
ಭಾಲ್ಕಿ :ಮೇ.21: ತಾಲೂಕಿನ ಗಡಿಭಾಗದ ಮೇಹಕರ ಗ್ರಾಮದಲ್ಲಿ ರಾಜೇಶ್ವರ ಶಿವಾಚಾರ್ಯರ ಪಟ್ಟಾಭಿμÉೀಕ ರಜತ ಮಹೋತ್ಸವ ಅಂಗವಾಗಿ ಮಂಗಳವಾರ ಬಾಳೆಹೊನ್ನೂರಿನ ರಂಭಾಪುರಿ ವೀರಗಂಗಾಧರ ಸೋಮೇಶ್ವರ ಸ್ವಾಮೀಜಿ ಅವರ ಬೆಳ್ಳಿ ಪಲ್ಲಕ್ಕಿ ಉತ್ಸವ ಅದ್ಧೂರಿಯಾಗಿ ನಡೆಯಿತು.
ರಾಜೇಶ್ವರ ಶಿವಾಚಾರ್ಯ ನೇತೃತ್ವದಲ್ಲಿ ಡೋಲು ವಾದ್ಯ ಮೇಳದೊಂದಿಗೆ ಬೆಳ್ಳಿ ಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ರಸ್ತೆ, ಬೀದಿಗಳಲ್ಲಿ ಸಂಭ್ರಮದಿಂದ ಸಾಗಿತು. ಮಹಿಳೆಯರು ಪೂರ್ಣಕುಂಭ ಹೊತ್ತು ಸಾಗಿದರು. ಮೆರವಣಿಗೆಯ ಮಾರ್ಗದುದ್ದಕ್ಕೂ ಸಾವಿರಾರು ಸಂಖ್ಯೆಯ ಭಕ್ತರು ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಉತ್ಸವದ ಅಂಗವಾಗಿ ಗ್ರಾಮದ ಬೀದಿಗಳನ್ನು ಸ್ವಚ್ಛಗೊಳಿಸಿ, ರಂಗೋಲಿ ಬಿಡಿಸಿ ಸಿಂಗರಿಸಲಾಗಿತ್ತು.