
ಕಾಳಗಿ : ಜು.1:2026 ನೆ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ 90 ಶೇಕಡಾ ಹೆಚ್ಚು ಅಂಕ ಗಳಿಸಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಜುಲೈ 12 ರಂದು ಕಲಬುರಗಿ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಕುರುಬ ಸಮಾಜದ ತಾಲೂಕು ಅಧ್ಯಕ್ಷ ರೇವಣಸಿದ್ಧ ಅರಣಕಲ್ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕ ಪ್ರದೇಶ ಕುರುಬ ಗೊಂಡ ನೌಕರರ ಸಂಘ, ಕರ್ನಾಟಕ ಪ್ರದೇಶ ಕುರುಬ ಗೊಂಡ ಸಂಘ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕಸಂಘದ ಸಂಯುಕ್ತಾಶ್ರಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ 90 ಶೇಕಡಾ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಜುಲೈ 5ರ ಒಳಗೆ ಅಂಕ ಪಟ್ಟಿ ಜಾತಿ ಪ್ರಮಾಣ ಪತ್ರದೊಂದಿಗೆ ಕುರುಬ ಗೊಂಡ ಸರಕಾರಿ ನೌಕರರ ಸಂಘದ ಕಾಳಗಿ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ ಕೂಪನೂರ (9902560390) ವಿಶ್ವ ಸಾಲಹಳ್ಳಿ (9844397097 ) ಅವರನ್ನು ಸಂಪರ್ಕಿಸಬೇಕು ಎಂದು ಹೇಳಿದರು.
ಸಮಾರಂಭದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ ಪಾಟೀಲ, ಯತಿಂದ್ರ ಸಿದ್ದರಾಮಯ್ಯ ಹಾಗೂ ಶಾಸಕರು ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕರ್ನಾಟಕ ಗೊಂಡ ಕುರುಬ ಸಂಘದ ಅಧ್ಯಕ್ಷ ರೇವಣಸಿದ್ಧ ಅರಣಕಲ್, ಕಾರ್ಯಧ್ಯಕ್ಷ ಹಣಮಯ್ಯ ಬೆಂಕಿ ಮುಗಟಾ, ವಿಶ್ವ ಪೂಜಾರಿ, ಚಂದ್ರಶೇಖರ ಪಾಟೀಲ ಇದ್ದರು.























