
ಕಲಬುರಗಿ,ನ.28-ನಗರದ ಎಸ್.ಆರ್.ಕೆ. ಕಲ್ಯಾಣ ಮಂಟಪದಲ್ಲಿ ಕಲಬುರಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ, ಕ್ಷೇತ್ರ ಸಮನ್ವಯಾಧಿಕಾರಿಗಳ ಹಾಗೂ ಕಲಬುರಗಿ ಉತ್ತರ ವಲಯದ ಸಮಸ್ತ ಶಿಕ್ಷಕರ ಸಂಘಗಳ ಸಹಯೋಗದಲ್ಲಿ 2026-27ನೇ ಸಾಲಿನ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ಗುರುವಾರ ಅದ್ಧೂರಿಯಾಗಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ ಅವರು ಉದ್ಘಾಟಿಸಿ, ನಿವೃತ್ತ ಶಿಕ್ಷಕರನ್ನು ಸನ್ಮಾನಿಸುವ ಮೂಲಕ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ಕನೀಜ್ ಫಾತಿಮಾ ಅವರು, ಶಿಕ್ಷಕರು ಸಮಾಜದ ಭವಿಷ್ಯವನ್ನು ರೂಪಿಸುವ ಮಹತ್ವದ ಶಕ್ತಿಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣ ನೀಡುವುದಷ್ಟೇ ಅಲ್ಲದೆ, ಉತ್ತಮ ಸಂಸ್ಕಾರ, ಶಿಸ್ತು ಮತ್ತು ಮೌಲ್ಯಗಳನ್ನು ಕಲಿಸುವ ಮೂಲಕ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಪೂಜ್ಯ ಮಹಾಪೌರರು ಶೈಕ್ ಅಜ್ವಲ ಅಹ್ಮದ ಗೋಲಾ, ಕೆಪಿಸಿಸಿ ಸದಸ್ಯ ಫರಾಜ್ ಉಲ್ ಇಸ್ಲಾಂ, ಖುಸ್ರೋ ಜಾಗಿರದಾರ, ರೀಯಾಜ್ ಚಾಹುಷ್, ಅಶೋಕ ಸೊನ್ನ, ಜೈಪ್ರಕಾಶ ಕಟ್ಟಿಮನಿ, ಜಗಪ್ಪ ದೋರೆ, ಸುಧಾಕರ ರಾಠೋಡ, ಕಲಬುರಗಿ ಉತ್ತರ ವಲಯದ ಕ್ಷೇತ್ರ ಸಮನ್ವಯಾಧಿಕಾರಿ ಸೋಮಶೇಖರ್ ಹಂಚಿನಾಳ, ಕಲಬುರಗಿ ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ದಶರಥ,
ಕಲಬುರಗಿ ಉತ್ತರ ವಲಯದ ದೈಹಿಕ ಶಿಕ್ಷಣ ಪರೀವಿಕ್ಷಕ ಚಂದ್ರಕಾಂತ್ ಕಿಣಗಿ, ಅಮರೇಶ ಕೋರೆ, ಶ್ರೀಧರ ರಾಠೋಡ, ಚಂದ್ರಕಾಂತ ಭಾಗನ, ಚಾಂದಸಾಬ ಹಕೀಮ್, ಚನ್ನಬಸಪ್ಪ ದೇಸಾಯಿ ಉಪಸ್ಥಿತರಿದ್ದರು
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿಧ ಶಿಕ್ಷಕರ ಸಂಘಗಳ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವು ಶಿಕ್ಷಕರ ಸೇವೆಯನ್ನು ಸ್ಮರಿಸುವುದರ ಜೊತೆಗೆ ನಿವೃತ್ತ ಶಿಕ್ಷಕರಿಗೆ ಗೌರವ ಸಲ್ಲಿಸುವ ಅರ್ಥಪೂರ್ಣ ವೇದಿಕೆಯಾಯಿತು.




















