Home ಜಿಲ್ಲೆ ಕಲಬುರಗಿ ಬರಪೀಡಿತ ಪಟ್ಟಿಯಿಂದ ತಾಲೂಕು ಹೊರಕ್ಕೆ: ಬಿಜೆಪಿಯಿಂದ ಪ್ರತಿಭಟನೆ

ಬರಪೀಡಿತ ಪಟ್ಟಿಯಿಂದ ತಾಲೂಕು ಹೊರಕ್ಕೆ: ಬಿಜೆಪಿಯಿಂದ ಪ್ರತಿಭಟನೆ

ಜೇವರ್ಗಿ: ಜೇವರ್ಗಿ ಹಾಗೂ ಯಡ್ರಾಮಿ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ತಾಲೂಕ ಸಂಚಾಲಕ ಸಿದ್ದು ಕೆರೂರ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಜೇವರ್ಗಿ ಹಾಗೂ ಯಡ್ರಾಮಿ ತಾಲೂಕು ಬರಪೀಡಿತ ಪಟ್ಟಿಯಿಂದ ಹೊರಗುಳಿಯಲು ತಾಲೂಕು ಆಡಳಿತ ಹಾಗೂ ಸ್ಥಳೀಯ ಶಾಸಕರು ಹಾಗೂ ನೂತನ ಸಣ್ಣ ನೀರಾವರಿ ಸಚಿವರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಜೇವರ್ಗಿ ಹಾಗೂ ಯಡ್ರಾಮಿ ತಾಲ್ಲೂಕುಗಳು ಇಲ್ಲದಿರುವುದು ಎರಡು ತಾಲೂಕಿನ ರೈತರಿಗೆ ಮಾಡಿದ ಅನ್ಯಾಯವಾಗಿದೆ. ತಾಲೂಕಿನಲ್ಲಿ ಬರದ ವಾಸ್ತವ ಸ್ಥಿತಿಯ ಕುರಿತು ಸ್ಥಳೀಯ ಶಾಸಕರು ಹಾಗೂ ಅಧಿಕಾರಿಗಳು ಸರ್ಕಾರಕ್ಕೆ ಸಮರ್ಪಕ ಮಾಹಿತಿ ನೀಡಿದ್ದಾರೆಯೇ ಎಂಬ ಅನುಮಾನ ಮೂಡುತ್ತಿದೆ. ಜೇವರ್ಗಿ ಮತ್ತು ಯಡ್ರಾಮಿ ತಾಲುಕು ಬರಪೀಡಿತ ಎಂದು ಘೋಷಿಸುವುದು ಬೇಡ ಎಂದು ಹೇಳಿದವರು ಯಾರು? ರೈತರಿಗೆ ಆಗುತ್ತಿರುವ ಅನ್ಯಾಯ ಸರಿಯೇ? ಎಂದು ಪ್ರಶ್ನಿಸಿದರು.
ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಸಚಿವರು ಹಾಗೂ ಶಾಸಕರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಜೇವರ್ಗಿ ಮತ್ತು ಯಡ್ರಾಮಿ ಬರಪೀಡಿತ ತಾಲೂಕು ಗಳೆಂದು ಘೋಷಿಸಲು ಸರ್ಕಾರದ ಮೇಲೆ ಒತ್ತಡ ಹೇರಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸಮಸ್ಯೆ ಎದುರಿಸುತ್ತಿರುವ ಜೇವರ್ಗಿ ಮತ್ತು ಯಡ್ರಾಮಿ ತಾಲೂಕು ಬರಪೀಡಿತ ಪಟ್ಟಿಯಿಂದ ಹೊರಗುಳಿದಿರುವುದು ರೈತರ ದುರ್ದೈವವಾಗಿದೆ. ಮಾನ್ಯ ಜಿಲ್ಲಾಧಿಕಾರಿಗಳು ಎರಡನೆಯ ಪಟ್ಟಿಯಲ್ಲಿ ಜೇವರ್ಗಿ ಹಾಗೂ ಯಡ್ರಾಮಿ ತಾಲ್ಲೂಕುಗಳ ಹೆಸರು ಬರುವ ಸಾದ್ಯತೆ ಇದೆ ಎಂದು ಹೇಳಿದ್ದಾರೆ. ಆದರೆ ಸರ್ಕಾರಕ್ಕೆ ಬರ ಪರಿಸ್ಥಿತಿಯ ವರದಿಯನ್ನೇ ಕಳುಹಿಸಿದ್ದಾರೋ ಅಥವಾ ಇಲ್ಲ ಎಂದು ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನ ರೈತರು ಅನುಮಾನ ಪಡುವಂತಾಗಿದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.