
ಔರಾದ :ಮೇ.23: ಸಮಾಜದಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದು. ಪ್ರತಿಯೊಬ್ಬ ಶಿಕ್ಷಕರೂ ಪ್ರಾಮಾಣಿಕತೆ ಮತ್ತು ಕರ್ತವ್ಯ ನಿಷ್ಠೆಯಿಂದ ಸೇವೆ ಸಲ್ಲಿಸುವ ಮೂಲಕ ಫಲಿತಾಂಶ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಕರಿಗೆ ಶಾಸಕ ಪ್ರಭು ಚವ್ಹಾಣ ಸಲಹೆ ನೀಡಿದರು.
ಪಟ್ಟಣದ ಆದರ್ಶ ಮಹಾವಿದ್ಯಾಲಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಶಾಲೆಯಲ್ಲಿ ಎಲ್ಲ ಶಿಕ್ಷಕರೂ ಶ್ರಮವಹಿಸಿ, ಅತ್ಯಂತ ಕಾಳಜಿಯಿಂದ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವುದು, ಕಠಿಣ ವಿಷಯಗಳನ್ನು ಮನದಟ್ಟು ಮಾಡುವುದುರ ಮೂಲಕ ಕ್ಷೇತ್ರದ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು ಎಂದರು.
ತಾಲೂಕಿನ ಎಲ್ಲಾ ಶಾಲೆಯಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಲಭ್ಯಗಳ ಅಭಿವೃದ್ಧಿಗೆ 2008ರಿಂದ ಆದ್ಯತೆ ನೀಡುತ್ತಾ ಬಂದಿರುವೆ, ಎಲ್ಲ ರೀತಿಯ ಸೌಲಭ್ಯಗಳು ಇದ್ದರು ಸಹ ಫಲಿತಾಂಶ ಕುಂಟಿತಗೊಳ್ಳುತ್ತಿದೆ, ಮುಖ್ಯ ಶಿಕ್ಷಕರು ಶಿಕ್ಷಕರ ಸಭೆ ನೀಡಿ ಸೂಚನೆ ನೀಡುವ ಮೂಲಕ ಶೈಕ್ಷಣಿಕ ಅಭಿವೃದ್ಧಿಗೆ ಕೈ ಜೋಡಿಸಬೇಕು. ಗಡಿಭಾಗದ ಶಾಲೆಗಳಲ್ಲಿ ಕೆಲ ಶಿಕ್ಷಕರು ಮದ್ಯಪಾನ ಮಾಡಿ ಶಾಲೆಗೆ ಹಾಜರಗುತ್ತಿರುವ ಬಗ್ಗೆ ದೂರುಗಳು ಬಂದಿವೆ ಹೀಗೆ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೂಚಿಸಿದರು.
ನಮ್ಮ ಭಾಗದಲ್ಲಿ ಬಡ ಹಾಗೂ ರೈತಾಪಿ ವರ್ಗದ ಮಕ್ಕಳು ಜಾಸ್ತಿ ಇದ್ದು ಆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಜವಾಬ್ದಾರಿ ನಮ್ಮ ಶಿಕ್ಷಕರ ಮೇಲಿದೆ, ಈಗಾಗಲೇ ಎಲ್ಲ ಶಾಲೆಯ ಮಾಹಿತಿಯನ್ನು ಪಡೆದು ಯಾವ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದೆ ಶಿಕ್ಷಕರನ್ನು ನೇಮಕ ಮಾಡಬೇಕು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರಂಗೇಶ್, ಪ್ರಕಾಶ ರಾಠೋಡ ಸೇರಿದಂತೆ ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.
ಶಿಕ್ಷಕರು ಮನೆ ಮನೆಗೆ ತೆರಳಿ ಪ್ರವೇಶಾತಿ ಹೆಚ್ಚಿಸಿ
ಶಿಕ್ಷಕರು ಇಚ್ಛಾಶಕ್ತಿಯಿಂದ ಕೆಲಸ ಮಾಡಬೇಕು ಇಲ್ಲದಿದ್ದರೆ ವರ್ಗಾವಣೆ ಹೊಂದಿ, ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆಯಾಗಿದೆ ಆದ್ದರಿಂದ ಎಲ್ಲ ಗ್ರಾಮಗಳ ಮನೆ ಮನೆಗೆ ತೆರಳಿ ಪ್ರವೇಶಾತಿ ಹೆಚ್ಚಳ ಮಾಡಬೇಕು ಈ ವರ್ಷ ಫಲಿತಾಂಶ ಹೆಚ್ಚಳಕ್ಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ತಿರಂಗಾ ಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ
ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಔರಾದ ಪಟ್ಟಣದಲ್ಲಿ ಮೇ.26ರ ಬೆಳಗ್ಗೆ 9 ಗಂಟೆಗೆ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಪಟ್ಟಣದ ಪ್ರವಾಸಿ ಮಂದಿರದ ಹತ್ತಿರದಿಂದ ಯಾತ್ರೆ ಹೊರಟು ಪ್ರಮುಖ ರಸ್ತೆಗಳ ಮುಖಾಂತರ ಎಪಿಎಂಸಿ ವೃತ್ತದ ವರೆಗೆ ಬಂದು ಕೊನೆಗೊಳ್ಳಲಿದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕ ಪ್ರಭು ಚವ್ಹಾಣ ಅವರು ತಿಳಿಸಿದ್ದಾರೆ.