Home ಜಿಲ್ಲೆ ಬರಗಾಲದ ಹಿನ್ನೆಲೆಯಲ್ಲಿ ನೀರು ಮಿತ ಬಳಕೆಗೆ ತಾಪಂ ಇಒ ಮಾಣಿಕ್‍ರಾವ್ ಪಾಟೀಲ್ ಕರೆ

ಬರಗಾಲದ ಹಿನ್ನೆಲೆಯಲ್ಲಿ ನೀರು ಮಿತ ಬಳಕೆಗೆ ತಾಪಂ ಇಒ ಮಾಣಿಕ್‍ರಾವ್ ಪಾಟೀಲ್ ಕರೆ

ಬೀದರ್: ಬರಗಾಲದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರನ್ನು ಮಿತವಾಗಿ ಹಾಗೂ ಸಮರ್ಪಕವಾಗಿ ಬಳಸುವಂತೆ ಬೀದರ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕ್‍ರಾವ್ ಪಾಟೀಲ್ ಗ್ರಾಮಸ್ಥರಿಗೆ ಮನವಿ ಮಾಡಿದ್ದಾರೆ.
ತಾಲೂಕಿನ ಎಲ್ಲ 32 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ‘ನೀರು ಉಳಿಸಿ-ಭವಿಷ್ಯ ಉಳಿಸಿ’ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸಿ, ಗ್ರಾಮಸ್ಥರಲ್ಲಿ ನೀರಿನ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಕುಡಿಯುವ ನೀರನ್ನು ಅಗತ್ಯಕ್ಕೆ ತಕ್ಕಷ್ಟು ಮಾತ್ರ ಬಳಸಬೇಕು. ನಲ್ಲಿಗಳನ್ನು ತೆರೆದಿಟ್ಟು ನೀರು ಪೆÇೀಲು ಮಾಡಬಾರದು. ಕೊಳಾಯಿ, ಪೈಪ್‍ಗಳು ಹಾಗೂ ನೀರಿನ ಟ್ಯಾಂಕ್‍ಗಳಲ್ಲಿ ಸೋರಿಕೆ ಕಂಡುಬಂದರೆ ತಕ್ಷಣ ದುರಸ್ತಿ ಮಾಡಬೇಕು. ಕುಡಿಯುವ ನೀರನ್ನು ವಾಹನ, ರಸ್ತೆ, ಅಂಗಳ ಹಾಗೂ ಕಟ್ಟಡ ತೊಳೆಯಲು ಬಳಸಬಾರದು ಎಂದು ಅವರು ತಿಳಿಸಿದ್ದಾರೆ.
ತೋಟ ಹಾಗೂ ಇತರ ಬೆಳೆಗಳಿಗೆ ಸಾಧ್ಯವಾದಷ್ಟು ಮರುಬಳಕೆಯ ನೀರನ್ನು ಬಳಸಬೇಕು. ಮಳೆನೀರನ್ನು ಸಂಗ್ರಹಿಸುವ ಮೂಲಕ ಜಲಮೂಲಗಳ ಸಂರಕ್ಷಣೆಗೆ ಪ್ರತಿಯೊಬ್ಬರೂ ಸಹಕರಿಸಬೇಕು. ಸಾರ್ವಜನಿಕ ಕುಡಿಯುವ ನೀರಿನ ಮೂಲಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನೀರು ಪೆÇೀಲಾಗುತ್ತಿರುವುದು ಕಂಡುಬಂದರೆ ತಕ್ಷಣ ಸಂಬಂಧಿಸಿದ ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
ನೀರಿನ ಕೊರತೆಯ ಸಂದರ್ಭದಲ್ಲಿ ನೆರೆಹೊರೆಯವರ ಅಗತ್ಯವನ್ನೂ ಗಮನದಲ್ಲಿಟ್ಟುಕೊಂಡು ನೀರನ್ನು ಸಮರ್ಪಕವಾಗಿ ಬಳಸಬೇಕು ಎಂದು ಮನವಿ ಮಾಡಲಾಗಿದೆ.