Home ಜಿಲ್ಲೆ ಶಿಕ್ಷಕರ ದಿನಾಚರಣೆ

ಶಿಕ್ಷಕರ ದಿನಾಚರಣೆ


ನವಲಗುಂದ,ಸೆ.೬:
`ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಶಿಕ್ಷಕರ ಕೊಡುಗೆ ದೊಡ್ಡದು. ಈ ನಿಟ್ಟಿನಲ್ಲಿ ಶಿಕ್ಷಕರ ದಿನಾಚರಣೆ ಕೇವಲ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗದೆ, ಇಡೀ ಸಮಾಜ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಮೂಲಕ ಶಿಕ್ಷಕ ಸಮುದಾಯವನ್ನು ಗೌರವಿಸಬೇಕು’ ಎಂದು ಶಾಸಕ ಎನ್ ಎಚ್ ಕೋನರಡ್ಡಿ ಕರೆ ನೀಡಿದರು.


ಪಟ್ಟಣದ ಶಿಕ್ಷಕರ ಕಲ್ಯಾಣ ಕೇಂದ್ರದಲ್ಲಿ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ೧೩೮ ನೇ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಎಲ್ಲ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು. ನನ್ನ ಕ್ಷೇತ್ರದಲ್ಲಿರುವ ಯಾವುದೇ ಶಿಕ್ಷಕರು ತಪುö್ಪ ಮಾಡಕೂಡದು ಅದನ್ನು ನಾನು ಸಹಿಸುವುದಿಲ್ಲ ಎಂದರು.
ಪAಚಗೃಹ ಹಿರೇಮಠದ ಇಮ್ಮಡಿ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಇದೆ ವೇಳೆ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು, ಗುರುಭವನ ಕಟ್ಟಡಕ್ಕೆ ದೇಣಿಗೆ ನೀಡಿದವರನ್ನು ಹಾಗೂ ಅತ್ಯುತ್ತಮ ಶಾಲೆ ಪ್ರಶಸ್ತಿ ಪಡೆದ ಎಸ್.ಡಿ.ಎಂ.ಸಿ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು


ಇದಕ್ಕೂ ಮೊದಲು ಮುರಾರ್ಜಿ ಶಾಲೆ ವಿದ್ಯಾರ್ಥಿಗಳು ರೈತ ಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಅರ್ಜುನ ಕಾಂಬೋಗಿ, ಎಸ್. ಬಿ. ಮಲ್ಲಾಡ, ರವೀಂದ್ರಗೌಡ ಪಾಟೀಲ, ವ್ಹಿ ಡಿ ರಂಗಣ್ಣವರ, ಶಿವಾನಂದ ಬೆಂಚಿಕೇರಿ, ಎನ್ ವಿ ಕುರವತ್ತಿಮಠ, ಎ ಬಿ ಕೊಪ್ಪದ, ಆರ್ ಎಚ್ ನೆಗಲಿ ಸೇರಿದಂತೆ ಎಲ್ಲ ವೃಂದ ಸಂಘದ ಪದಾಧಿಕಾರಿಗಳು ವೇದಿಕೆಮೇಲೆ ಉಪಸ್ಥಿತರಿದ್ದರು.