
ಭಾಲ್ಕಿ:ಮೇ.೧೭: ಇಲ್ಲಿಯ ಹಿರೇಮಠ ಸಂಸ್ಥಾನದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಆಗಿ ಸೇವೆ ಸಲ್ಲಿಸಿ ಲೋಕಾಯುಕ್ತ ಇಲಾಖೆಗೆ ವರ್ಗಾವಣೆಗೊಂಡ ಶಿವಾನಂದ ಪವಾಡಶೆಟ್ಟಿ ದಂಪತಿಗಳನ್ನು ಶನಿವಾರ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಸನ್ಮಾನಿಸಿ, ಆಶೀರ್ವದಿಸಿದರು.
ಸನ್ಮಾನ ಸ್ವೀಕರಿಸಿದ ಶಿವಾನಂದ ಪವಾಡಶೆಟ್ಟಿ ಮಾತನಾಡಿ, ಗಡಿಭಾಗದಲ್ಲಿ ಶರಣರು ನಡೆದಾಡಿದ ಭೂಮಿಯಲ್ಲಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು ನನ್ನ ಪುಣ್ಯವೆಂದು ಭಾವಿಸಿದ್ದೇನೆ.
ಸೇವೆಯುದ್ದಕ್ಕೂ ಈ ಭಾಗದ ಜನರು ತೋರಿರುವ ಪ್ರೀತಿ, ವಿಶ್ವಾಸ ಎಂದಿಗೂ ಮರೆಯುವುದಿಲ್ಲ. ಎಲ್ಲರ ಸಹಕಾರದಿಂದ ಎರಡುವರೇ ವಷÀðಗಳ ಕಾಲ ಸೇವೆ ಸಲ್ಲಿಸಿದ್ದು ತೃಪ್ತಿ ತಂದಿದೆ ಎಂದು ತಿಳಿಸಿದರು.
ಸಾನ್ನಿಧ್ಯ ವಹಿಸಿದ್ದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಈ ಭಾಗದಲ್ಲಿ ಸುಮಾರು ಮೂರು ವರ್ಷಗಳ ಕಾಲ ಡಿವೈಎಸ್ಪಿಯಾಗಿ ಶಿವಾನಂದ ಪವಾಡಶೆಟ್ಟಿ ಉತ್ತಮವಾಗಿ ಸೇವೆ ಸಲ್ಲಿಸಿದ್ದಾರೆ.
ಇದೀಗ ಲೋಕಾಯುಕ್ತ ಇಲಾಖೆಗೆ ವರ್ಗವಾಣೆಗೊಂಡಿರುವ ಅವರು ಅಲ್ಲಿಯು ಉತ್ತಮ ಸೇವೆ ಸಲ್ಲಿಸಿ ಆ ಇಲಾಖೆಗೆ ಇನ್ನಷ್ಟು ಗೌರವ ತಂದು ಕೊಡುವ ವಿಶ್ವಾಸ ತಮಗಿದೆ. ಉತ್ತಮ ಆರೋಗ್ಯ ಕಾಪಾಡಿಕೊಂಡು ಜನರಿಗೆ ಒಳ್ಳೆಯ ಸೇವೆ ಒದಗಿಸಲಿ ಎಂದು ಹಾರೈಸಿದರು.ಈ ಸಂದರ್ಭದಲ್ಲಿ ಗುರುಪ್ರಸಾದ ಪ್ರೌಢ ಶಾಲೆಯ ಮುಖ್ಯಗುರು ಬಾಬು ಬೆಲ್ದಾಳ ಇದ್ದರು.
ಈ ಭಾಗದಲ್ಲಿ ಡಿವೈಎಸ್ಪಿ ಆಗಿ ಶಿವಾನಂದ ಪವಾಡಶೆಟ್ಟಿ ಅವರು ಉತ್ತಮವಾಗಿ ಸೇವೆ ಸಲ್ಲಿಸಿದ್ದಾರೆ. ಸೇವೆಯುದ್ದಕ್ಕೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಎಲ್ಲರಿಗೂ ನ್ಯಾಯ ಒದಗಿಸುವ ಪ್ರಯತ್ನ ಮಾಡಿದ್ದಾರೆ. ಮುಂದೆ ಲೋಕಾಯುಕ್ತ ಇಲಾಖೆಯಲ್ಲಿಯು ಕೂಡ ಒಳ್ಳೆಯ ಸೇವೆ ಸಲ್ಲಿಸಲಿ.
- ಗುರುಬಸವ ಪಟ್ಟದ್ದೇವರು ಹಿರೇಮಠ ಸಂಸ್ಥಾನ ಭಾಲ್ಕಿ

























