
ಕೆ.ಆರ್.ಪುರ.ಸೆ,೮-ವಿದ್ಯಾರ್ಥಿಗಳಿಗೆ ಜ್ಞಾನ, ಶಿಸ್ತು, ಸಂಸ್ಕಾರ ಹಾಗೂ ಮಾನವೀಯ ಮೌಲ್ಯ ಗಳನ್ನು ಬೋಧಿಸಿ, ಉತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆನೀಡುತ್ತಿರುವ ಶಿಕ್ಷಕರ ಸೇವೆ ಶ್ಲಾಘ ನೀಯ ಎಂದು ಭಾರತೀಯ ಸೇವಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಹೂಡಿ ರಾಮಚಂದ್ರ(ಚಿನ್ನಿ) ಅವರು ತಿಳಿಸಿದರು
ಶಿಕ್ಷಕರ ದಿನಾಚರಣೆ ಅಂಗವಾಗಿ ಮಹದೇವಪುರ ಕ್ಷೇತ್ರದ ಹೂಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.
ಪ್ರಾಥಮಿಕ, ಪ್ರೌಢಶಾಲಾ ಮತ್ತು ಪಿಯು ಕಾಲೇಜಿನ ಶಿಕ್ಷಕ ವೃಂದಕ್ಕೆ ಹಾಗೂ ನಾಡಿನ ಎಲ್ಲಾ ಶಿಕ್ಷಕರಿಗೆ ಶುಭಾಶಯ ತಿಳಿಸಿ ಅವರು ಮಾತನಾಡಿದರು.
ಒಬ್ಬ ಶಿಕ್ಷಕ ಕೇವಲ ಪಾಠವನ್ನು ಕಲಿಸುವವರಲ್ಲ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ತೋರಿಸುವ ಮಾರ್ಗದರ್ಶಕರು, ದೇಶದ ಭವಿಷ್ಯವನ್ನು ರೂಪಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಬಲಪಡಿಸಿ, ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಾನ ಅವಕಾಶ, ಉತ್ತಮ ಶಿಕ್ಷಣ ಮತ್ತು ಉಜ್ವಲ ಭವಿಷ್ಯ ಕಲ್ಪಿಸುವುದು ಶಿಕ್ಷಕರ ಸಂಕಲ್ಪವಾಗಬೇಕು ಎಂದರು.
ಈ ಸಂದರ್ಭದಲ್ಲಿ ಭಾರತೀಯ ಸೇವಾ ಸಮಿತಿಯ ಕಾರ್ಯಕರ್ತರು ತಮ್ಮ ಶಿಕ್ಷಕರಿಗೆ ಗುರುವಂದನೆ ಸಲ್ಲಿಸುವ ಮೂಲಕ ತಮ್ಮ ಕರ್ತವ್ಯ ಮಾಡಿದ್ದೆವೆ ಎಂದು ನುಡಿದರು.


























