
ಬೀದರ್:ಜ.೩೧:ಬರುವ ತಾಲೂಕಾ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬೀದರ್ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೊಲಪೂರು ಅವರ ನೇತೃತ್ವದಲ್ಲಿ ಇಂದು ಪೂರ್ವ ಸಿದ್ಧತಾ ಸಭೆ ನಡೆಯಿತು. ಪಕ್ಷದ ಸಂಘಟನೆ ಬಲಪಡಿಸುವುದು, ಬೂತ್ ಮಟ್ಟದ ಕಾರ್ಯಚಟುವಟಿಕೆ, ಮತದಾರರೊಂದಿಗೆ ನೇರ ಸಂಪರ್ಕ ಹಾಗೂ ಚುನಾವಣಾ ತಂತ್ರ ರೂಪಿಸುವ ಕುರಿತು ಚರ್ಚೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೊಲಪೂರು ಅವರು, ತಾಲೂಕಾ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳು ಗ್ರಾಮೀಣ ಆಡಳಿತ, ಅಭಿವೃದ್ಧಿ ಮತ್ತು ಜನಸೇವೆಗೆ ಮಹತ್ವದ್ದಾಗಿದ್ದು, ಜೆಡಿಎಸ್ ಪಕ್ಷವು ಜನಪರ ಕಾರ್ಯಸೂಚಿಯೊಂದಿಗೆ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲಿದೆ ಎಂದು ತಿಳಿಸಿದರು. ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲಪಡಿಸಿ, ಕಾರ್ಯಕರ್ತರು ಶಿಸ್ತು ಮತ್ತು ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಕರೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಾಜ್ಜಾದ ಸಾಹೇಬ, ಜಿಲ್ಲಾ ಎಸ್‌ಸಿ ಘಟಕದ ಅಧ್ಯಕ್ಷ ದೇವೇಂದ್ರ ಸೋನಿ, ಎಸ್‌ಟಿ ಘಟಕದ ಜಿಲ್ಲಾಧ್ಯಕ್ಷ ಬೊಮಗೊಂಡ ಚಿಟ್ಟಾವಾಡಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ಕರಂಜಿ, ಸೂರ್ಯಕಾಂತ ಕಾಡವಾದ, ಜಾನ್ಸನ್ ಕಪಲಾಪೂರ, ಅಭಿ ಕಾಳೆ, ಜಾಫೇಟ್ ಕಡ್ಯಾಳ, ಅಶೋಕ ಕೋಡಗೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಪುತ್ರ ಮಾಳಗೆ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಭಾಗವಹಿಸಿದ್ದರು.























