
ಜಮಖಂಡಿ ಏ.27: ನಗರದಲ್ಲಿ ಇರುವ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಭಾನುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ವೇಗವಾಗಿ ಬರುತ್ತಿದ್ದ 18 ಚಕ್ರದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ವೃತ್ತಕ್ಕೆ ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಟ್ರಕ್‍ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದ ತೀವ್ರತೆಗೆ ಟ್ರಕ್ ಚಾಲಕ ವಾಹನದ ಒಳಗಡೆ ಸಿಲುಕಿಕೊಂಡಿದ್ದು, ಸ್ಥಳೀಯರು ಹಾಗೂ ಪೆÇಲೀಸರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ ಚಾಲಕನನ್ನು ಸುರಕ್ಷಿತವಾಗಿ ಹೊರ ತಗೆದಿದ್ದಾರೆ ಎಂದು ತಿಳಿದುಬಂದಿದೆ. ಬಳಿಕ ಗಾಯಗೊಂಡ ಚಾಲಕನನ್ನು ತಕ್ಷಣ ಜಮಖಂಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ಲಬ್ಯವಾಗಿದೆ.
ಘಟನಾ ಸ್ಥಳಕ್ಕೆ ಪಿಎಸೈ ಅನೀಲ ಕುಂಬಾರ ಅವರ ನೇತೃತ್ವದ ಪೆÇಲೀಸ್ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತಕ್ಕೆ ವೇಗವೇ ಪ್ರಮುಖ ಕಾರಣ ಎಂದು ಪ್ರಾಥಮಿಕವಾಗಿ ತಿಳಿದು ಬಂದಿದೆ.




















