ಕರ್ನಾಟಕದ ಗಾಂಧಿ ಹರ್ಡೆಕರ ಮಂಜಪ್ಪನವರ ಕೊಡುಗೆ ಅನನ್ಯ

ಕಲಬುರಗಿ:ನ.30: ಶರಣ ಹರ್ಡೇಕರ ಮಂಜಪ್ಪನವರು ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರ ಅನುಯಾಯಿಯಾಗಿ, ಕರ್ನಾಟಕದಲ್ಲಿ ಅವುಗಳನ್ನು ಜಾರಿಗೊಳಿಸುವ ಮೂಲಕ ‘ಕರ್ನಾಟಕದ ಗಾಂಧಿ’ಯಾಗಿದ್ದಾರೆ. ಜಾತಿ ಪದ್ಧತಿ, ಮೂಢನಂಬಿಕೆ, ಅಂಧಶೃದ್ಧೆಯ ನಿರ್ಮೂಲನೆಯಂತಹ ಅನೇಕ ಸಾಮಾಜಿಕ ಸುಧಾರಣೆಗಳನ್ನು ತರಲು ಸಾಕಷ್ಟು ಪ್ರಯತ್ನಿಸಿದ್ದಾರೆ. ಮಂಜಪ್ಪನವರು ಕನ್ನಡದ ಕೀರ್ತಿಯನ್ನು ಪಸರಿಸುವ ಕಾರ್ಯ ಮಾಡಿದ್ದಾರೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿನ ‘ಸನಲೈಟ್ ಟ್ಯುಟೋರಿಯಲ್ಸ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ಕನ್ನಡ ರಾಜ್ಯೋತ್ಸವ ಮಾಸಾಚರಣೆಯ ಸರಣಿ ಕಾರ್ಯಕ್ರಮ-28ರಲ್ಲಿ “ಕನ್ನಡಕ್ಕೆ ಶರಣ ಹರ್ಡೇಕರ ಮಂಜಪ್ಪನವರ ಕೊಡುಗೆ” ಎಂಬ ವಿಷಯದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದ ಅವರು,ಹರ್ಡೇಕರ ಮಂಜಪ್ಪನವರು ಶರಣ ಜೀವಿ, ಸಮಾಜ ಸುಧಾರಕ, ಸ್ವಾತಂತ್ರ ಹೋರಾಟಗಾರ, ಲೇಖಕರಾಗಿ ಬಹುಮುಖ ಕೊಡುಗೆ ನೀಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಅಸ್ಲಾಂ ಶೇಖ್, ಶಿವಯೋಗೆಪ್ಪಾ ಎಸ್.ಬಿರಾದಾರ, ಓಂಕಾರ ವಠಾರ, ಪೂಜಾ ಹೂಗಾರ, ಕಾವೇರಿ ಹೌದೆ, ಸ್ನೇಹಾ ಚೌಹಾಣ ಹಾಗೂ ವಿದ್ಯಾರ್ಥಿಗಳು ಇದ್ದರು.