ಲ. ಬೇಸಿಗೆಯ ಸಮಯದಲ್ಲಿ ನಮ್ಮ ಗ್ರಾಮಗಳಲ್ಲಿ ಮತ್ತು ಪಟ್ಟಣಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವುದು ಹೆಚ್ಚಾಗದಂತೆ ತುರ್ತು ಕ್ರಮಗಳನ್ನು ಕೈಗೊಳ್ಳುವ ಮೂಲಕ ಪರಿಹರಿಸಬೇಕಾಗಿದೆ.
ಈ ಹಿನ್ನೆಲೆಯಲ್ಲಿ, ಎಲ್ಲಾ ಅಧಿಕಾರಿಗಳು ಯಾವುದೇ ಗ್ರಾಮದಲ್ಲಿ ನೀರಿನ ಕೊರತೆ ಉಂಟಾಗದಂತೆ ಮುಂಚಿತವಾಗಿಯೇ ನೀರಿನ ಮೂಲಗಳನ್ನು ಪರಿಶೀಲಿಸಿ, ಬೋರ್‍ವೆಲ್‍ಗಳ ದುರಸ್ತಿ ಕಾರ್ಯಗಳನ್ನು ತಕ್ಷಣ ಕೈಗೊಳ್ಳಬೇಕು. ಹಾಳಾಗಿರುವ ಪಂಪ್‍ಗಳು, ಮೋಟಾರ್‍ಗಳು, ಪೈಪ್‍ಲೈನ್‍ಗಳನ್ನು ಸರಿಪಡಿಸಬೇಕು.
ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡುವ ವ್ಯವಸ್ಥೆಯನ್ನು ಕೂಡ ತಕ್ಷಣ ಜಾರಿಗೆ ತರಬೇಕು. ಜನರಿಗೆ ನೀರು ಸಿಗದೇ ಸಂಕಷ್ಟ ಅನುಭವಿಸುವ ಪರಿಸ್ಥಿತಿ ಬರಬಾರದು. ಇದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ಗ್ರಾಮ ಪಂಚಾಯಿತಿ, ತಾಲ್ಲೂಕು ಆಡಳಿತ ಮತ್ತು ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಒಟ್ಟಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ನಾವು ಈ ಸಮಸ್ಯೆಯನ್ನು ಯಶಸ್ವಿಯಾಗಿ ಎದುರಿಸಬಹುದು
ರಸ್ತೆ, ಕುಡಿಯುವ ನೀರು ವಿಧ್ಯುತ ಸೇರಿದಂತೆ ಯಾವುದೇ ರೀತಿಯ ಮೂಲ ಸೌಕರ್ಯ ಕೊರತೆಯಾಗದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ಸಮಯದಲ್ಲಿ, ನಮ್ಮ ಸಾರ್ವಜನಿಕರಿಗೂ ನಾನು ಮನವಿ ಮಾಡುತ್ತೇನೆ – ನೀರನ್ನು ವ್ಯರ್ಥ ಮಾಡಬೇಡಿ. ನೀರನ್ನು ಸಂರಕ್ಷಿಸಿ, ಜವಾಬ್ದಾರಿಯುತವಾಗಿ ಬಳಸಿ. ನಾವು ಎಲ್ಲರೂ ಸೇರಿ ನೀರನ್ನು ಉಳಿಸಿದರೆ, ಮುಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಕಡಿಮೆ ಮಾಡಬಹುದು ಎಂದರು.
ಈ ಸಂದರ್ಭದಲ್ಲಿ ಚಿಟ್ಟಗುಪ್ಪ ತಹಶೀಲ್ದಾರ್ ಮಂಜುನಾಥ್ ಪಾಂಚಾಳ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿ ಬಿರಾದಾರ ಇದ್ದರು.






















