Home ಜಿಲ್ಲೆ ಶಿಕ್ಷಕಿ ಮಹಾನಂದಾ ಪಾಟೀಲ ಅವರಿಗೆ ರಾಜ್ಯಮಟ್ಟದ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ

ಶಿಕ್ಷಕಿ ಮಹಾನಂದಾ ಪಾಟೀಲ ಅವರಿಗೆ ರಾಜ್ಯಮಟ್ಟದ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ

ಅಥಣಿ:ಮಾ.೯: ತಾಲೂಕಿನ ಐಗಳಿ ಗ್ರಾಮದ ಕನ್ನಡ ಶಿಕ್ಷಕಿ ಮಹಾನಂದಾ ರಾವಸಾಬ ಪಾಟೀಲ ಅವರಿಗೆ ರಾಜ್ಯಮಟ್ಟದ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ದೊರಕಿದೆ. ಈಗ ಅಥಣಿಯ ಕೃಷ್ಣ ಬಡಾವಣೆಯ ಸರ್ಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಕಳೆದ ೩೦ ವರುಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆ ಗುರುತಿಸಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಿಂದ ಸನ್ ೨೦೨೫-೨೬ ಸಾಲಿನ ರಾಜ್ಯಮಟ್ಟದ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಲಾಗಿತ್ತು. ಕಳೆದ ಫೆಬ್ರವರಿ ೨೮ರಂದು ಬೆಂಗಳೂರಿನ ಅರಮನೆ ಆವರಣದಲ್ಲಿ ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶ, ಸುವರ್ಣಮಹೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವುಕುಮಾರ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿ ಪ್ರಧಾನ ಮಾಡಿದರು.
ಶಿಕ್ಷಕಿ ಮಹಾನಂದಾ ಪಾಟೀಲ ಅವರ ಪತಿ ಮಲ್ಲಿಕಾರ್ಜುನ ಸಿಂಧೂರ ಪೋಲಿಸ್ ಇಲಾಖೆಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ಇಬ್ಬರು ಶಿಕ್ಷಣ, ಧಾರ್ಮಿಕ ಮತ್ತು ಸಾಮಾಜಿಕ ಸೇವೆಯಲ್ಲಿ ತಮ್ಮನ ತೊಡಗಿಸಿಕೊಂಡು ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.ಶಿಕ್ಷಕಿ ಮಹಾನಂದ ಪಾಟೀಲ ಅವರು ಕಳೆದ ೧೦ ವರ್ಷಗಳಿಂದ ಅಥಣಿ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತು ಬೆಳೆಸುವ ಸಹಕಾರಿ ಸಂಸ್ಥೆಯ ಸದಸ್ಯೆಯಾಗಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಹಾಗೂ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದಾರೆ. ಇವರಿಗೆ ರಾಜ್ಯಮಟ್ಟದ ವೀರರಾಣಿ ಚೆನ್ಙಮ್ಮಾ ಪ್ರಶಸ್ತಿ ನೀಡಿ ಗೌರವಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಅವರಿಗೆ ರಾಜ್ಯಮಟ್ಟದಲ್ಲಿ ಅಕ್ಷರದ ಅವ್ವನ ಹೆಸರಿನಲ್ಲಿ ಈ ಪ್ರಶಸ್ತಿ ಸಂದಿದ್ದಕ್ಕೆ ಕರ್ನಾಟಕ ಪ್ರಾಥಮಿಕ ಶಿಕ್ಷಕರ ಸಂಘ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಅಧ್ಯಕ್ಷರಾದ ಎಸ್. ಎಂ. ಲೋಕನ್ನವರ, ಉಪಾಧಕ್ಯರಾದ ಎ.ಬಿ.ಕುಟಕೋಳಿ, ಕಾರ್ಯದರ್ಶಿ ಬಿ.ಎಲ್. ಮೂಲಿಮನಿ ಹಾಗೂ ತಾಲೂಕಾ ಘಟಕದ ಅಧ್ಯಕ್ಷ ಜಿ.ಎಂ. ಹಿರೇಮಠ, ಉಪಾಧ್ಯಕ್ಷ ಸಿ.ಜಿ.ಮಾಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಆರ್. ಮುಂಜೆ ಹಾಗೂ ಎಲ್ಲಾ ಶಿಕ್ಷಕ ವೃಂದದವರು, ಅಭಿಮಾನಿಗಳು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.