
ಹುಬ್ಬಳ್ಳಿ,ಏ29 : `ವೀರಶೈವ ಧರ್ಮದ ಮೌಲ್ಯಗಳನ್ನು ಸಮಾಜದ ಪ್ರತಿಯೊಬ್ಬರಿಗೂ ತಲುಪಿಸಿ, ವ್ಯಕ್ತಿತ್ವವನ್ನು ತಿದ್ದಿ ತೀಡುವಲ್ಲಿ ಪಂಚಪೀಠಾಧಿಪತಿಗಳ ಕೊಡುಗೆ ಅಪಾರ’ ಎಂದು ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅಭಿಪ್ರಾಯಪಟ್ಟರು.
ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ನಡೆದ ಶ್ರೀ ಕಲ್ಮೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಕಳಸಾರೋಹಣ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
`ಸುಳ್ಳ ಗ್ರಾಮದಲ್ಲಿ ಇಂತಹ ಅರ್ಥಪೂರ್ಣ ಧಾರ್ಮಿಕ ಸಭೆಯನ್ನು ಆಯೋಜಿಸಿರುವುದು ಅಭಿನಂದನೀಯ. ಜನಜಾಗೃತಿ ಮೂಡಿಸುವ ಮೂಲಕ ಧರ್ಮದ ಆಶಯಗಳನ್ನು ಮನೆಮನೆಗೆ ತಲುಪಿಸುವ ಕೆಲಸ ಇಲ್ಲಿ ನಡೆದಿದೆ. ಮಾನವ ಜನ್ಮ ಸಾರ್ಥಕವಾಗಬೇಕೆಂಬ ಪಂಚಪೀಠಾಧೀಶ್ವರರ ಧರ್ಮ ಸಂದೇಶ ಸದಾ ನಮ್ಮ ದಾರಿದೀಪವಾಗಲಿ’ ಎಂದು ಅವರು ಹೇಳಿದರು.
ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಶ್ರೀಮದ್ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠ, ಬಾಳೆಹೊನ್ನೂರು, ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀಶೈಲ ಜಗದ್ಗುರು ಪೀಠ, ಶ್ರೀಶೈಲ ಕ್ಷೇತ್ರ, ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀ ಉಜ್ಜಯಿನಿ ಸದ್ಧರ್ಮ ಸಿಂಹಾಸನ ಮಹಾಸಂಸ್ಥಾನ ಪೀಠ, ಉಜ್ಜಯಿನಿ ಇವರುಗಳು ಸಾನಿಧ್ಯ ವಹಿಸಿದ್ದರು.






















