
ಬೀದರ್: ಜು.೮:ಕರ್ನಾಟಕ ರಾಜ್ಯ ಮಾದಿಗ ನೌಕರರ ಸಂಘದ ಬೀದರ್ ಜಿಲ್ಲಾ ಘಟಕದ ವತಿಯಿಂದ ನಗರದ ಡಾ. ಪಟ್ಟದೇವರು ರಂಗಮAದಿರದಲ್ಲಿ ಭಾನುವಾರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ವಿಜೃಂಭಣೆಯಿAದ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಮನೋಹರ ಎಂ.ಎಸ್. ಅವರು ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗುಲ್ಬರ್ಗ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ದೇವದಾಸ ಮಾಲೆ, ಶಿಕ್ಷಣವೇ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪ್ರಮುಖ ಸಾಧನವಾಗಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಇಂತಹ ಪುರಸ್ಕಾರಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ ಮತ್ತಷ್ಟು ಸಾಧನೆಗೆ ಪ್ರೇರಣೆ ನೀಡುತ್ತವೆ ಎಂದು ಹೇಳಿದರು.
ಮುಖ್ಯ ಅತಿಥಿ ಮಹಮ್ಮದ್ ಅಬ್ದುಲ್ ಖದಿರ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಸೀಮಿತವಾಗದೆ ಜ್ಞಾನ, ಕೌಶಲ್ಯ, ಸಂಶೋಧನಾ ಮನೋಭಾವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ ಉತ್ತಮ ಶಿಕ್ಷಣ ದೊರೆಯಲು ಸಂಘ-ಸAಸ್ಥೆಗಳು ಕೈಜೋಡಿಸಬೇಕೆಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಡಾ. ದೇವದಾಸ ತುಮಕುಂಟೆ ಮಾತನಾಡಿ, ಮಾದಿಗ ನೌಕರರ ಸಂಘವು ನೌಕರರ ಹಿತಾಸಕ್ತಿಯ ಜೊತೆಗೆ ಸಮಾಜದ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಮೂಲಕ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ನಡೆಸುತ್ತಿದೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿ ರಂಗೋಲಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ನೈತಿಕತೆ, ಶಿಸ್ತು, ಸಾಮಾಜಿಕ ಬದ್ಧತೆ ಹಾಗೂ ಸೇವಾ ಮನೋಭಾವವನ್ನು ರೂಢಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ವಿದ್ಯಾರ್ಥಿವೇತನ, ವೃತ್ತಿ ಮಾರ್ಗದರ್ಶನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಚಂದ್ರಕಾAತ ಹಿಪ್ಪಳಗಾಂವ್, ಗೋಖಲೆ, ರಾಜು ಕಡಿಯಾಳ, ಫೆರ್ನಾಂಡಿಸ್ ಹಾಗೂ ರಜಾಕ್ ಮಾದರ ಅವರು ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ, ವೃತ್ತಿಪರ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನಿಸಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಅಧಿಕಾರಿಗಳು, ಶಿಕ್ಷಕರು, ವೈದ್ಯರು, ಸಮಾಜಸೇವಕರು ಹಾಗೂ ಸಾಧಕರನ್ನು ಶಾಲು ಹೊದಿಸಿ, ಫಲಕ ಮತ್ತು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿದ ಗಣ್ಯರು ಸಮಾಜ ನೀಡಿದ ಗೌರವವು ತಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಸಮಾಜದ ಅಭಿವೃದ್ಧಿಗೆ ಹೆಚ್ಚಿನ ಸೇವೆ ಸಲ್ಲಿಸುವ ಸಂಕಲ್ಪ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಸ್ಪಷ್ಟ ಗುರಿ ಹೊಂದಿ ನಿರಂತರ ಪರಿಶ್ರಮದಿಂದ ಉನ್ನತ ಸಾಧನೆ ಮಾಡಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಜನಪ್ರತಿನಿಧಿಗಳು, ಶಿಕ್ಷಣ ತಜ್ಞರು, ಸರ್ಕಾರಿ ಅಧಿಕಾರಿಗಳು, ಸಮಾಜದ ಮುಖಂಡರು, ಪೋಷಕರು ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಂಘದ ಕಾರ್ಯದರ್ಶಿ ಜೈಭಾರತ ಕಾರ್ಯಕ್ರಮ ನಿರೂಪಿಸಿದರು.




























