Home ಜಿಲ್ಲೆ ಕನ್ನಡ ಕಟ್ಟುವಲ್ಲಿ ಧಾರವಾಡದ ಧುರೀಣರ ಕೊಡುಗೆ ಅಪಾರ

ಕನ್ನಡ ಕಟ್ಟುವಲ್ಲಿ ಧಾರವಾಡದ ಧುರೀಣರ ಕೊಡುಗೆ ಅಪಾರ


ಧಾರವಾಡ, ನ.೨: ಆಲೂರು ವೆಂಕಟರಾಯರು, ಹುಯಿಲಗೋಳ ನಾರಾಯಣರಾಯರು, ಪಾಟೀಲ ಪುಟ್ಟಪ್ಪನವರು ಮತ್ತಿತರ ಕನ್ನಡ ಕಟ್ಟಿದ ಧಾರವಾಡದ ಧುರೀಣರ ಕೊಡುಗೆಯನ್ನು ಮರೆಯಬಾರದು. ಸಾವಿರಾರು ವ?Àðಗಳ ಇತಿಹಾಸವಿರುವ ಕನ್ನಡಕ್ಕೆ ಶಾಸ್ತಿçÃಯ ಭಾ?ೆಯ ಸ್ಥಾನಮಾನವಿದೆ. ಪಂಪನ ಕಾವ್ಯ, ವಚನಕಾರರ ವಚನಗಳು, ದಾಸರ ಪದಗಳು, ಸರ್ವಜ್ಞನ ನುಡಿಗಳು, ಕುವೆಂಪು ಅವರ ವಿಶ್ವಮಾನವ ಸಂದೇಶ, ಡಿ.ವಿ.ಜಿ. ಮತ್ತು ಇತರರ ಚಿಂತನೆಗಳು ನಮ್ಮ ಭಾ?Éಯ ವಿಶಾಲತೆಯನ್ನು ಸಾರುತ್ತವೆ ಎಂದು ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರು ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋ?À ಎಸ್.ಲಾಡ್ ಅವರು ಹೇಳಿದರು.


ಅವರು ಧಾರವಾಡ ಜಿಲ್ಲಾಡಳಿತವು ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ೭೧ ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ರಾ?À್ಟ್ರ ಧ್ವಜಾರೋಹಣ ನೇರವೇರಿಸಿ, ವಿವಿಧ ದಳಗಳಿಂದ ಗೌರವ ರಕ್ಷೆ ಸ್ವೀಕರಿಸಿ, ಜಿಲ್ಲೆಯ ಸಾರ್ವಜನಿಕರನ್ನು ಉದ್ದೇಶಿಸಿ, ಮಾತನಾಡಿದರು.
೧೯೫೬ ರಲ್ಲಿ ಏಕೀಕರಣಗೊಂಡ ನಮ್ಮ ಕರ್ನಾಟಕ ಇಂದಿಗೆ ೭೧ ನೇ ವ?Àðಕ್ಕೆ ಕಾಲಿಡುತ್ತಿದೆ. ಧಾರವಾಡ ಜಿಲ್ಲೆಯವರಾದ ಸಂಗೀತ ದಿಗ್ಗಜರಾದ ಪಂಡಿತ್ ಭೀಮಸೇನ ಜೋಶಿ, ವರಕವಿ ದ.ರಾ.ಬೇಂದ್ರೆ, ಚನ್ನವೀರ ಕಣವಿ, ಮಲ್ಲಿಕಾರ್ಜುನ ಮನ್ಸೂರ್ ರವರಂತಹ ಮಹಾನ್ ಸಾಧಕರು ನಾಡಿನ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಬೆಳಗಿಸಿದ್ದಾರೆ. ಕನ್ನಡವನ್ನು ನಾವು ಕೇವಲ ಆಡಳಿತದಲ್ಲಿ ಬಳಸುವುದಲ್ಲದೇ, ನಮ್ಮ ದಿನನಿತ್ಯದ ಬದುಕಿನಲ್ಲಿ, ಮನೆಗಳಲ್ಲಿ ಮತ್ತು ವ್ಯವಹಾರದಲ್ಲಿ ಹೆಚ್ಚು-ಹೆಚ್ಚಾಗಿ ಬಳಸಬೇಕು. ಕನ್ನಡ ಕೇವಲ ಮಾತನಾಡುವ ಭಾ?Éಯಲ್ಲ; ಅದು ನಮ್ಮ ಅಭಿಮಾನದ ಸಂಕೇತವಾಗಿದೆ ಎಂದು ಹೇಳಿದರು.


ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ನಾಯಕತ್ವದಲ್ಲಿ ಭಾರತ್ ಜೋಡೋ ಯುವ ಸಂಘ ಮಿ?Àನ್ ಯೋಜನೆಯಡಿಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಒಟ್ಟು ೨೪೯ ಯುವ ಸಂಘಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗಿದೆ. ರೈತ ಮಿತ್ರ, ನೇಗಿಲ ಯೋಗಿ, ತೇಗದ ಸಿರಿ, ಗ್ರಾಮ ಅನುಭವ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ. ಉದ್ಯೋಗ ನಿಧಿ ಹಾಗೂ ಯುವ ಉದ್ಯೋಗ ಸೇತು, ಭೂ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗಿದೆ. ನಾಗರಿಕರ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ನೀಡಲು ಸರ್ಕಾರವು ಹೊಸದಾಗಿ ಪ್ರಜಾ ಸೇವೆ ಇಲಾಖೆಯನ್ನು'' ಆರಂಭಿಸಿದೆ. ಬಂಡವಾಳ ಹೂಡಿಕೆಯನ್ನು ಹೆಚ್ಚಿಸಲು ಹಾಗೂ ಅನಿವಾಸಿ ಭಾರತೀಯರ ಸಮಸ್ಯೆಗಳನ್ನು ಪರಿಹರಿಸಲು ಜಾಗತಿಕ ಹೂಡಿಕೆ ಮತ್ತು ಅನಿವಾಸಿ ಭಾರತೀಯರ ವ್ಯವಹಾರಗಳ ಇಲಾಖೆಯನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು. ಖಾಲಿ ಇರುವ ೭೨,೦೦೦ ಸರ್ಕಾರಿ ಹುದ್ದೆಗಳ ಭರ್ತಿ ಮಾಡಲು ಕ್ರಮ ವಹಿಸಲಾಗಿದೆ. ಕರ್ನಾಟಕವನ್ನು "ನಶೆ ಮುಕ್ತವನ್ನಾಗಿ'' ಮಾಡಲಾಗುವುದು. ವಸತಿ ರಹಿತರಿಗೆ ಉಚಿತ ಮನೆ ಮತ್ತು ನಿವೇಶನ ಹಂಚಿಕೆ” ಕಾರ್ಯಕ್ರಮಗಳನ್ನು ಅನು?Á್ಠನಗೊಳಿಸಲಾಗುವುದು. ಯುವ ಜನತೆ ಹಾಗೂ ಉತ್ತಮ ಸಮಾಜದ ನಿರ್ಮಾಣಕ್ಕಾಗಿ ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.

ಧಾರವಾಡ ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿಯಲ್ಲಿ ಇಲ್ಲಿಯವರೆಗೆ ೪೫ ಕೋಟಿ ಮಹಿಳಾ ಪ್ರಯಾಣಿಕರಿಗೆ ರೂ.೯೯೫ ಕೋಟಿಗಳ ಉಚಿತ ಸೇವೆ ಒದಗಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ೪,೦೪,೮೨೭ ಮಹಿಳೆಯರಿಗೆ ರೂ.೨,೩೪೫ ಕೋಟಿ ನೆರವು ನೀಡಲಾಗಿದೆ. ಗೃಹಜ್ಯೋತಿ ಯೋಜನೆಯಡಿಯಲ್ಲಿ ೫,೨೧,೦೪೬ ಕುಟುಂಬಗಳಿಗೆ ರೂ.೮೪೬ ಕೋಟಿ ಸಹಾಯಧನ ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ ೩,೭೫,೯೯೬ ಬಿಪಿಎಲ್ ಕುಟುಂಬಗಳಿಗೆ ಉಚಿತ ಪಡಿತರ ಒದಗಿಸಲಾಗಿದೆ. ಯುವನಿಧಿ ಯೋಜನೆಯಡಿಯಲ್ಲಿ ಯುವಜನರಿಗೆ ೧೨,೩೪೦ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರ ನಗದು ವರ್ಗಾವಣೆ ಮಾಡಲಾಗಿದೆ.


೨೦೨೫-೨೬ ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ೩೯,೧೩೪ ರೈತರಿಗೆ ರೂ. ೪೩.೯೮ ಕೋಟಿ ಬೆಳೆ ವಿಮೆ ಪರಿಹಾರ ಜಮೆ ಮಾಡಲಾಗಿದೆ. ೨೦೨೫-೨೬ ನೇ ಸಾಲಿನ ಬೆಳೆ ಹಾನಿ ಪರಿಹಾರವಾಗಿ ೬೬,೮೩೪ ರೈತರಿಗೆ ರೂ, ೧೨೮.೭೩ ಕೋಟಿ ಮೊತ್ತವನ್ನು ಪಾವತಿಸಲಾಗಿದೆ. ಬೇಸಿಗೆಯಲ್ಲಿ ಅಕಾಲಿಕ ಆಣೆಕಲ್ಲು ಮಳೆ ಹಾನಿ ಪರಿಹಾರವಾಗಿ ೧,೨೨೧ ರೈತರಿಗೆ ರೂ, ೧.೭೨ ಕೋಟಿ ಮೊತ್ತವನ್ನು ಪಾವತಿಸಲಾಗಿದೆ ಎಂದು ಹೇಳಿದರು.
ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನಾರದ ನಮ್ಮ ಜಿಲ್ಲೆಯ ಚಲನಚಿತ್ರ, ಕಿರುತೆರೆ ಕ್ಷೇತ್ರದಲ್ಲಿ ಕೆ. ವೆಂಕಟರಮಣ (ಬಾಬಜಿ), ರಂಗಭೂಮಿ ಕ್ಷೇತ್ರದಲ್ಲಿ ಕೆ. ವಿಜಯಲಕ್ಷ್ಮೀ ಪಾಟೀಲ ಅವರಿಗೆ ಜಿಲ್ಲೆಯ ಪರವಾಗಿ ಅಭಿನಂದನೆಗಳನ್ನು ಸಚಿವರು ತಿಳಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಮಹಾನಗರ ಪೊಲೀಸ ಆಯುಕ್ತ ಬೋರಸೆ ಭೂಷಣ್ ಗುಲಾಬರಾವ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ ವರಿ?Á್ಠಧಿಕಾರಿ ಗುಂಜನ ಆರ್ಯ, ಐಎಎಸ್ ಪ್ರೊಬೇ?Àನರಿ ಅಧಿಕಾರಿ ಅನುಪ್ರೀಯಾ ಸಾಕ್ಯ, ಅಪರ ಜಿಲ್ಲಾಕಾರಿ ಗೀತಾ ಸಿ.ಡಿ., ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ತಹಶಿಲ್ದಾರ ಡಾ.ಡಿ.ಎಚ್.ಹೂಗಾರ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಇಲಾಖೆಗಳ ಮುಖ್ಯಸ್ಥರು, ಅಧಿಕಾರಿಗಳು, ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.