
ನವದೆಹಲಿನ೨೬: ಭಾರತದ ಸಂವಿಧಾನವು ಕೇವಲ ಒಂದು ಪುಸ್ತಕವಲ್ಲ, ಅದು ಈ ದೇಶದ ಆತ್ಮವಾಗಿದೆ’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಣ್ಣಿಸಿದ್ದಾರೆ.’
ಸಂವಿಧಾನ ದಿನ’ದ ಅಂಗವಾಗಿ ಗುರುವಾರ ಸಾಮಾಜಿಕ ಜಾಲತಾಣ ’ಎಕ್ಸ್’ನಲ್ಲಿ (ಘಿ) ಪೋಸ್ಟ್ ಮಾಡಿರುವ ಅವರು, “ಸಂವಿಧಾನವು ಪ್ರತಿಯೊಬ್ಬ ನಾಗರಿಕನ ಘನತೆಯ ರಕ್ಷಾಕವಚ ಹಾಗೂ ಪ್ರತಿಧ್ವನಿಯ ಶಕ್ತಿಯಾಗಿದೆ. ಇದು ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ರಕ್ಷಕನಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.
“ಸಂವಿಧಾನವು ನಮ್ಮ ಪ್ರಜಾಪ್ರಭುತ್ವದ ಭದ್ರ ಅಡಿಪಾಯವಾಗಿದ್ದು, ಅನ್ಯಾಯದ ವಿರುದ್ಧ ಹೋರಾಡಲು ನಮಗಿರುವ ಅತ್ಯಂತ ದೊಡ್ಡ ಅಸ್ತ್ರವಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.ಇದೇ ವೇಳೆ ಸಂವಿಧಾನ ರಕ್ಷಣೆಯ ತಮ್ಮ ಸಂಕಲ್ಪವನ್ನು ಪುನರುಚ್ಚರಿಸಿರುವ ಕಾಂಗ್ರೆಸ್ ನಾಯಕ, “ಎಲ್ಲ ಪರಿಸ್ಥಿತಿಯಲ್ಲೂ ನಾವು ನಮ್ಮ ಸಂವಿಧಾನವನ್ನು ರಕ್ಷಿಸುತ್ತೇವೆ.
ಪ್ರತಿಯೊಬ್ಬ ಭಾರತೀಯನ ಹಕ್ಕುಗಳಿಗಾಗಿ ನಮ್ಮ ಹೋರಾಟವನ್ನು ನಿರಂತರವಾಗಿ ಮುಂದುವರಿಸುತ್ತೇವೆ” ಎಂದು ತಿಳಿಸಿದ್ದಾರೆ




















