
ಚೆನ್ನೈ: ಅ.೨೭-ತಮಿಳುನಾಡಿನ ಥೇಣಿ ಉಪಜೈಲಿನಿಂದ ೧೭ ವಿಚಾರಣಾಧೀನ ಕೈದಿಗಳು ಜೈಲು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಪರಾರಿ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಐವರು ಕೈದಿಗಳನ್ನು ಬಂಧಿಸಿದ್ದಾರೆ.
ಪೊಲೀಸರು ಕವಿ ವಿಲಕ್ಕು ಪ್ರದೇಶದ ಬಸ್ ನಿಲ್ದಾಣಗಳಲ್ಲಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ಪರಾರಿಯಾದ ಕೈದಿಗಳ ಪತ್ತೆಗಾಗಿ ಡ್ರೋನ್ ಗಳನ್ನೂ ಬಳಸಲಾಗುತ್ತಿದೆ. ಕೈದಿಗಳ ಭಾವಚಿತ್ರಗಳು ಮತ್ತು ಗುರುತಿನ ವಿವರಗಳನ್ನು ಮಧುರೈ, ದಿಂಡಿಗಲ್ ಹಾಗೂ ನೆರೆಯ ಕೇರಳದ ಇಡುಕ್ಕಿ ಜಿಲ್ಲೆಯ ಪೊಲೀಸ್ ತಂಡಗಳಿಗೆ ರವಾನಿಸಲಾಗಿದೆ.
ಭದ್ರತಾ ಲೋಪದ ಬಗ್ಗೆ ತನಿಖೆ
ಜೈಲಿನಿಂದ ಕೈದಿಗಳು ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜೈಲಿನ ಭದ್ರತೆಯಲ್ಲಿ ಲೋಪವಾಗಿದೆಯೇ ಎಂಬ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ.
ಪರಾರಿಯಾದ ೧೭ ಕೈದಿಗಳ ಪೈಕಿ ಐವರನ್ನು ಮತ್ತೆ ಬಂಧಿಸಲಾಗಿದ್ದು, ಉಳಿದವರ ಪತ್ತೆಗಾಗಿ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪರಾರಿಯಾದ ಎಲ್ಲ ಕೈದಿಗಳನ್ನು ಬಂಧಿಸುವುದು ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ಜೈಲಿನ ಭದ್ರತೆಯನ್ನು ಬಲಪಡಿಸುವುದು ಈಗ ಪೊಲೀಸರ ಮುಂದಿರುವ ಪ್ರಮುಖ ಸವಾಲಾಗಿದೆ.
ತಮಿಳುನಾಡಿನ ಥೇಣಿ ಜಿಲ್ಲೆಯ ಉಪಜೈಲಿನಲ್ಲಿ ತಡರಾತ್ರಿ ಕೈದಿಯೊಬ್ಬ ಅಸ್ವಸ್ಥನಾಗಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಕೋಣೆಗೆ ಬಂದ ಜೈಲು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ೧೭ ಕೈದಿಗಳು ಜೈಲಿನಿಂದ ಪರಾರಿಯಾಗಿದ್ದರು.
ಘಟನೆಯಲ್ಲಿ ಮೂವರು ಜೈಲು ಸಿಬ್ಬಂದಿ ಗಾಯಗೊಂಡಿದ್ದಾರೆ. ಪರಾರಿಯಾದ ಕೈದಿಗಳ ಪೈಕಿ ಐವರನ್ನು ಬಂಧಿಸಿರುವ ಪೊಲೀಸರು ಉಳಿದ ಕೈದಿಗಳಿಗಾಗಿ ಬಲೆ ಬೀಸಿದ್ದಾರೆ.
ದಿಂಡಿಗಲ್ ಜಿಲ್ಲೆಯಲ್ಲಿ ವಾಹನಗಳ ತಪಾಸಣೆಯನ್ನು ತೀವ್ರಗೊಳಿಸಲಾಗಿದ್ದು, ೧೬ ಸ್ಥಳಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ಪರಾರಿಯಾದ ಕೈದಿಗಳನ್ನು ಪತ್ತೆಹಚ್ಚಲು ಒಟ್ಟು ೧೭ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದರು.
