Home ಜಿಲ್ಲೆ ಪ್ರತಿಭಾ ಪುರಸ್ಕಾರ ಸಮಾರಂಭ

ಪ್ರತಿಭಾ ಪುರಸ್ಕಾರ ಸಮಾರಂಭ

ಧಾರವಾಡ,ಮೇ..೨೮:ಭಾರತವನ್ನು ಮತ್ತಷ್ಟು ಶಕ್ತಿಶಾಲಿ ರಾಷ್ಟçವನ್ನಾಗಿ ಮಾಡುವ ಜವಾಬ್ದಾರಿ ಯುವಕರ ಮೇಲಿದೆ ಎಂದು ಸಮಾಜ ಸೇವಕರು ಹಾಗೂ ಸ್ವರ್ಣ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ಡಾ. ಸಿ.ಹೆಚ್.ವಿ.ಎಸ್.ವಿ ಪ್ರಸಾದ್ ಹೇಳಿದರು.


ಸ್ವಾಮಿ ವಿವೇಕಾನಂದ ರಕ್ತದಾನ ಫೌಂಡೇಶನ್ ಹಾಗೂ ಸ್ವರ್ಣ ಗ್ರೂಪ್ ಆಫ್ ಕಂಪನೀಸ್ ಸಹಯೋಗದಲ್ಲಿ ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಂಸ್ಕöÈತ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ೯೦% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ವಿವೇಕ ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಡಾ. ಎಚ್. ವಿ. ಡಂಬಳೆ, ಮಹಾಪೌರರಾದ ಜ್ಯೋತಿ ಪಾಟೀಲ್ ಜಿ.ಎಸ್ ಫೌಂಡೇಷನ್ ಸಂಸ್ಥಾಪಕ ಶಿವಕುಮಾರ್ ರಟ್ಟಿಹಳಿ , ಉಪಾಧ್ಯಕ್ಷ ವಿದ್ಯಾನಂದ ಸ್ಟಾವರ್ಮಠ್, ಶಿವಯೋಗಿ ಹಾವೇರಿ, ಚಂದ್ರು, ಅಶ್ವಿನಿ ಅಂಗಡಿ, ಉಪಸ್ಥಿತರಿದ್ದರು.