
ಮಧುಗಿರಿ, ಫೆ. ೨೫- ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಿಡಿಗೇಶಿಯ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಮಿಡಿಗೇಶಿಯ ಪ್ರಸಿದ್ದ ಈಶ್ವರ ಗಿರಿಜಾ ಕಲ್ಯಾಣ ಮಹೋತ್ಸವದ ಸಂದರ್ಭದಲ್ಲಿ ಎನ್‌ಎಸ್‌ಎಸ್ ಶಿಬಿರಾರ್ಥಿಗಳು ದೇವಸ್ಥಾನದ ಆವರಣದ ಸುತ್ತಮುತ್ತ ಸ್ವಚ್ಚತಾ ಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಿಡಿಗೇಶಿಗೆ ಭೇಟಿ ನೀಡಿದ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಎನ್‌ಎಸ್‌ಎಸ್ ಶಿಬಿರಾರ್ಥಿಗಳ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸಂಯೋಜನಾಧಿಕಾರಿ ಡಾ.ಮಂಜು ಭಾರ್ಗವಿ, ಹಿರಿಯ ಪ್ರಾಧ್ಯಾಪಕರಾದ ಪ್ರೊ. ಬಸವರಾಜು ಕೆ.ಸಿ., ಡಾ.ಅನುಪಮಾ, ಪ್ರೊ. ರಜಿನಿ, ಪ್ರೊ. ಚಂದನಾ, ಡಾ. ಶೋಭಾ, ಷಣ್ಮುಖಚಾರಿ, ರಾಮಚಂದ್ರಪ್ಪ, ತಿಪ್ಪೇಸ್ವಾಮಿ, ಆ ಶಾ, ಇಂದುಜಾ, ಜಾಂಭವಿ ಮತ್ತಿತರರು ಉಪಸ್ಥಿತರಿದ್ದರು.






























