Home ಜಿಲ್ಲೆ ಕಲಬುರಗಿ ಷಣ್ಮುಖ ಶಿವಯೋಗಿಗಳ ಅದ್ಧೂರಿ ರಥೋತ್ಸವ

ಷಣ್ಮುಖ ಶಿವಯೋಗಿಗಳ ಅದ್ಧೂರಿ ರಥೋತ್ಸವ

ಜೇವರಗಿ,ಮೇ 8: ಪಟ್ಟಣದಲ್ಲಿ 17ನೇ ಶತಮಾನದ ಶ್ರೇಷ್ಠ ವಚನಕಾರ ಚರಚಕ್ರವರ್ತಿ ಷಣ್ಮುಖ ಶಿವಯೋಗಿಗಳ ಜಾತ್ರಾ ಮಹೋತ್ಸವ ನಿಮಿತ್ತ ಗುರುವಾರ ಅದ್ಧೂರಿ ರಥೋತ್ಸವ ಜರುಗಿತು.
ವಿರಕ್ತ ಮಠದ ಟ್ರಸ್ಟ್ ಕಮಿಟಿ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮಠದ ಆವರಣದಲ್ಲಿ ಏ.23 ರಿಂದ ಬಸವಬೆಳವಿಯ ಶರಣಬಸವ ಸ್ವಾಮೀಜಿ ಅವರಿಂದ ನಡೆದ ಶರಣರ ಜೀವನ ದರ್ಶನ ಪ್ರವಚನ ಕಾರ್ಯಕ್ರಮ ಬುಧವಾರ ಮಹಾಮಂಗಲಗೊಂಡಿತು. ನಂತರ ಲಘು ಉಚ್ಚಾಯ ಉತ್ಸವ ನಡೆಯಿತು.
ಗುರುವಾರ ಬೆಳಿಗ್ಗೆ 6ಕ್ಕೆ ಷಣ್ಮುಖ ಶಿವಯೋಗಿಗಳ ಕರ್ತೃ ಗದ್ದುಗೆಗೆ ಅರ್ಚಕ ಬಸಯ್ಯಸ್ವಾಮಿ ಹಿರೇಮಠ ಅವರಿಂದ ವಚನಾಭಿಷೇಕ, ವಿಶೇಷ ಪೂಜೆ, ಮಹಾಮಂಗಳಾರತಿ ನಡೆಯಿತು. ಬೆಳಿಗ್ಗೆ 10ಕ್ಕೆ ಶ್ರೀಮಠದಿಂದ ವಚನ ಸಾಹಿತ್ಯದ ಪಲ್ಲಕ್ಕಿ ಉತ್ಸವ ಆರಂಭಗೊಂಡು ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ಮಧ್ಯಾಹ್ನ 3ಕ್ಕೆ ಶ್ರೀಮಠಕ್ಕೆ ಬಂದು ತಲುಪಿತು. ಸಂಜೆ 6.30ಕ್ಕೆ ಪುರವಂತರ ಸೇವೆಯ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಷಣ್ಮುಖ ಶಿವಯೋಗಿ ಮಹಾರಾಜ ಕೀ ಜೈ ಎಂಬ ಜಯಘೋಷದೊಂದಿಗೆ ಸಂಭ್ರಮ ಸಡಗರದಿಂದ ಭಕ್ತರು ತೇರು ಎಳೆದರು. ರಥದ ಮೇಲೆ ಉತ್ತತ್ತಿ, ಬಾಳೆಹಣ್ಣು ಎಸೆದು ಭಕ್ತರು ಹರಕೆ ತೀರಿಸಿದರು. ಜಾತ್ರಾ ನಿಮಿತ್ತ ಬಂದ ಭಕ್ತರಿಗೆ ಮಠದ ಆವರಣದಲ್ಲಿ ಪ್ರಸಾದ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು.
ಸಿಪಿಐ ರಾಜೇಸಾಬ ನದಾಫ್, ಪಿಎಸ್‍ಐ ಗಜಾನನ ಬಿರಾದಾರ ನೇತೃತ್ವದಲ್ಲಿ ಬಂದೋಬಸ್ತ್ ಒದಗಿಸಲಾಗಿತ್ತು. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಟ್ರಸ್ಟ್ ಕಮಿಟಿ ಅಧ್ಯಕ್ಷ ರಾಜಶೇಖರ ಸಾಹು ಸೀರಿ, ಉಪಾಧ್ಯಕ್ಷ ಸೋಮಣ್ಣ ಕಲ್ಲಾ, ಷಣ್ಮುಖಪ್ಪಗೌಡ ಹಿರೇಗೌಡ, ಸಂಗಣಗೌಡ ಪಾಟೀಲ ಗುಳ್ಳಾಳ, ಷಣ್ಮುಖಪ್ಪ ಸಾಹು ಗೋಗಿ, ಷಣ್ಮುಖಪ್ಪಗೌಡ ಮಾಲಿಪಾಟೀಲ, ಶರಣಬಸವ ಕಲ್ಲಾ, ನೀಲಕಂಠ ಅವಂಟಿ, ರವಿ ಕೋಳಕೂರ, ದಯಾನಂದ ಪೆÇಲೀಸ್‍ದೇವರಮನಿ, ಮಲ್ಲಿಕಾರ್ಜುನ ಪಾಟೀಲ ಬಿರಾಳ, ಈರಣ್ಣ ಬನ್ನೆಟ್ಟಿ, ಸಿದ್ದಣ್ಣಗೌಡ ಹಳಿಮನಿ, ಶಿವಾನಂದ ಮಠಪತಿ, ಅಖಂಡು ಶಿವಣಿ, ವಿಶ್ವನಾಥ ಇಮ್ಮಣ್ಣಿ, ದಂಡಪ್ಪಗೌಡ ಪೆÇಲೀಸ್ ಪಾಟೀಲ, ಗುರುಲಿಂಗಯ್ಯಸ್ವಾಮಿ ಯನಗುಂಟಿ, ರವಿ ಕೋಳಕೂರ, ಶಿವಕುಮಾರ ಕಲ್ಲ, ಅನೀಲ ರಾಂಪೂರ, ಈರಣ್ಣ ಭೂತಪೂರ, ಜಗದೀಶ ವಿಶ್ವಕರ್ಮ, ನಾಗರಾಜ ಬುಟ್ನಾಳ, ಸುರೇಶ ಹಳ್ಳಿ, ಚಂದ್ರು ಸೇರಿ ಸಹಸ್ರಾರು ಭಕ್ತರು ಇದ್ದರು