ದೇವಾಲಯಗಳ ಸ್ವಚ್ಛತಾ ಕಾರ್ಯ

ಚನ್ನಮ್ಮನ ಕಿತ್ತೂರು,ಆ13: ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಾಮಾಜಿಕ ಕಾರ್ಯಕರ್ತರಿಂದ 500 ದೇವಾಲಯಗಳಲ್ಲಿ ಸ್ವಚ್ಛತೆ ಕಾರ್ಯ ನೇರವೇರಿತು.


ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ವ ಸಹಾಯ ಸಂಘಗಳ ಸದಸ್ಯರು, ಕಾರ್ಯಕರ್ತರು ಜಂಟಿಯಾಗಿ ಶ್ರಾವಣ ಮಾಸದ ನಿಮಿತ್ಯ 500 ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗುವುದೆಂದು ಧರ್ಮಸ್ಥಳ ಸಂಘದ ಮುಖ್ಯಸ್ಥ ಬಿ.ಆರ್.ಯೋಗೇಶ ಹೇಳಿದರು.


ತಾಲೂಕಿನ ಶಿವನೂರು ಗ್ರಾಮದ ವಿಠ್ಠಲ ದೇವಸ್ಥಾನ, ಹುಣಸಿಕಟ್ಟೆ ಕಲ್ಮೇಶ್ವರ ದೇವಸ್ಥಾನ ಪಟ್ಟಣದ ಆಂಜನೇಯ ದೇವಸ್ಥಾನ ಸೇರಿದಂತೆ ಅನೇಕ ದೇವಾಲಯ ಆವರಣಗಳನ್ನು ಸ್ವಚ್ಛತಾ ಕಾರ್ಯಕ್ರಮ ನಡೆಯಿತು.