Home ಕ್ರೈಂ ಸುದ್ದಿಗಳು ಜಮಖಂಡಿ ತಾಲ್ಲೂಕಿನ ಕುರುಗೋಡದಲ್ಲಿ ಭೀಕರ ಹತ್ಯೆ

ಜಮಖಂಡಿ ತಾಲ್ಲೂಕಿನ ಕುರುಗೋಡದಲ್ಲಿ ಭೀಕರ ಹತ್ಯೆ

ಜಮಖಂಡಿ : ಮೇ 15:ತಾಲೂಕಿನ ಕುರುಗೋಡ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಪ್ರದೇಶದಲ್ಲಿ ಆತಂಕ ಮೂಡಿಸಿದೆ. ಸಾವಳಗಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಿರಂತರವಾಗಿ ಗಂಭೀರ ಅಪರಾಧ ಪ್ರಕರಣಗಳು ನಡೆಯುತ್ತಿದ್ದು, ಸಾರ್ವಜನಿಕರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ.
ಕೊಲೆಯಾದ ವ್ಯಕ್ತಿಯನ್ನು ಕುರುಗೋಡ ಗ್ರಾಮದ 35 ವರ್ಷದ ಸಿದ್ದಪ್ಪ ಮಲ್ಲಪ್ಪ ಬಿರಾದರ ಎಂದು ಗುರುತಿಸಲಾಗಿದೆ. ಎಂದಿನಂತೆ ತಮ್ಮ ಜಮೀನಿಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ತಲೆಗೆ ಕಬ್ಬಿಣದ ರಾಡ್‍ನಿಂದ ಮಾರಣಾಂತಿಕ ಹಲ್ಲೆ ನಡೆಸಿ ಸ್ಥಳದಲ್ಲೇ ಹತ್ಯೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ರಾತ್ರಿ ಹೊತ್ತಿನಲ್ಲಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್, ಡಿವೈಎಸ್‍ಪಿ ಸಯ್ಯದ್ ರೋಷನ್ ಜಮೀರ್, ಸಿಪಿಐ ಮಲ್ಲಪ್ಪ ಮಡ್ಡಿ ಹಾಗೂ ಸಾವಳಗಿ ಪಿಎಸ್‍ಐ ಅಪ್ಪು ಐಗಾಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾವಳಗಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಸರಣಿ ಕೊಲೆ, ಹಲ್ಲೆ ಹಾಗೂ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಸಾರ್ವಜನಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. “ಸಾಮಾನ್ಯ ಜನರು ರಾತ್ರಿ ಹೊತ್ತು ಓಡಾಡಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪೆÇಲೀಸರು ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಕೊಲೆಯ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಆರೋಪಿಗಳ ಪತ್ತೆಗೆ ಪೆÇಲೀಸರು ವಿಶೇಷ ತಂಡ ರಚಿಸಿ ತನಿಖೆ ಮುಂದುವರೆಸಿದ್ದಾರೆ.