Home ಜಿಲ್ಲೆ ಕಲಬುರಗಿ ಬಿಜೆಪಿ ಜಾತಿ ಗಣನೆಯಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಲಿ

ಬಿಜೆಪಿ ಜಾತಿ ಗಣನೆಯಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಲಿ

ಚಿತ್ತಾಪುರ: ಬಿಜೆಪಿ ಪಕ್ಷವು ಜಾತಿ ಗಣನೆಯಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ಅವಕಾಶ ಕಲ್ಪಿಸಬೇಕು ಎಂದು ಬಿಜೆಪಿ ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ಇಬ್ರಾಹಿಂ ಕೋಳೇದ ಒತ್ತಾಯಿಸಿದ್ದಾರೆ.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷವು ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡುತ್ತಿರುವ ಪಕ್ಷವಾಗಿದ್ದು, ಅಲ್ಪಸಂಖ್ಯಾತರ ಹಿತಾಸಕ್ತಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಬಿಜೆಪಿ ಪಕ್ಷವು ಅಲ್ಪಸಂಖ್ಯಾತರನ್ನು ಕಡೆಗಣಿಸಬಾರದು. ಪಕ್ಷದ ತತ್ವ ಮತ್ತು ಸಿದ್ಧಾಂತಗಳನ್ನು ಒಪ್ಪಿಕೊಂಡು ದುಡಿಯುತ್ತಿರುವ ಅಲ್ಪಸಂಖ್ಯಾತರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು. ದೇಶದ ಅಭಿವೃದ್ಧಿ ಚಿಂತನೆ ಹಾಗೂ ರಾಜ್ಯದ ಯಡಿಯೂರಪ್ಪ ಅವರ ಮುಖ್ಯಮಂತ್ರಿತ್ವದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಬೇಕು ಎಂದು ತಿಳಿಸಿದರು.

ಕಳೆದ 15 ವರ್ಷಗಳಿಂದ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಪಕ್ಷದ ಸೇವೆಯನ್ನು ಗುರುತಿಸಿ, ಮುಂದಿನ ದಿನಗಳಲ್ಲಿ ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷನಾಗಿ ಸೇವೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿಕೊಂಡಿರುವುದಾಗಿ ಹೇಳಿದರು.

ಜಿಲ್ಲಾ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಚಿತ್ತಾಪುರ ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅನುಕೂಲ ಮಾಡಿಕೊಟ್ಟಿದೆ. ಇದೇ ರೀತಿ, ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಟ್ಟು, ಪಕ್ಷದ ಗೆಲುವಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಬಿಜೆಪಿ ಪಕ್ಷದ ವತಿಯಿಂದ ತಾಲೂಕಿನಲ್ಲಿ ಇಲ್ಲಿಯವರೆಗೂ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅವಕಾಶಗಳು ಸಿಕ್ಕಿಲ್ಲ. ಆದ್ದರಿಂದ ಈ ಬಾರಿ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಬೇಕು. ತನಗೆ ಅವಕಾಶ ನೀಡುವ ಮೂಲಕ ಪಕ್ಷದ ಕಾರ್ಯಕರ್ತರಿಗೆ ಪೆÇ್ರೀತ್ಸಾಹ ನೀಡಬೇಕು ಎಂದು ಇಬ್ರಾಹಿಂ ಕೋಳದ ಒತ್ತಾಯಿಸಿದರು.