Home ಜಿಲ್ಲೆ ಅಹವಾಲು ನಿಮ್ಮದು, ಪರಿಹಾರ ನಮ್ಮದು

ಅಹವಾಲು ನಿಮ್ಮದು, ಪರಿಹಾರ ನಮ್ಮದು

ಗದಗ,ಸೆ.೬: ಜನಸಾಮಾನ್ಯರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸಂಬAಧಿಸಿದ ಇಲಾಖೆಗಳ ಮೂಲಕ ತ್ವರಿತವಾಗಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾ ಸೇವಾ ಇಲಾಖೆಯಿಂದ ಹಮ್ಮಿಕೊಳ್ಳಲಾಗಿರುವ ಪ್ರಜಾ ಸೇವಾ ಅಭಿಯಾನ?ಜನ ಸಂಪರ್ಕ ಸಭೆಯ ಜಿಲ್ಲಾ ಮಟ್ಟದ ಸಭೆ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರ ನೇತೃತ್ವದಲ್ಲಿ ನಡೆಯಿತು.
ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ' ಹಾಗೂ ಅಹವಾಲು ನಿಮ್ಮದು, ಪರಿಹಾರ ನಮ್ಮದು’ ಎಂಬ ಆಶಯದೊಂದಿಗೆ ಆಯೋಜಿಸಲಾಗಿದ್ದ ಸಭೆಯಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ನೇರವಾಗಿ ಮಂಡಿಸಿದರು. ವಿವಿಧ ಇಲಾಖೆಗಳ ವ್ಯಾಪ್ತಿಗೆ ಸಂಬAಧಿಸಿದAತೆ ಸಾರ್ವಜನಿಕರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಹವಾಲುಗಳು ಸಲ್ಲಿಕೆಯಾಗಿದ್ದು, ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಸಮಾಧಾನದಿಂದ ಆಲಿಸಿ, ಸಂಬAಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಕೆಲವು ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲಾಯಿತು.
ಸಭೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಮಾತನಾಡಿ, ಜನಸಾಮಾನ್ಯರ ಬಳಿಗೆ ಸರ್ಕಾರದ ಸೇವೆಗಳನ್ನು ತಲುಪಿಸುವುದರ ಜೊತೆಗೆ, ಅವರ ಸಮಸ್ಯೆಗಳನ್ನು ನೇರವಾಗಿ ಅರಿತು ಪರಿಹಾರ ಒದಗಿಸುವ ಉದ್ದೇಶದಿಂದ ಪ್ರಜಾ ಸೇವಾ ಅಭಿಯಾನದ ಜನ ಸಂಪರ್ಕ ಸಭೆಯನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.
ಸಾಮಾನ್ಯವಾಗಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ವಿವಿಧ ಕಚೇರಿಗಳಿಗೆ ತೆರಳಿ ಅರ್ಜಿ ಸಲ್ಲಿಸಿ, ಹಲವು ಬಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇರುತ್ತದೆ. ಇದನ್ನು ತಪ್ಪಿಸಿ, ಸರ್ಕಾರವೇ ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈ ಅಭಿಯಾನ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪ್ರತಿ ಅರ್ಜಿಗೂ ಪರಿಹಾರ ದೊರೆಯುವವರೆಗೆ ಅನುಸರಣೆ ಪ್ರತಿ ಮನೆಗೂ ಅಹವಾಲು ಸಲ್ಲಿಸಲು ಅರ್ಜಿ ನಮೂನೆಗಳನ್ನು ನೀಡಲಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅರ್ಜಿ ನಮೂನೆಯಲ್ಲಿ ಸ್ಪಷ್ಟವಾಗಿ ನಮೂದಿಸಿ ಸಲ್ಲಿಸಬೇಕು. ಸಾರ್ವಜನಿಕರಿಂದ ಸ್ವೀಕರಿಸುವ ಪ್ರತಿಯೊಂದು ಅರ್ಜಿಯನ್ನು ಸಂಬAಧಿಸಿದ ಇಲಾಖೆಯ ಗಮನಕ್ಕೆ ತಂದು, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು. ಅರ್ಜಿಯನ್ನು ಸ್ವೀಕರಿಸಿ ಅಲ್ಲಿಗೇ ಕೈಬಿಡುವ ವ್ಯವಸ್ಥೆ ಇದಲ್ಲ. ಪ್ರತಿ ಅರ್ಜಿಯೂ ಸಂಬAಧಿಸಿದ ಸರ್ಕಾರದ ಹಂತಕ್ಕೆ ಹೋಗಬೇಕು. ಅರ್ಜಿಯ ಕುರಿತು ಕೈಗೊಂಡ ಕ್ರಮ ಹಾಗೂ ಸಮಸ್ಯೆಗೆ ದೊರೆತ ಪರಿಹಾರದ ಬಗ್ಗೆ ಪರಿಶೀಲನೆ ನಡೆಸಲಾಗುವುದು’ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
ಜನ ಸಂಪರ್ಕ ಸಭೆಯಲ್ಲಿ ಸ್ವೀಕರಿಸಲಾದ ಅಹವಾಲುಗಳ ಮೇಲೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರತಿ ಶನಿವಾರ ಪರಿಶೀಲನೆ ನಡೆಸಲಾಗುವುದು. ಸಮಸ್ಯೆ ಬಗೆಹರಿಯುವವರೆಗೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರವಾಗಿ ಅನುಸರಣೆ ಮಾಡಲಾಗುವುದು. ಹೀಗಾಗಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಅವರು ಹೇಳಿದ