
ಬೀದರ್ : ಜ.೩೧:ಕೆಟ್ಟು ನಿಂತ ಶುದ್ಧ ನೀರಿನ ಘಟಕಗಳ ದುರಸ್ತಿಗೆ ಕ್ರಮವಹಿಸಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕೆಂದು ಬೀದರ ತಾಲ್ಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್ ಹೇಳಿದರು.
ಅವರು ಶುಕ್ರವಾರ ನಗರದ ಬೀದರ ತಾಲ್ಲೂಕ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ಗ್ರಾಮಗಳಲ್ಲಿ ಸಾರ್ವಜನಿಕರ ಮೇಲಿನ ನಾಯಿಗಳ ದಾಳಿಯನ್ನು ತಡೆಯಬೇಕು. ಸಾರ್ವಜನಿಕ ಶೌಚಾಲಯಗಳು ಮುಕ್ತ ಉಪಯೋಗಕ್ಕೆ ಅನುವುಮಾಡಿಕೊಡಬೇಕು. ಕರ ವಸೂಲಾತಿಗೆ ಹೆಚ್ಚು ಒತ್ತು ನೀಡಬೇಕೆಂದರು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರಾದ ಸಂಜು ಕುಮಾರ್ ಸುದೇಶ್ ಕೊಡೆ ಇತರೆ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು























