Home ಜಿಲ್ಲೆ ಬೆಂಗಳೂರು ಇಂದು ಯಲಿಯೂರಿನಲ್ಲಿ ೨೯ನೇ ದೇವನಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಇಂದು ಯಲಿಯೂರಿನಲ್ಲಿ ೨೯ನೇ ದೇವನಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Oplus_16908288

ವಿಜಯಪುರ, ನ .೨-ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಯಲಿಯೂರು ಗ್ರಾಮ ಪಂಚಾಯತಿ ಆವರಣದಲ್ಲಿರುವ ಕಮಲ ಹಂಪನಾ ವೇದಿಕೆಯಲ್ಲಿ ನವೆಂಬರ್ ೨, ೨೦೨೬ರ ಸೋಮವಾರದಂದು ೨೯ನೇ ದೇವನಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಈ ಸಮ್ಮೇಳನದ ಅಧ್ಯಕ್ಷತೆಯನ್ನು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರು ಹಾಗೂ ಸಾಹಿತಿಗಳಾದ ಡಾ. ಎಂ. ಶಿವಕುಮಾರ್ ಅವರು ವಹಿಸಲಿದ್ದಾರೆ.


ಸಮಾಜ ಕಲ್ಯಾಣ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಎಚ್. ಮುನಿಯಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧ್ಯಕ್ಷರಾದ ಪ್ರೌಢಶಾಲೆ ಬಿ.ಎನ್. ಕೃಷ್ಣಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಅಂದು ಬೆಳಿಗ್ಗೆ ೭.೩೦ ಗಂಟೆಗೆ ಧ್ವಜಾರೋಹಣ, ರಾಷ್ಟ್ರಗೀತೆ ಹಾಗೂ ನಾಡಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಬೆಳಿಗ್ಗೆ ೯:೩೦ ಗಂಟೆಗೆ ಉದ್ಘಾಟನಾ ಸಮಾರಂಭ, ನುಡಿ ನಮನ, ನೂಲುಗೆಣ್ಣುಗಳ ಸಂಗ್ರಹದ ಉದ್ಘಾಟನೆ ಮತ್ತು ಕೃತಿ ಲೋಕಾರ್ಪಣೆ ಜರುಗಲಿದೆ.


ನಂತರ ಮಧ್ಯಾಹ್ನ ೧೧:೨೦ ಗಂಟೆಗೆ ವಿಚಾರ ಗೋಷ್ಠಿ ಹಾಗೂ ಕವಿ ಗೋಷ್ಠಿ ನಡೆಯಲಿದ್ದು, ಸಂಜೆ ೪:೩೦ ಗಂಟೆಗೆ ಸಮಾರೋಪ ಸಮಾರಂಭ ಹಾಗೂ ಸನ್ಮಾನ ಕಾರ್ಯಕ್ರಮವಿರುತ್ತದೆ. ತದನಂತರ ಸಂಜೆ ೬:೩೦ ಗಂಟೆಗೆ ಸಂಜಿತಾ ಡ್ಯಾನ್ಸ್ ಅಕಾಡೆಮಿ (ಬ್ರಿಗೇಡ್) ಇವರ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕನ್ನಡ ಚಲನಚಿತ್ರ ಹಾಡುಗಳ ರಸಮಂಜರಿ ಕಾರ್ಯಕ್ರಮ ಜರುಗಲಿದೆ. ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯನ್ನು ಬಿಂಬಿಸುವ ಈ ಸಾಹಿತ್ಯಿಕ ಹಬ್ಬದಲ್ಲಿ ತಾಲ್ಲೂಕಿನ ಸಮಸ್ತ ಸಾಹಿತ್ಯಾಸಕ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸ್ವಾಗತ ಸಮಿತಿಯು ವಿನಂತಿಸಿದೆ.