ಪರಾರಿಯಾದ ಕೈದಿಗಳ ಪತ್ತೆಗಾಗಿ ದಿಂಡಿಗಲ್, ಮಧುರೈ ಮತ್ತು ಕೇರಳದ ಇಡುಕ್ಕಿ ಜಿಲ್ಲೆಗಳ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಕೈದಿಗಳ ಛಾಯಾಚಿತ್ರಗಳನ್ನು ಪೊಲೀಸ್ ಅಧಿಕಾರಿಗಳಿಗೆ ಹಂಚಲಾಗಿದ್ದು, ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾವಹಿಸಲಾಗಿದೆ.
ಪ್ರಮುಖ ರಸ್ತೆಗಳಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿದ್ದು, ಕೈದಿಗಳು ಬೇರೆ ಜಿಲ್ಲೆಗಳಿಗೆ ಅಥವಾ ನೆರೆಯ ಕೇರಳ ರಾಜ್ಯಕ್ಕೆ ತೆರಳಿರುವ ಸಾಧ್ಯತೆಯನ್ನೂ ಗಮನದಲ್ಲಿಟ್ಟುಕೊಂಡು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಘಟನೆಯಲ್ಲಿ ಥೇಣಿ ಜಿಲ್ಲಾ ಜೈಲಿನ ಗ್ರೇಡ್?೨ ಪೊಲೀಸ್ ಸಿಬ್ಬಂದಿ ಥಂಗಪಾಂಡಿ ಅವರ ತಲೆಗೆ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಇಬ್ಬರು ಜೈಲು ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿವೆ .
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಕೈದಿಗಳು ಪರಾರಿಯಾಗಲು ಕಾರಣವೇನು, ಭದ್ರತಾ ವ್ಯವಸ್ಥೆಯಲ್ಲಿ ಲೋಪವಾಗಿರುವ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ.
ಕೈದಿಗಳ ಪರಾರಿ: ಸಿಎಂ ವಿರುದ್ಧ ಸ್ಟಾಲಿನ್ ವಾಗ್ದಾಳಿ
ತಮಿಳುನಾಡಿನಲ್ಲಿ ಜೈಲು ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ವಿಚಾರವಾಗಿ ಮುಖ್ಯಮಂತ್ರಿ ವಿಜಯ್ ನೇತೃತ್ವದ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಮಾದಕ ವಸ್ತುಗಳ ಪ್ರಕರಣದ ಬೆನ್ನಲ್ಲೇ ಜೈಲಿನಿಂದ ಕೈದಿಗಳು ಪರಾರಿಯಾಗಿರುವ ಘಟನೆ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಹಿಡಿದ ಕೈಗನ್ನಡಿ ಎಂದು ಕಿಡಿಕಾರಿದ್ದಾರೆ.
ಜೈಲು ಬ್ರೇಕ್ ಬಗ್ಗೆ ಚೆನ್ನೈ ನಲ್ಲಿಂದು
ಪ್ರತಿಕ್ರಿಯೆ ನೀಡಿರುವ ಅವರು, ಜನರ ರಕ್ಷಣೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಜನರು ತಮ್ಮನ್ನು ತಾವೇ ರಕ್ಷಿಸಿಕೊಳ್ಳಬೇಕಾದ ಶೋಚನೀಯ ಸ್ಥಿತಿಗೆ ತಮಿಳುನಾಡು ತಲುಪಿದೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ಡಿಎಂಕೆ ನಾಯಕ ಟಿ.ಕೆ.ಎಸ್. ಇಳಂಗೋವನ್ ಕೂಡ ವಿಜಯ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪರಾರಿಯಾದ ಕೈದಿಗಳು ವಿಜಯ್ ಅಭಿಮಾನಿಗಳೇ ಅಥವಾ ಟಿವಿಕೆ ಪಕ್ಷಕ್ಕೆ ಸೇರಿದವರೇ ಎಂಬುದನ್ನು ಪರಿಶೀಲಿಸಬೇಕು ಎಂದು ಹೇಳಿರುವ ಅವರು, ಆಡಳಿತಾರೂಢ ಪಕ್ಷವನ್ನು ಗುರಿಯಾಗಿಸಿಕೊಂಡು ಟೀಕಾ ಪ್ರಹಾರ ನಡೆಸಿದ್ದಾರೆ.























