Home ಜಿಲ್ಲೆ ಕಲಬುರಗಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಳವಾರ ಆಯ್ಕೆ

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಳವಾರ ಆಯ್ಕೆ

ಗದಗ: ಕ್ರೀಡಾ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸಿ, ವಿದ್ಯಾರ್ಥಿಗಳನ್ನು ತಾಲೂಕು, ವಿಭಾಗ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಗಳಿಗೆ ಸಜ್ಜುಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಜೇವರ್ಗಿಯ
ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ
ಷಣ್ಮುಖ ಶಿವಯೋಗಿ ಸ್ಮಾರಕ ಆಂದೋಲ ಸಂಗನಗೌಡ ಪೆÇಲೀಸ್ ಪಾಟೀಲ್ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಪರಸಪ್ಪ ಎನ್. ತಳವಾರ ಅವರು 2025-26ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸೆಪ್ಟೆಂಬರ್ 12ರಂದು ಗದಗದ ಜೆ.ಟಿ. ಪದವಿ ಕಾಲೇಜಿನ ಸಭಾಭವನದಲ್ಲಿ ನಡೆಯುವ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು.

1974ರ ಜುಲೈ 1ರಂದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಾಲಗಿತ್ತಿ ಗ್ರಾಮದಲ್ಲಿ ರೈತ ಕುಟುಂಬದಲ್ಲಿ ಜನಿಸಿದ ತಳವಾರ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಬಳಿಕ ಡಂಬಳದ ಜಗದ್ಗುರು ತೋಂಟದಾರ್ಯ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ, ಗದಗದ ಬಸವೇಶ್ವರ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಹಾಗೂ ಚಿಕ್ಕಬಳ್ಳಾಪುರದ ಸರ್ಕಾರಿ ಸಿ.ಪಿ.ಎಡ್. ಕಾಲೇಜಿನಲ್ಲಿ ಸಿ.ಪಿ.ಎಡ್., ಗದಗದ ಪ್ರಭುರಾಜೇಂದ್ರ ಬಿ.ಪಿ.ಎಡ್. ಕಾಲೇಜಿನಲ್ಲಿ ಬಿ.ಪಿ.ಎಡ್. ಶಿಕ್ಷಣ ಪಡೆದಿದ್ದಾರೆ.

2003ರಿಂದ 2009ರವರೆಗೆ ಗದಗದ ಬಸವೇಶ್ವರ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಅವರು, 2009ರಿಂದ ಜೇವರ್ಗಿಯ ಷಣ್ಮುಖ ಶಿವಯೋಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರ್ಣಕಾಲಿಕ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆಯಲ್ಲಿ ಆಸಕ್ತಿಯುಳ್ಳ ವಿದ್ಯಾರ್ಥಿಗಳನ್ನು ಗುರುತಿಸಿ ತರಬೇತಿ ನೀಡುವ ಮೂಲಕ ಹಲವು ಕ್ರೀಡಾಪಟುಗಳು ವಿವಿಧ ಹಂತಗಳಲ್ಲಿ ಸಾಧನೆ ಮಾಡಲು ಪ್ರೇರಣೆ ನೀಡಿದ್ದಾರೆ.

ಈ ಹಿಂದೆ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗುಲ್ಬರ್ಗ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೂ ಅವರು ಭಾಜನರಾಗಿದ್ದರು. ಎಸ್.ಎಸ್. ಆಡಿನ್ ಜನಸೇವಾ ಸಂಸ್ಥೆ, ಹೊಳೆಆಲೂರ ಇವರಿಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ತಮ್ಮ ಸಾಧನೆಗೆ ಗುರುಗಳು, ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದವರ ಪೆÇ್ರೀತ್ಸಾಹವೇ ಪ್ರೇರಣೆಯಾಗಿದೆ ಎಂದು ತಳವಾರ ಅವರು ಸ್ಮರಿಸಿದ್ದಾರೆ. ವಿಶೇಷವಾಗಿ ಲಿಂಗೈಕ್ಯ ಡಾ. ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳು ಹಾಗೂ ತಮ್ಮ ನೆಚ್ಚಿನ ಗುರುಗಳು, ಖ್ಯಾತ ಶಿಕ್ಷಣ ತಜ್ಞರು ಹಾಗೂ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿಗಳಾದ ಪೆÇ್ರ. ಎಸ್.ಎಸ್. ಪಟ್ಟಣ್ ಶೆಟ್ಟರ್ ಅವರ ಮಾರ್ಗದರ್ಶನವನ್ನು ಕೃತಜ್ಞತೆಯಿಂದ ನೆನಪಿಸಿಕೊಂಡಿದ್ದಾರೆ.